-

ಅವಿಭಜಿತ ದ.ಕ. ಜಿಲ್ಲಾ ಜನಪ್ರತಿನಿಧಿಗಳ ‘ಹೊಳಪು’ ಉದ್ಘಾಟನೆ

ಕ್ರೀಡೆಯಿಂದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ: ಸಚಿವ ಅಶ್ವತ್ಥ ನಾರಾಯಣ

-

ಕೋಟ, ನ.26: ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಎಲ್ಲಾ ರೀತಿಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ -ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಡಾ.ಅಶ್ವತ್ಥ ನಾರಾಯಣ ಸಿ.ಎನ್. ಹೇಳಿದ್ದಾರೆ.

ಕೋಟ ವಿವೇಕ ಹೈಸ್ಕೂಲ್ ಆವರಣದಲ್ಲಿ, ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಇವರ ಸಹಯೋಗದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಉಡುಪಿ ಮತ್ತು  ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್‌ ರಾಜ್ ಮತ್ತು ನಗರ ಸ್ಥಳಿಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಶನಿವಾರ ಉದ್ಘಾಟಿಸಿ ಅವರು  ಮಾತನಾಡಿದರು.

ಪ್ರತಿಯೊಬ್ಬ ವ್ಯಕ್ತಿಗೆ ಎಲ್ಲಾ ರೀತಿಯ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳ ನಿವಾರಣೆ ಸೇರಿದಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನು  ಎದುರಿಸಲು ಅಗತ್ಯವಿರುವ  ಶಕ್ತಿಯನ್ನು  ಕ್ರೀಡೆಯಲ್ಲಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಡೆಯಬಹುದಾಗಿದೆ. ನಿರಂತರ ಇಂತಹ ಚಟುಚಟಿಕೆಯಲ್ಲಿ ಭಾಗವಹಿಸುವ ಮೂಲಕ ಸಂವಿಧಾನದ ಆಶಯದಂತೆ  ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ, ಸಮಾನತೆ ಮತ್ತು  ಅಭಿವ್ಯಕ್ತಿ  ಸ್ವಾತಂತ್ರ್ಯವನ್ನು  ಕ್ರೀಡೆಯ ಮೂಲಕ ಸಮರ್ಥವಾಗಿ ನೀಡಲು ಸಾಧ್ಯವಿದೆ ಎಂದ ಅವರು, ಸಂವಿಧಾನದ ಆಶಯಗಳಿಗೆ ಎಲ್ಲರೂ ಬದ್ಧರಾಗಿರಬೇಕು ಎಂದರು.

ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು. ಭಟ್ಕಳ ಶಾಸಕ ಸುನಿಲ್ ನಾಯ್ಕ್ ಕ್ರೀಡಾಕೂಟದ ಪಥಸಂಚಲನಕ್ಕೆ ಚಾಲನೆ ನೀಡಿದರೆ, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಭಾಗವಹಿಸುವ ಕ್ರೀಡಾಪಟುಗಳಿಗೆ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಧ್ವಜಾರೋಹಣ ನೆರವೇರಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ನ.26ರ ಸಂವಿಧಾನ ದಿನದ ಪ್ರಯುಕ್ತ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.

ಆತಿಥೇಯ ಕೋಟತಟ್ಟು ಗ್ರಾಪಂ ಅಧ್ಯಕ್ಷೆ ಅಶ್ವಿನಿ ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಹೊಳಪು-2022ರ ಸಂಚಾಲಕ ಕೋಟ ಶ್ರೀನಿವಾಸ ಪೂಜಾರಿ ಉಭಯ ಜಿಲ್ಲೆಗಳ ಅತ್ಯುತ್ತಮ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿಗಳನ್ನು ವಿತರಿಸಿದರು.

ಉಡುಪಿ ಶಾಸಕ ರಘುಪತಿ ಭಟ್, ಬೈಂದೂರು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು.

ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟದ ಗೌರವಾಧ್ಯಕ್ಷ ಆನಂದ್ ಸಿ ಕುಂದರ್ ಅತಿಥಿಗಳನ್ನು ಸ್ವಾಗತಿಸಿ ದರು. ಪಿಡಿಓ ಜಯರಾಂ ಶೆಟ್ಟಿ ವಂದಿಸಿದರು. ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು.

ದ.ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಗ್ರಾಮ ಪಂಚಾಯತ್‌ಗಳ ಸದಸ್ಯರು, ಅದೇ ರೀತಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳ ಸದಸ್ಯರು ಒಂದು ದಿನದ ಈ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ   ಉತ್ಸಾಹದಿಂದ ಭಾಗವಹಿಸಿದರು. ಮೊದಲು ಇವರೆಲ್ಲರೂ ಅಕರ್ಷಕ ಪಥ ಸಂಚಲನ ನಡೆಸಿದರು. ಸ್ಥಳೀಯ ಕಲೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಸ್ಥಬ್ದಚಿತ್ರಗಳು ಮತ್ತು ವೇಷಭೂಷಣಗಳು ಪಥ ಸಂಚಲನದಲ್ಲಿ ಗಮನ ಸೆಳೆದವು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top