Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ಸರಣಿ ಅಪಘಾತ; ಲಾರಿ ಪಲ್ಟಿ, 2...

ಉಡುಪಿ | ಸರಣಿ ಅಪಘಾತ; ಲಾರಿ ಪಲ್ಟಿ, 2 ಕಾರುಗಳು ಜಖಂ

5 Dec 2022 11:40 AM IST
share
ಉಡುಪಿ | ಸರಣಿ ಅಪಘಾತ; ಲಾರಿ ಪಲ್ಟಿ, 2 ಕಾರುಗಳು ಜಖಂ

ಉಡುಪಿ, ಡಿ.5: ಭತ್ತದ ಮೂಟೆ ಹೊತ್ತು ಸಾಗುತ್ತಿದ್ದ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಎರಗಿದ ಪರಿಣಾಮ ಎರಡು ಕಾರುಗಳು ಜಖಂಗೊಂಡ ಘಟನೆ ರವಿವಾರ ತಡರಾತ್ರಿ ಕೆಳಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಉಡುಪಿ ಕಡೆಯಿಂದ ಹೆಬ್ರಿ ಕಡೆಗೆ ಹೋಗುತ್ತಿದ್ದ ಭತ್ತದ ಮೂಟೆ ಹೊತ್ತ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಎರಡು ಟೂರಿಸ್ಟ್ ಕಾರುಗಳ ಮೇಲೆ ಎರಗಿತು. ಇದರ ಪರಿಣಾಮ ಒಂದು ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಭತ್ತದ ಮೂಟೆ ಲಾರಿಯಿಂದ ಬೇರ್ಪಟ್ಟು ರಸ್ತೆಯೆಲ್ಲ ಚೆಲ್ಲಾಪಿಳ್ಳಿಯಾಗಿದೆ ಎಂದು ತಿಳಿದು ಬಂದಿದೆ. 

ಸ್ಥಳೀಯರ ಆಕ್ರೋಶ:  ಉಡುಪಿಯಿಂದ ಪರ್ಕಳದ ಕಡೆ ಸಂಚರಿಸುವ ಹೊರ ಜಿಲ್ಲೆ ಹಾಗೂ ರಾಜ್ಯಗಳ ವಾಹನ ಚಾಲಕರಿಗೆ ಕೆಳ ಪರ್ಕಳದಲ್ಲಿ ರಸ್ತೆ ಗೊಂದಲ ಉಂಟಾಗುತ್ತಿದೆ. ಹೊಸ ಕಾಮಗಾರಿ ನಡೆಯುವ ರಸ್ತೆಯಲ್ಲಿ ಕಳೆದ 15 ದಿನಗಳಿಂದ ವಾಹನಗಳಿಗೆ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ. ಆದರೆ ಇಲ್ಲಿ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ ಮತ್ತು ಇಲ್ಲಿದ್ದ ರಕ್ಷಣಾ ಬ್ಯಾರಿಕೇಡ್ಗಳನ್ನು ತೆಗೆಯಲಾಗಿದೆ. ಸೂಕ್ತ ಬೆಳಕಿನ ವ್ಯವಸ್ಥೆಯು ಇಲ್ಲ. ವಾಹನ ಚಾಲಕರು ಹಳೆ ರಸ್ತೆಯಲ್ಲಿ ಸಂಚರಿಸುವುದೇ ಹೊಸ ರಸ್ತೆಯಲ್ಲಿ ಸಂಚರಿಸುವುದೇ ಎಂಬ ಗೊಂದಲ ಉಂಟಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಹೊಸ ರಸ್ತೆಯಲ್ಲಿ ವಾಹನ ಸಂಚಾರದಿಂದ ಧೂಳು ಏಳುತ್ತವೆ ಎಂದು ಸ್ಥಳೀಯರು ರವಿವಾರ ಮಣೆಪಾಲ ಠಾಣೆಗೆ ದೂರು ನೀಡಿದ್ದಾರೆ. ಹೊಸ ರಸ್ತೆಯ ಕಾಮಗಾರಿಯೇ ನಡೆಸುತ್ತಿರುವಾಗಲೇ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿರುವುದೇ ಇಲ್ಲಿನ ಸಮಸ್ಯೆಗಳಿಗೆ ಕಾರಣ. ಕೆಳಪರ್ಕದ ಹಳೆ ರಸ್ತೆಗೆ ಸಂಪರ್ಕಿಸುವ ಎರಡು ರಸ್ತೆಗಳು ಸಂಪೂರ್ಣ ಹಾಳಾಗಿದೆ. ಹೀಗಾಗಿ ಇಲ್ಲಿ ಹಳೆ ರಸ್ತೆ ಯಾವುದು ಹೊಸ ರಸ್ತೆ ಯಾವುದು ಗೊತ್ತಾಗುವುದಿಲ್ಲ. ಶಾಸಕರು 15 ದಿನದೊಳಗೆ ಕಾಂಕ್ರೀಟ್ ರಸ್ತೆಯನ್ನು ಹಳೆ ರಸ್ತೆ ಸಂಪರ್ಕಿಸುವಂತೆ ಮಾಡಿ ಕೊಡು ವುದಾಗಿ ಭರವಸೆ ನೀಡಿ ಆರು ತಿಂಗಳೇ ಕಳೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

share
Next Story
X