ಸೀರೆಗೆ ವೈಧ್ಯಮಯ ಕುಚ್ಛು ಕಟ್ಟುವ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಮಣಿಪಾಲ, ಡಿ.5: ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ನಲ್ಲಿ ಡಿ. 19 ರಿಂದ 24ರವರೆಗೆ ಒಟ್ಟು ಆರು ದಿನಗಳ ಕಾಲ ಸೀರೆಗಳಿಗೆ ವೈಧ್ಯಮಯ ಕುಚ್ಛು ಕಟ್ಟುವ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಸ್ವ-ಉದ್ಯೋಗ ಮಾಡಲು ಆಸಕ್ತಿ ಇರುವ ಮಹಿಳೆಯರು/ಯುವತಿಯರು ಈ ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳ ಬಹುದು. ತರಬೇತಿಯ ಸಮಯದಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟದ ವ್ಯವಸ್ಥೆ ಇದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮತ್ತು ವಿದ್ಯಾರ್ಹತೆಯನ್ನು ಬಿಳಿ ಹಾಳೆಯಲ್ಲಿ ಬರೆದು ಡಿ.14ರೊಳಗೆ ಭಾರತೀಯ ವಿಕಾಸ ಟ್ರಸ್ಟ್, ಅನಂತ, ಪೆರಂಪಳ್ಳಿ, ಅಂಬಾಗಿಲು ರಸ್ತೆ, ಕುಂಜಿಬೆಟ್ಟು ಅಂಚೆ, ಉಡುಪಿ - 576102 ಇಲ್ಲಿಗೆ ಕಳುಹಿಸಿಕೊಡಬಹುದು ಅಥವಾ ದೂರವಾಣಿ ಸಂಖ್ಯೆ: 8970891031 ಸಂಪರ್ಕಿಸುವ ಮೂಲಕ ದೃಢೀಕರಿಸಬಹುದು ಎಂದು ಸಂಸ್ಥೆ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
Next Story