ಉಡುಪಿ: ಮ್ಯೂಚುವಲ್ ಫಂಡ್ ಹೆಸರಿನಲ್ಲಿ ವಂಚನೆ
ಉಡುಪಿ, ಡಿ.6: ಮ್ಯೂಚುವಲ್ ಫಂಡ್ನಲ್ಲಿ ಹಣ ಹಾಕಿದರೆ ದ್ವಿಗುಣ ಮಾಡಿಕೊಡುವುದಾಗಿ ಹೇಳಿ ಸಾವಿರಾರು ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನುಷ್ ರವಿಶಂಕರ್ ಎಂಬವರಿಗೆ ಅಪರಿಚಿತರೊಬ್ಬರು ಕರೆ ಮಾಡಿ ಮ್ಯೂಚುವಲ್ ಫಂಡ್ನಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹಣ ದ್ವಿಗುಣಗೊಳಿಸಿ ನೀಡುವುದಾಗಿ ತಿಳಿಸಿದ್ದರು. ಇದನ್ನು ನಂಬಿದ ಅನುಷ್, ಗೂಗಲ್ ಪೇ ಮೂಲಕ ಅಪರಿಚಿತ ವ್ಯಕ್ತಿ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ಒಟ್ಟು 78,500 ರೂ. ಹಣವನ್ನು ಪಾವತಿಸಿದ್ದರು. ಆದರೆ ಆ ವ್ಯಕ್ತಿ ಅನುಷ್ ಹೂಡಿಕೆ ಮಾಡಿದ ಹಣವನ್ನು ವಾಪಾಸು ನೀಡದೇ ವಂಚನೆ ಎಸಗಿರುವುದಾಗಿ ದೂರಲಾಗಿದೆ.
Next Story