Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೈಂದೂರು-ರಾಣಿಬೆನ್ನೂರು ರಾ.ಹೆದ್ದಾರಿ...

ಬೈಂದೂರು-ರಾಣಿಬೆನ್ನೂರು ರಾ.ಹೆದ್ದಾರಿ ಅಭಿವೃದ್ಧಿಗೆ 1012.75 ಕೋಟಿ ರೂ.ಮಂಜೂರು

21 Dec 2022 8:31 PM IST
share

ಉಡುಪಿ: ಬೈಂದೂರು- ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿ 766(ಸಿ) ಅಭಿವೃದ್ಧಿಗೆ 1012.75 ಕೋಟಿ ರೂ. ಅನುದಾನ ಮಂಜೂರಾತಿ  ಸಿಕ್ಕಿದ್ದು, ಇದರೊಂದಿಗೆ ಶಿವಮೊಗ್ಗ ನಗರ ಉತ್ತರ ಭಾಗದ ಬೈಪಾಸ್ ರಸ್ತೆಗೆ ಒಪ್ಪಿಗೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪ್ರಮುಖ ರಾಜ್ಯ ಹೆದ್ದಾರಿಗಳ ಅಭಿವೃದ್ಧಿಗೆ ಅನುಮೋದನೆ ದೊರಕಿದೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.

ಕರಾವಳಿಯ ಬೈಂದೂರಿನಿಂದ ಕೊಲ್ಲೂರು, ನಗರ, ಹೊಸನಗರ, ಆನಂದಪುರ, ಶಿಕಾರಿಪುರ, ಮಾಸೂರು, ರಟ್ಟೆಹಳ್ಳಿ, ಮೂಲಕ ರಾಣೆಬೆನ್ನೂರಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿ 766(ಸಿ)ಯನ್ನು ಸಂಪೂರ್ಣವಾಗಿ ಅಗಲೀ ಕರಣ ಮಾಡಿ ಅಭಿವೃದ್ಧಿಗೊಳಿಸಲು ಕೇಂದ್ರ ಭೂಸಾರಿಗೆ ಸಚಿವರಿಗೆ ಮನವಿ ಮಾಡಿದ ಫಲವಾಗಿ ಕೇಂದ್ರ ಭೂಸಾರಿಗೆ ಮಂತ್ರಾಲಯವು ಸಕಾರಾತ್ಮಕವಾಗಿ ಸ್ಪಂದಿಸಿ ಕಳೆದ ವರ್ಷ ಹೆದ್ದಾರಿಯ 7 ಕಿರು ಸೇತುವೆಗಳ ಹಾಗು 27.70 ಕಿ.ಮೀ ಉದ್ದದ ದ್ವಿಪಥ ರಸ್ತೆ ನಿರ್ಮಾಣಕ್ಕೆ ಒಟ್ಟು 238.70 ಕೋಟಿ ರೂ.ಗಳ ಡಿಪಿಆರ್‌ಗೆ ಮಂಜೂರಾತಿ ನೀಡಿದ್ದು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವರ್ಷ 2022-23ನೇ ಸಾಲಿಗೆ ಬೈಂದೂರಿನಿಂದ ಹಾಲ್ಕಲ್ ಜಂಕ್ಷನ್ ಮತ್ತು ಕೊಲ್ಲೂರು ಮೂಲಕ ನಾಗೋಡಿವರೆಗಿನ 40.40 ಕಿ.ಮೀ ಉದ್ದದ ರಸ್ತೆಯನ್ನು ದ್ವಿಪಥ ರಸ್ತೆಯನ್ನಾಗಿ ಅಗಲೀಕರಣ ಮಾಡಿ ಅಭಿವೃದ್ಧಿಗೊಳಿಸುವ  394.05 ಕೋಟಿ ರೂ. ಮೊತ್ತದ ಡಿಪಿಆರ್‌ಗೆ ಕೇಂದ್ರ ಭೂಸಾರಿಗೆ ಮಂತ್ರಾಲಯ ಮಂಜೂರಾತಿ ನೀಡಿದೆ.

ಅಲ್ಲದೆ ಈ ಹೆದ್ದಾರಿಯ ಶಿಕಾರಿಪುರ ಪಟ್ಟಣಕ್ಕೆ 6.576 ಕಿ.ಮೀ ಉದ್ದದ ಬೈಪಾಸ್ ರಸ್ತೆ ನಿರ್ಮಾಣ ಮಾಡಲು 66.44 ಕೋಟಿ ರೂ.ಗಳ ಡಿಪಿಆರ್ ಹಾಗು ಹೊಸನಗರ ಮಾವಿನಕೊಪ್ಪ ವೃತ್ತದಿಂದ ಹೊಸನಗರ ಬೈಪಾಸ್, ಶರಾವತಿ ಹಿನ್ನೀರಿಗೆ 1.54 ಕಿ.ಮೀ ಮತ್ತು 0.72 ಕಿ.ಮೀ ಉದ್ದದ 2 ಭಾರೀ ಸೇತುವೆಗಳ ನಿರ್ಮಾಣದೊಂದಿಗೆ ಆಡುಗೋಡಿವರೆಗೆ 13.82 ಕಿ.ಮೀ ಉದ್ದದ ಬದಲೀ ರಸ್ತೆ ನಿರ್ಮಾಣ ಮಾಡುವ 313.56 ಕೋಟಿ ರೂ.ಗಳ ಡಿಪಿಆರ್‌ಗೆ ಮಂಜೂರಾತಿ ನೀಡಲಾಗಿದೆ ಎಂದು ವಿವರಿಸಿದ್ದಾರೆ.

ಬಾಕಿ ಉಳಿದ ಹೆದ್ದಾರಿ ಅಗಲೀಕರಣ ಮಾಡಲು ಡಿಪಿಆರ್ ತಯಾರಿಸಲು ಕೇಂದ್ರ ಭೂಸಾರಿಗೆ ಮಂತ್ರಾಲಯವು ಆದೇಶಿಸಿದೆ. ಈ ಹೆದ್ದಾರಿಯನ್ನು ಸಂಪೂರ್ಣ ಅಗಲೀಕರಣ ಮಾಡಿ ಅಭಿವೃದ್ಧಿಗೊಳಿಸಲು ಕ್ರಮವಹಿಸಿ ಈ ವರೆಗೆ ಒಟ್ಟು 1012.75 ಕೋಟಿ ರೂ.ಗಳ ಅನುದಾನವನ್ನು ಮಂಜೂರು ಮಾಡಿದ ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿಯವರಿಗೆ ಸಂಸದ ಬಿ.ವೈ.ರಾಘವೇಂದ್ರ ಖುದ್ದಾಗಿ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

share
Next Story
X