Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂತೆಕಟ್ಟೆ: 21.26 ಕೋಟಿ ರೂ. ವೆಚ್ಚದ...

ಸಂತೆಕಟ್ಟೆ: 21.26 ಕೋಟಿ ರೂ. ವೆಚ್ಚದ ಓವರ್ ಪಾಸ್‌ಗೆ ಶಿಲಾನ್ಯಾಸ

ಶೀಘ್ರ ಕಾಮಗಾರಿ ಮುಕ್ತಾಯಕ್ಕೆ ಅಗತ್ಯ ಕ್ರಮ:ಶೋಭಾ

12 Jan 2023 10:14 PM IST
share
ಸಂತೆಕಟ್ಟೆ: 21.26 ಕೋಟಿ ರೂ. ವೆಚ್ಚದ ಓವರ್ ಪಾಸ್‌ಗೆ ಶಿಲಾನ್ಯಾಸ
ಶೀಘ್ರ ಕಾಮಗಾರಿ ಮುಕ್ತಾಯಕ್ಕೆ ಅಗತ್ಯ ಕ್ರಮ:ಶೋಭಾ

ಉಡುಪಿ: ಉಡುಪಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆಯಲ್ಲಿ ವಾಹನ ದಟ್ಟಣೆ ಮತ್ತು ಅಪಘಾತಗಳನ್ನು ತಪ್ಪಿಸಲು ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ 21.26 ಕೋಟಿ ರೂ. ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ ಮಾಡಲಾಗುತ್ತಿದ್ದು, ಶೀಘ್ರವಾಗಿ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಗುರುವಾರ ಸಂಜೆ ನಗರದ ಸಂತೆಕಟ್ಟೆ ಜಂಕ್ಷನ್‌ನಲ್ಲಿ ಓವರ್ ಪಾಸ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂತೆಕಟ್ಟೆ ಜಂಕ್ಷನ್ ಅತ್ಯಂತ ವಾಹನ ದಟ್ಟಣೆ ಯಿಂದ ಕೂಡಿದ್ದು ಪ್ರತಿ ದಿನ 4500ಕ್ಕೂ ಅಧಿಕ ವಾಹನಗಳು ಇಲ್ಲಿ ಸಂಚರಿಸುತ್ತಿವೆ. ಇದನ್ನು ಪ್ರಮುಖ ಬ್ಲಾಕ್ ಸ್ಪಾಟ್ ಆಗಿ ಗುರುತಿಸಲಾಗಿದೆ. ಈ ಭಾಗದಲ್ಲಿ ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಓವರ್ ಪಾಸ್ ನಿರ್ಮಾಣ ಅತೀ ಅವಶ್ಯಕವಾಗಿದ್ದು, ಹಲವು ವರ್ಷಗಳಿಂದ ಇದು ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿತ್ತು ಎಂದರು.

ಈ ಕಾಮಗಾರಿಯನ್ನು ದಿನದಲ್ಲಿ 3 ಪಾಳಿಯಂತೆ ಕಾರ್ಯ ನಿರ್ವಹಿಸಿ ತ್ವರಿತಗತಿಯಲ್ಲಿ ಮುಕ್ತಾಯಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳಿಗೆ ಸೂಚಿಸಿದ ಸಚಿವೆ, ರಾಷ್ಟ್ರೀಯ ಹೆದ್ದಾರಿಯ ಅಂಬಲಪಾಡಿ ಯಲ್ಲಿ ಸಹ 22 ಕೋಟಿ ರೂ. ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ ಕೈಗೊಳ್ಳಲಾಗುವುದು ಎಂದರು.

ಸಂತೆಕಟ್ಟೆಯಲ್ಲಿ ಕಾಮಗಾರಿ ಮುಕ್ತಾಯವಾಗುವವರೆಗೂ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ.ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಾಭಿವೃಧಿ ಪ್ರಾಧಿಕಾರಿದ ಅಧ್ಯಕ್ಷ ಮನೋಹರ್ ಕಲ್ಮಾಡಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ, ನಗರಸಭಾ ಉಪಾಧ್ಯಕ್ಷೆ ಲಕ್ಷ್ಮಿ ಮಂಜುನಾಥ್, ಸದಸ್ಯೆ ಮಂಜುಳಾ,  ದಿನೇಶ್ ಪೈ ಹಾಗೂ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ಕಾಮಗಾರಿ ಯಾವುದೇ ಸಮಸ್ಯೆಯಿಲ್ಲದೆ ನಡೆಯಬೇಕು. ಹಾಗೂ ಕಾಮಗಾರಿ ನಡೆಯುವಾಗ ಸಂಚಾರ ದಟ್ಟಣೆ ಸಹಿತ ಸಾರ್ವಜನಿಕರಿಗೆ ಬೇರೆ ಯಾವುದೇ ತೊಡಕಾಗಬಾರದು.  ನಿತ್ಯದ ಎಲ್ಲಾ ಬೆಳವಣಿಗೆ ಕುರಿತು ಪ್ರಾಜೆಕ್ಟ್ ಡೈರೆಕ್ಟರ್ ಅವರು ಜಿಲ್ಲಾಧಿಕಾರಿ ಹಾಗೂ ಎಸ್ಪಿ ಗಮನಕ್ಕೆ ತರಬೇಕು. ಮಳೆಗಾಲದೊಳಗೆ ಒಂದು ಭಾಗದ ಕಾಮಗಾರಿ ಪೂರ್ಣಗೊಳಿಸಲು ದಿನದ 24 ಗಂಟೆಯೂ ಮೂರು ಶಿಪ್ಟ್‌ಗಳಲ್ಲಿ ಕಾಮಗಾರಿ ನಡೆಸಲು ಸೂಚಿಸಲಾಗಿದೆ. ಕಾಮಗಾರಿ ಗುಣಮಟ್ಟದ ಬಗ್ಗೆ ಯಾವುದೇ ರಾಜಿ ಬೇಡ.
-ಕೆ.ರಘುಪತಿ ಭಟ್, ಉಡುಪಿ ಶಾಸಕ.

share
Next Story
X