ಬ್ರಹ್ಮಾವರ: ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು
ಬ್ರಹ್ಮಾವರ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬ್ರಹ್ಮಾವರ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ರಾತ್ರಿ 9 ಗಂಟೆ ಸುಮಾರಿಗೆ ನಡೆದಿರುವುದು ವರದಿಯಾಗಿದೆ.
ಮೃತರನ್ನು ಮೂಲತಃ ಶಿವಮೊಗ್ಗ ನಿವಾಸಿ ಸಮಿತ್ ಕುಮಾರ್(19) ಹಾಗೂ ಸಾಲಿಗ್ರಾಂ ಚಿತ್ರಪಾಡಿ ನಿವಾಸಿ ವಾಗೀಶ್ ಕೆದ್ಲಾಯ(19) ಎಂದು ಗುರುತಿಸಲಾಗಿದೆ. ಇವರಿಬ್ಬರು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು.
ಇವರು ಕಾಲೇಜು ಮುಗಿಸಿ ರಾತ್ರಿ ಮನೆಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಎದುರಿನಲ್ಲಿದ್ದ ಲಾರಿಯನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಬೈಕ್ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿ ಬೈಕ್ ರಸ್ತೆಗೆ ಬಿದ್ದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ಇವರಿಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ನೇಹಿತರಾಗಿದ್ದ ಇವರಿಬ್ಬರು ಪ್ರತಿಭಾನ್ವಿತರು. ಇಬ್ಬರು ಹಗಲಿನಲ್ಲಿ ಸಿಎ ಅಭ್ಯಾಸ ಮಾಡುತ್ತಿದ್ದರೆ, ಸಂಜೆ ತರಗತಿ ಮೂಲಕ ಬಿಕಾಂ ವ್ಯಾಸಂಗ ಮಾಡುತ್ತಿದ್ದರು. ಸುಮಿತ್ ಅವರು ವಾಗೀಶ್ ಮನೆಯಲ್ಲಿದ್ದು ಕಾಲೇಜಿಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ| ಮಂಗಳೂರು: ಯುವತಿ ನಾಪತ್ತೆ