Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ ಸೈಂಟ್ ಮೇರಿಸ್‌ನಲ್ಲಿ ಪ್ರವಾಸಿಗರ...

ಮಲ್ಪೆ ಸೈಂಟ್ ಮೇರಿಸ್‌ನಲ್ಲಿ ಪ್ರವಾಸಿಗರ ಜೊತೆ ಸಿಬ್ಬಂದಿ ಜಟಾಪಟಿ

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್: ವ್ಯಾಪಾಕ ಟೀಕೆ

17 Jan 2023 11:48 PM IST
share
ಮಲ್ಪೆ ಸೈಂಟ್ ಮೇರಿಸ್‌ನಲ್ಲಿ ಪ್ರವಾಸಿಗರ ಜೊತೆ ಸಿಬ್ಬಂದಿ ಜಟಾಪಟಿ
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್: ವ್ಯಾಪಾಕ ಟೀಕೆ

ಉಡುಪಿ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಗುತ್ತಿಗೆ ಆಧಾರಿತ ಸಿಬ್ಬಂದಿಯೊಬ್ಬ ಪ್ರವಾಸಿಗರ ಜೊತೆ ದರ್ಪದಿಂದ ವರ್ತಿಸಿ ಹಲ್ಲೆಗೆ ಮುಂದಾಗಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಕುರಿತು ವ್ಯಾಪಾಕ ಟೀಕೆಗಳು ವ್ಯಕ್ತವಾಗಿದೆ.

ಈ ವಿಡಿಯೋವನ್ನು ‘ಸಕತ್ ಕಂಟೆನ್ಸ್’ ಯೂಟ್ಯೂಬ್ ಚಾನೆಲ್‌ನ ಬ್ಲಾಗರ್ ಬೆಂಗಳೂರಿನ ರೋಹಿತ್ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ.  ಇವರು ಸೈಂಟ್ ಮೇರಿಸ್ ದ್ವೀಪಕ್ಕೆ ತೆರಳಲು ಮಲ್ಪೆಗೆ ಬೈಕ್ ರೈಡ್ ಮಾಡಿಕೊಂಡು ಬಂದಿದ್ದು, ಕ್ಯಾಮೆರಾದೊಂದಿಗೆ ಸೈಂಟ್ ಮೇರಿಸ್ ದ್ವೀಪಕ್ಕೆ ಹೋಗುವುದಕ್ಕೆ ಪ್ರವೇಶದಲ್ಲಿ ಇವರಿಂದ 100ರೂ. ಹಣವನ್ನು ಪಡೆದುಕೊಳ್ಳಲಾಗಿತ್ತು. ಮುಂದೆ ದ್ವೀಪದಲ್ಲಿ ಮತ್ತೆ ಕ್ಯಾಮೆರಾಕ್ಕೆ 200ರೂ. ಶುಲ್ಕ ಪಾವತಿಸುವಂತೆ ಅಲ್ಲಿನ ಸಿಬ್ಬಂದಿ ಕೇಳಿದ್ದರು. ಇದರಿಂದ ಕೆಲಕಾಲ ಇವರ ಮಧ್ಯೆ ವಾಗ್ವಾದಗಳು ನಡೆದವು. ಅಲ್ಲದೆ ದುಬಾರಿ ಕ್ಯಾಮೆರಾ ಇಟ್ಟು ಹೋಗಲು ಯಾವುದೇ ರೀತಿಯ ಸುರಕ್ಷತಾ ಕ್ರಮಗಳಿಲ್ಲದ ಬಗ್ಗೆಯೂ ಬ್ಲಾಗರ್, ಸಿಬ್ಬಂದಿಗೆ ಪ್ರಶ್ನಿಸಿದ್ದನು. ಈ ವೇಳೆ ಸಿಟ್ಟಿಗೆದ್ದ ಸಿಬ್ಬಂದಿ ಪ್ರವಾಸಿಗರ ಮೇಲೆ ಹಲ್ಲೆಗೆ ಮುಂದಾಗಿದ್ದರೆನ್ನಲಾಗಿದೆ. ಬ್ಲಾಗರ್ ಇದೆಲ್ಲವನ್ನು ವಿಡಿಯೋದಲ್ಲಿ ದಾಖಲಿಸಿಕೊಂಡಿದ್ದರು.

‘ಕ್ಯಾಮೆರಾಕ್ಕಾಗಿ ಒಂದು ಶುಲ್ಕ ಪಾವತಿಸಿದರೂ ಇನ್ನೊಂದು ಕಡೆ ಮತ್ತೆ ಶುಲ್ಕ ಕೇಳುತ್ತಿದ್ದಾರೆ. ಹೆಜ್ಜೆಹೆಜ್ಜೆಗೂ ಶುಲ್ಕ ವಿಧಿಸಿರುವುದರಿಂದ ಪ್ರವಾಸಿಗರಿಗೆ ತುಂಬಾ ಹೊರೆಯಾಗುತ್ತದೆ. ದುಬಾರಿ ಮೌಲ್ಯದ ಕೆಮೆರಾ ಇಡಲು ಯಾವುದೇ ಸುರಕ್ಷತಾ ಕ್ರಮಗಳು ಕೂಡ ಅಲ್ಲಿ ಇರಲಿಲ್ಲ. ಇದನ್ನೆಲ್ಲ ಪ್ರಶ್ನಿಸಿದಕ್ಕೆ ಮಾತಿನ ವಾಗ್ವಾದ ನಡೆಯಿತು’ ಎಂದು ಬ್ಲಾಗರ್ ರೋಹಿತ್ ಹೇಳಿದ್ದಾರೆ.

ಈ ವಿವಾದಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್, ಎರಡು ಕಡೆ ಕೂಡ ತಪ್ಪಾಗಿದೆ. ಇದರ ಬಗ್ಗೆ ಪರಿಶೀಲನೆ ನಡೆಸಿ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ. ಈ ಕುರಿತು ವರದಿ ತರಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂಬಂಧ ಮಲ್ಪೆಬೀಚ್‌ನ ಗುತ್ತಿಗೆದಾರ ಸುದೇಶ್ ಶೆಟ್ಟಿ ಸ್ಪಷ್ಟನೆ ನೀಡಿದ್ದು, ವಿಡಿಯೋ ಪ್ರಕಟಿಸಿದ ಯೂಟ್ಯೂಬರ್ ಉದ್ದಟತನ ಪ್ರರ್ದಶಿಸಿದ ಹಿನ್ನೆಲೆ ಸಿಬ್ಬಂದಿಗಳು ಆ ಯುಟ್ಯೂಬರ್‌ನನ್ನು ತರಾಟೆಗೆ ತೆಗೆದುಕೊಂಡಿದ್ದಾನೆ ಹೊರತು, ಯಾವುದೇ ದುರುದ್ದೇಶದಿಂದ ಅಲ್ಲ. ಸೈಂಟ್ ಮೇರಿಸ್ ದ್ವೀಪ ಎನ್ನುವುದು ಜೀವ ವೈವಿದ್ಯಮಯ ತಾಣ. ಇಲ್ಲಿನ ರಕ್ಷಣೆ ಹೊಣೆ ನಮ್ಮ ಸಂಸ್ಥೆಯ ಮೇಲಿದೆ. ಈ ಹಿನ್ನೆಲೆ ದ್ವೀಪದಲ್ಲಿ  ಕೆಲವೊಂದು ಕಠಿಣ ನಿಯಮಗಳನ್ನು ಪ್ರವಾಸಿಗರ ಮೇಲೆ ಹೇರಲಾಗಿದೆ.  ಇಲ್ಲಿ ಪ್ರವಾಸಿಗರ ಅನುಚಿತ ವರ್ತನೆಯನ್ನು ನಿಯಂತ್ರಿಸುವುದು ನಮ್ಮ ಸಿಬ್ಬಂದಿಗಳ ಹೊಣೆಯಾಗಿದೆ ಎಂದು ತಿಳಿಸಿದರು.

share
Next Story
X