ಕಾರ್ಕಳ: ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ
ಕಾರ್ಕಳ: ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.
ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ (46) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೃಷ್ಣ ಸಫಲಿಗ ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು, ತನ್ನ ಮಾರುತಿ ಒಮಿನಿ ಕಾರಿನೊಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಕೃಷ್ಣ ಸಫಲಿಗ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.
ನಿನ್ನೆ ರಾತ್ರಿ ತಮ್ಮನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ್ದ ನಂತರ ಈ ಘಟನೆ ನಡೆದಿದ್ದು, ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು, ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.