Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: ಎಲ್.ಜಿ.ಫೌಂಡೇಶನ್‌ನಿಂದ ಉಚಿತ...

ಕುಂದಾಪುರ: ಎಲ್.ಜಿ.ಫೌಂಡೇಶನ್‌ನಿಂದ ಉಚಿತ ನೇತ್ರ ತಪಾಸಣಾ ಶಿಬಿರ

29 Jan 2023 10:17 PM IST
share
ಕುಂದಾಪುರ: ಎಲ್.ಜಿ.ಫೌಂಡೇಶನ್‌ನಿಂದ ಉಚಿತ ನೇತ್ರ ತಪಾಸಣಾ ಶಿಬಿರ

ಕುಂದಾಪುರ: ಆಧುನಿಕ ಕಾಲಘಟ್ಟದಲ್ಲಿ ಆರೋಗ್ಯ ಕಾಳಜಿ ಬಹುಮುಖ್ಯವಾಗಿದೆ. ಇಂತಹ ಶಿಬಿರಗಳ ಮೂಲಕ ಜನರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯವಾಗುತ್ತಿದ್ದು ಇದಕ್ಕೆ ಜನರ ಸಹಭಾಗಿತ್ವ ಕೂಡ ಅಗತ್ಯವಾಗಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಹೇಳಿದ್ದಾರೆ.

ಎಲ್.ಜಿ. ಫೌಂಡೇಶನ್ ಹಂಗಳೂರು-ಕುಂದಾಪುರ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೋಟೇಶ್ವರ ಪಂಚಾಯತ್, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉಡುಪಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಡಾ.ಪಿ.ದಯಾನಂದ ಪೈ ಮತ್ತು ಡಾ. ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಉಡುಪಿ, ದೇವಾಡಿಗ ಅಕ್ಷಯ ಕಿರಣ ಹಾಗೂ ಕುಂದಾಪುರ ಮತ್ತು ಕೋಟೇಶ್ವರ ದೇವಾಡಿಗ ಸಂಘದ ವತಿಯಿಂದ ದಿ. ಸುರೇಶ್ ಡಿ. ಪಡುಕೋಣೆ ಸ್ಮರಣಾರ್ಥ ಅಂಕದಕಟ್ಟೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರವಿವಾರ ನಡೆದ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನಮ್ಮ ಆರೋಗ್ಯ ನಮ್ಮ ರಕ್ಷಣೆ, ನಮ್ಮ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಪ್ರಕೃತಿ ಕೊಟ್ಟ ದೇಹದ ಜವಾಬ್ದಾರಿ ಅತಿ ಮುಖ್ಯವಾಗಿದೆ. ಜನರ ಆರೋಗ್ಯ ಕಾಳಜಿ ನಿಟ್ಟಿನಲ್ಲಿ ಎಲ್.ಜಿ  ಫೌಂಡೇಶನ್ ನಾಲ್ಕನೆ ಬಾರಿ ಹಮ್ಮಿಕೊಂಡ ಈ ಆರೋಗ್ಯ ಸಂಬಂಧಿತ ಶಿಬಿರ ಶ್ಲಾಘನೀಯ ಎಂದರು.

ಇದೇ ಸಂದರ್ಭದಲ್ಲಿ ಸಮಾಜಸೇವಕರಾದ ನಿತ್ಯಾನಂದ ವಳಕಾಡು, ವಿಶು ಕುಮಾರ್ ಶೆಟ್ಟಿ, ವೈದ್ಯಾಧಿಕಾರಿಗಳಾದ ಡಾ. ನಾಗಭೂಷಣ್ ಉಡುಪ, ಡಾ. ನಾಗೇಶ್, ಡಾ.ಮಧುಕರ್ ಇವರನ್ನು ಸನ್ಮಾನಿಸಲಾಯಿತು.

ಎಲ್.ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ ನಾಗರಾಜ ಡಿ. ಪಡುಕೋಣೆ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ. ನಾಗೇಶ್, ದೇವಾಡಿಗ ಅಕ್ಷಯ ಕಿರಣದ ಪೋಷಕ ಮಧುಕರ ದೇವಾಡಿಗ, ಅಶೋಕ್ ದೇವಾಡಿಗ ಮುಂಬೈ, ಕೋಟೇಶ್ವರ ಗ್ರಾಪಂ ಅಧ್ಯಕ್ಷ ಕೃಷ್ಣ ಗೊಲ್ಲ, ಕೋಟೇಶ್ವರ ದೇವಾಡಿಗ ಸಂಘದ ಅಧ್ಯಕ್ಷ ಚಂದ್ರಶೇಖರ ದೇವಾಡಿಗ, ಪ್ರಸಾದ ನೇತ್ರಾಲಯದ ವೈದ್ಯೆ ಡಾ. ಅರ್ಚನಾ ಶೆಟ್ಟಿ, ಕೋಟೇಶ್ವರ ಸರ್ಕಾರಿ ಆಸ್ಪತ್ರೆ ವೈದ್ಯೆ ಡಾ.ಪೂರ್ಣಿಮಾ, ದಾನಿಗಳಾದ ನಾಗರಾಜ ಡಿ. ಪಡುಕೋಣೆ, ಲಚ್ಚ ದೇವಾಡಿಗ, ಗುರು ಪ್ರತೀಕ್, ಬಾಬು ಪಡುಕೋಣೆ ಮೊದಲಾದವರು ಉಪಸ್ಥಿತರಿದ್ದರು.

ಕುಂದಾಪುರ ದೇವಾಡಿಗ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಸ್ವಾಗತಿಸಿದರು. ರಾಮ ದೇವಾಡಿಗ ಕಾರ್ಯಕ್ರಮ ನಿರೂಪಿಸಿ, ಸಮಾಜ ಸೇವಕ ಶಂಕರ ಅಂಕದಕಟ್ಟೆ ಪ್ರಸ್ತಾವನೆಗೈದರು. ಪುರುಷೋತ್ತಮ ದಾಸ್ ವಂದಿಸಿದರು.

share
Next Story
X