Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ...

ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ ಉದ್ಘಾಟಿಸಲಿರುವ ಸಿಎಂ: ಸುನಿಲ್‌ ಕುಮಾರ್‌ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

1 Feb 2023 8:15 PM IST
share
ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ ಉದ್ಘಾಟಿಸಲಿರುವ ಸಿಎಂ: ಸುನಿಲ್‌ ಕುಮಾರ್‌ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಚ್ಚಿಲ: ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ ಹಾಗೂ ಜಿಲ್ಲಾಡಳಿತದ ವತಿಯಿಂದ ಇದೇ ಫೆ.11 ಮತ್ತು 12ರಂದು ಉಡುಪಿಯ ಎಂಜಿಎಂ ಕಾಲೇಜಿನ ಎ.ಎಲ್.ಎನ್.ರಾವ್  ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ.

ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಯಕ್ಷಗಾನ ವಿದ್ವಾಂಸ, ಕಲಾವಿದ, ಅರ್ಥ ಧಾರಿ ಮಂಗಳೂರಿನ ಡಾ.ಎಂ.ಪ್ರಭಾಕರ ಜೋಷಿ ಅವರನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ. ಸಮ್ಮೇಳನವನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರು  ಫೆ.11ರ ಶನಿವಾರ ಬೆಳಗ್ಗೆ 10:30ಕ್ಕೆ ಉದ್ಘಾಟಿಸಲಿದ್ದಾರೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪುಸ್ತಕ ಬಿಡುಗಡೆ ಮಾಡಿದರೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಸಚಿವರಾದ ಎಸ್.ಅಂಗಾರ, ವಿ.ಸುನಿಲ್‌ಕುಮಾರ್, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇತರ ಗಣ್ಯರು ಉಪಸ್ಥಿತರಿರುವರು.

ಯಕ್ಷಗಾನ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಇಂದು ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಉಚ್ಚಿಲದ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಟಪಾಡಿ ಅನೆಗುಂದಿ ಮಠದ ಶ್ರೀಕಾಳಹಸ್ತೇಂದ್ರ ಮಹಾಸ್ವಾಮೀಜಿ, ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಅಧ್ಯಕ್ಷ ಜಿ.ಶಂಕರ್,   ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ, ಕಾಪು ಶಾಸಕ ಲಾಲಾಜಿ ಮೆಂಡನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ಎಸ್.ಹೆಚ್.ಶಿವರುದ್ರಪ್ಪ, ಕೆ.ಉದಯಕುಮಾರ್ ಶೆಟ್ಟಿ, ಮಟ್ಟಾರ್ ರತ್ನಾಕರ ಹೆಗ್ಡೆ, ಸಮ್ಮೇಳನದ ಪ್ರಧಾನ ಸಂಚಾಲಕ ಪಿ. ಕಿಶನ್ ಹೆಗ್ಡೆ, ಸಂಚಾಲಕ ಮುರಳಿ ಕಡೆಕಾರ್, ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ್ ಸಿ.ಕುಂದರ್, ಶ್ರೀಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಯಶ್ಪಾಲ್ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.

share
Next Story
X