Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯಕ್ಷಗಾನ ಸಮ್ಮೇಳನಕ್ಕೆ ರೋಹಿತ್...

ಯಕ್ಷಗಾನ ಸಮ್ಮೇಳನಕ್ಕೆ ರೋಹಿತ್ ಚಕ್ರತೀರ್ಥಗೆ ಆಹ್ವಾನ ನೀಡಿರುವುದು ಕಲೆಗೆ ದೊಡ್ಡ ಅವಮಾನ: ಕರಾವಳಿ ಗಣ್ಯರ ಆಕ್ರೋಶ

9 Feb 2023 12:26 PM IST
share
ಯಕ್ಷಗಾನ ಸಮ್ಮೇಳನಕ್ಕೆ ರೋಹಿತ್ ಚಕ್ರತೀರ್ಥಗೆ ಆಹ್ವಾನ ನೀಡಿರುವುದು ಕಲೆಗೆ ದೊಡ್ಡ ಅವಮಾನ: ಕರಾವಳಿ ಗಣ್ಯರ ಆಕ್ರೋಶ

ಉಡುಪಿ: ಕಳೆದ ವರ್ಷ ಪಠ್ಯಪುಸ್ತಕಗಳ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷನಾಗಿ ನೇಮಕಗೊಂಡು ಭಾರೀ ವಿವಾದಕ್ಕೆ ಕಾರಣರಾದ ರೋಹಿತ್ ಚಕ್ರತೀರ್ಥ ಅವರನ್ನು ಇದೀಗ ಉಡುಪಿಯಲ್ಲಿ ಫೆ.11 ಹಾಗೂ 12ರಂದು ನಡೆಯುತ್ತಿರುವ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಗೋಷ್ಠಿಗಳ ಉದ್ಘಾಟನೆ ಹಾಗೂ ದಿಕ್ಸೂಚಿ ಭಾಷಣ ಮಾಡಲು ಕರೆದಿರುವುದು ಆ ಕಲೆಗೆ ಮಾಡಿದ ಬಹುದೊಡ್ಡ ಅವಮಾನ ಎಂದು ಹಲವು ಗಣ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಸಂಬಂಧ ಪತ್ರಿಕಾ ಪ್ರಕಟನೆ ಹೊರಡಿಸಿರುವ ರಂಗಕರ್ಮಿ ಉದ್ಯಾವರ ನಾಗೇಶ ಕುಮಾರ್, ಕುಂಬ್ಳೆ ಸದಾಶಿವ ಮಾಸ್ತರ್, ಶ್ರೀನಿವಾಸ ಕಾರ್ಕಳ, ಹಾಗೂ ಹಿರಿಯ ಸಾಹಿತಿ ಪುರುಷೋತ್ತಮ ಬಿಳಿಮಲೆ, ಸಂಘಟಕರು ಈ ಬಗ್ಗೆ ಗಮನ ಹರಿಸಬೇಕೆಂದು ಆಗ್ರಹಿಸಿದ್ದಾರೆ. 

''ಕರಾವಳಿಯ ಯಕ್ಷಗಾನವು ಇವತ್ತು ವಿಶ್ವ ಪ್ರಸಿದ್ಧ ಕಲೆಯಾಗಿ ಬೆಳೆದಿದೆ. ಕಳೆದ ಆರು ಶತಮಾನಗಳಿಂದ ಈ ಕಲೆಯು ಬೆಳೆದು ಬಂದ ರೀತಿಯು ಅಚ್ಚರಿ ಹುಟ್ಟಿಸುತ್ತದೆ. ಆ ಕಲೆಯನ್ನು ಅತ್ಯದ್ಭುತವಾಗಿ ಸಂಘಟಿಸುವ ಮಹನೀಯರಿದ್ದಾರೆ, ಯಕ್ಷಗಾನ ಪ್ರಸಂಗಗಳನ್ನು ಬರೆದು ಪ್ರಸಿದ್ಧರಾದವರಿದ್ದಾರೆ. ಯಕ್ಷಗಾನ ಕಲಾವಿದರು ಪುರಾಣ, ಇತಿಹಾಸ ಮತ್ತು ವರ್ತಮಾನಗಳನ್ನು ಬೆಸೆದು ರಂಗಭೂಮಿಯ ಮೇಲೆ ವಿಸ್ಮಯಗಳನ್ನೇ ಸೃಷ್ಟಿಸಿದ್ದಾರೆ. ಯಕ್ಷಗಾನ ವಿಮರ್ಶೆಯೂ ಸರ್ವಾಂಗೀಣವಾಗಿ ಬೆಳೆದಿದೆ. ಈ ಕಲೆಯಲ್ಲಿನ ಭಾಗವತರು, ಚಂಡೆ ವಾದಕರು, ಮದ್ದಲೆ ವಾದಕರು ತಮ್ಮದೇ ರೀತಿಯ ಶೈಲಿಗಳನ್ನೇ ನಿರ್ಮಿಸಿ ಕರ್ನಾಟಕ ಸಂಸ್ಕೃತಿಯ ಘನತೆಯನ್ನು ವಿಸ್ತರಿಸಿದ್ದಾರೆ''.

''ಇಂಥ ಮಹಾನ್ ಕಲೆಯೊಂದರ ರಾಜ್ಯ ಸಮ್ಮೇಳನ ನಡೆಯುವುದು ಅತ್ಯಂತ ಅವಶ‍್ಯಕವಾಗಿತ್ತು ಮತ್ತು ಅದೀಗ ನಡೆಯುತ್ತಿದೆ. ಹಿರಿಯ ಕಲಾವಿದರಾದ ಪ್ರಭಾಕರ ಜೋಷಿಯವರು ಅದರ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಇದು ಯಕ್ಷಗಾನ ಪ್ರಿಯರಿಗೆ ಸಂತೋಷ ಕೊಡುವ ವಿಷಯವೇ ಹೌದು''.

''ಆದರೆ, ಸಮ್ಮೇಳನದ ದಿಕ್ಷೂಚಿ ಭಾಷಣಕ್ಕೆ ಸಂಘಟಕ, ಕಲಾವಿದ, ಪ್ರಸಂಗ ಕರ್ತ ಅಥವಾ ವಿಮರ್ಶಕನೂ ಅಲ್ಲದ ರೋಹಿತ್ ಚಕ್ರತೀರ್ಥರನ್ನು ಆರಿಸಲಾಗಿದೆ. ಯಕ್ಷಗಾನ ಲೋಕದಲ್ಲಿ ಚಕ್ರತೀರ್ಥರಿಗಿಂತ ಬಹಳ ಸಾಧನೆ ಮಾಡಿರುವ ಡಾ. ವಿವೇಕ ರೈ, ಡಾ. ಚಿನ್ನಪ್ಪ ಗೌಡ, ಡಾ. ಚಂದ್ರಶೇಖರ ದಾಮ್ಲೆ, ಡಾ. ರಾಘವ ನಂಬಿಯಾರ್, ಡಾ. ಪಾದೆಕಲ್ಲು ವಿಷ್ಣು ಭಟ್, ಡಾ. ವಸಂತ ಭಾರದ್ವಾಜ್. ಡಾ. ನಾಗವೇಣಿ ಮಂಚಿ, ರಾಧಾಕೃಷ್ಣ ಕಲ್ಚಾರ್, ಕಲಾವಿದ ಜಬ್ಬಾರ್ ಸಮೋ, ಡಾ. ಪ್ರಥ್ವಿರಾಜ ಕವತ್ತಾರ್,  ಡಾ. ಆನಂದ ರಾಮ ಉಪಾಧ‍್ಯ, ಡಾ. ಜಿ ಎಸ್ ಭಟ್, ಗೋಪಾಲಕೃಷ್ಣ ಭಾಗವತ, ಕೆರೆಮನೆ ಶಿವಾನಂದ ಹೆಗಡೆ, ವಿದ್ವಾನ್ ರಂಗಾ ಭಟ್ಟ ಮೊದಲಾದ ಅಸಂಖ್ಯ ಮಹನೀಯರಿದ್ದಾರೆ.''

''ಈ ಮಹನೀಯರು ಯಕ್ಷಗಾನದ ಯಾವುದೇ ಕ್ಷೇತ್ರದ ಮೇಲೆ ಅಧಿಕೃತವಾಗಿ ಮಾತಾಡಬಲ್ಲ ಧೀಮಂತರು. ಇಂಥವರನ್ನು ಬದಿಗೊತ್ತಿ, ದಿಕ್ಸೂಚಿ ಭಾಷಣಕ್ಕೆ ರೋಹಿತ್ ಚಕ್ರತೀರ್ಥರಂಥವರನ್ನು ಕರೆದಿರುವುದು ಆ ಕಲೆಗೆ ಮಾಡಿದ ಬಹುದೊಡ್ಡ ಅವಮಾನ ಎಂದು ನಾವು ಭಾವಿಸುತ್ತೇವೆ. ಸಂಘಟಕರು ಈ ಕಡೆ ಗಮನ ಹರಿಸಬೇಕೆಂದು ನಾವು ಒತ್ತಾಯಿಸುತ್ತೇವೆ'' ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
Next Story
X