Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪ್ರತಿ ಕ್ಷೇತ್ರದಲ್ಲೂ ಮಹಿಳೆಯರ ಪಾತ್ರ...

ಪ್ರತಿ ಕ್ಷೇತ್ರದಲ್ಲೂ ಮಹಿಳೆಯರ ಪಾತ್ರ ಮುಖ್ಯವಾದದ್ದು: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ

8 March 2023 7:41 PM IST
share
ಪ್ರತಿ ಕ್ಷೇತ್ರದಲ್ಲೂ ಮಹಿಳೆಯರ ಪಾತ್ರ ಮುಖ್ಯವಾದದ್ದು: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್
ಉಡುಪಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ

ಉಡುಪಿ: ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರ ಪಾತ್ರ ಮುಖ್ಯವಾದದ್ದು.ಅವರಿಗೆ ಎಲ್ಲಾ ಕೆಲಸಗಳಲ್ಲೂ ಸಮಾನತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ. 

ಬುಧವಾರ ನಗರದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಲ ಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು ಸ್ತ್ರೀಶಕ್ತಿ ಒಕ್ಕೂಟ ಹಾಗೂ ಪರ್ಯಾಯ ಶ್ರೀಕೃಷ್ಣಾಪುರ ಮಠ ಇವುಗಳ  ಸಹಯೋಗದೊಂದಿಗೆ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮಹಿಳೆಯರು ಪ್ರತಿಯೊಂದು ರಂಗ ಹಾಗೂ ಕ್ಷೇತ್ರದಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡು ಸೇವೆಯನ್ನು ನೀಡಬೇಕು. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕ್ರೀಡೆ, ಸಾಹಿತ್ಯ, ಕಲೆ, ಆಡಳಿತ ಮುಂತಾದ ಕ್ಷೇತ್ರಗಳಲ್ಲಿ ಸ್ಪರ್ಧೆ ನೀಡುತ್ತಿದ್ದಾರೆ. ಹೀಗೆ ಮಹಿಳೆಯರಿಗೆ ಎಲ್ಲಾ ಪ್ರಕಾರಗಳಲ್ಲೂ ಅವಕಾಶ ಸೀಗಬೇಕು ಎಂದರು.

ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಸಮಾನವಾಗಿದ್ದೇವೆ. ಹಾಗೂ ಎಂತಹ ಕೆಲಸಗಳನ್ನು ನಾವೂ ಮಾಡಬಲ್ಲೆವು ಎಂಬ ಭಾವನೆ ನಿಮ್ಮಲ್ಲಿ ಮೂಡಬೇಕು. ಸ್ಪೂರ್ತಿದಾಯಕ ಮಹಿಳೆಯರನ್ನ ಪ್ರೇರಣೆಯಾಗಿ ತೆಗೆದುಕೊಂಡು ಮುಂದಿನ ದಿನಗಳಲ್ಲಿ ಎಲ್ಲಾ ಸೇವೆಗಳಲ್ಲೂ ಸಮಾನ ಅವಕಾಶ ಗಳಿಸಬೇಕು ಎಂದು ಕಿವಿಮಾತು ಹೇಳಿದರು.

ಒನ್ ಸ್ಟಾಪ್ ಸೆಂಟರ್ ಮತ್ತು ಸಾಂತ್ವನ ಕೇಂದ್ರಗಳಂತಹ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ನೊಂದ ಮಹಿಳೆಯರಿಗೆ ಧೈರ್ಯತುಂಬುವ ಮೂಲಕ ಅವರ ಸಮಸ್ಯೆಗಳ ಬಗೆಹರಿಸಿ ನೆರವು ನೀಡಬೇಕು. ನೊಂದವರಿಗೆ ಸ್ವಯಂ ಉದ್ಯೋಗ ಹೊಂದಲು ವೃತ್ತಿ ತರಬೇತಿ ಮತ್ತು ಬೇರೆ ಬೇರೆ ಅಂಶಗಳ ಬಗ್ಗೆ ಮಾಹಿತಿ ನೀಡಬೇಕು. ಪ್ರತಿಯೊಂದು ಹಂತದಲ್ಲೂ ಖಾಸಗಿ ಅಥವಾ ಸರಕಾರಿ ಯಾವುದೇ ಸಂಸ್ಥೆಯಾದರೂ ಅದರಲ್ಲಿ ಮಹಿಳೆಯರಿ ಗೋಸ್ಕರ ದೂರು ನೀಡುವ ಅಥವಾ ಆಂತರಿಕ ಸಮಿತಿ ರಚಿಸಿ,  ಸಮಸ್ಯೆಗೆ ಒಳಗಾದ ಮಹಿಳೆಯ ರಿಗೆ ನೆರವು ನೀಡಬೇಕು ಎಂದರು.

ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ಕುರಿತು ಮಾಧ್ಯಮಗಳಲ್ಲಿ ಅನೇಕ ದೂರುಗಳು ಕೇಳಿ ಬರುತ್ತಿವೆ. ಇವುಗಳ ನಿಯಂತ್ರಣಕ್ಕೆ ಮುಂದಾಗ ಬೇಕು ಎಂದ ಅವರು, ಮಹಿಳೆಯರು ಪುರುಷರಿಗಿಂತ ಕಡಿಮೆ ಏನಿಲ್ಲ ಎನ್ನುವಂತೆ ಎಲ್ಲಾ ಹುದ್ದೆಗಳಲ್ಲಿಯೂ ಕಾರ್ಯನಿರ್ವಹಿಸಲು ಮುಂದಾಗಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮಾತನಾಡಿ, ಮಹಿಳಾ ದಿನಾಚರಣೆಯ ಉದ್ದೇಶ ಮಹಿಳೆಯರನ್ನ ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಬಲರನ್ನಾಗಿ ಮಾಡುವುದಾಗಿದೆ. ಸಮಾಜದ ಎಲ್ಲಾ ಮಹಿಳೆಯರ ವತ್ತು ಯುವತಿಯರ ಸಬಲಿಕರಣಕ್ಕೆ ಶಿಕ್ಷಣ ಬಹಳ ಮುಖ್ಯ. ದೇಶದಲ್ಲಿ ಅಭಿವೃದ್ಧಿ ಮತ್ತು ಬದಲಾವಣೆ ತರುವ ನಿಟ್ಟಿನಲ್ಲಿ ಮಹಿಳೆಯರು ಧೈರ್ಯದಿಂದ ಮುಂದೆ ಬಂದು ತಮಗಾಗುವ ದೌರ್ಜನ್ಯ, ಶೋಷಣೆ ಬಗ್ಗೆ ನೇರವಾಗಿ ಹೇಳಿಕೊಳ್ಳುವ ಮನೋ ಭಾವನೆ ಬೆಳೆಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಕಲೆ, ಕ್ರೀಡೆ, ಸಂಸ್ಕೃತಿ ಸಾಹಿತ್ಯ ಮುಂತಾದ ಕ್ಷೇತ್ರದಲ್ಲಿ ಸಾಧನೆಗೈದ ಮಕ್ಕಳಿಗೆ ಹಾಗೂ ಅನುಭವ ಪರಿಣಿತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರನ್ನು ಗುರುತಿಸಿ ಗೌರವಿಸಲಾಯಿತು. ಮಹಿಳೆಯರು ಉತ್ಪಾದಿಸಿದ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಹಿಳಾ ಮಂಡಳಗಳ ಒಕ್ಕೂಟದ ಜಿಲ್ಲಾಧ್ಯಕ್ಷೆ ಸರಳಾ ಕಾಂಚನ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಹೆಚ್.ಕೃಷ್ಣಪ್ಪ, ಕಾರ್ಯದರ್ಶಿ ವಸಂತಿ ರಾವ್, ಕುಂದಾಪುರ ಮಹಿಳಾ ಮಂಡಲದ ಅಧ್ಯಕ್ಷೆ ರಾಧಾದಾಸ್, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಕಾರ್ಯದರ್ಶಿ ಪ್ರೇಮಾ ಹಾಗೂ ಇತರರು ಉಪಸ್ಥಿತರಿದ್ದರು.

share
Next Story
X