Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಬಲ್ ಇಂಜಿನ್ ಸರಕಾರದಿಂದ ಮಾನವ ಸಂಪನ್ಮೂಲ...

ಡಬಲ್ ಇಂಜಿನ್ ಸರಕಾರದಿಂದ ಮಾನವ ಸಂಪನ್ಮೂಲ ಅಭಿವೃದ್ಧಿ: ಗೋವಾ ಸಿಎಂ ಪ್ರಮೋದ್ ಸಾವಂತ್

ಕೋಟೇಶ್ವರದಲ್ಲಿ ಮಹಿಳಾ ಸಮಾವೇಶ

12 March 2023 8:56 PM IST
share
ಡಬಲ್ ಇಂಜಿನ್ ಸರಕಾರದಿಂದ ಮಾನವ ಸಂಪನ್ಮೂಲ ಅಭಿವೃದ್ಧಿ: ಗೋವಾ ಸಿಎಂ ಪ್ರಮೋದ್ ಸಾವಂತ್
ಕೋಟೇಶ್ವರದಲ್ಲಿ ಮಹಿಳಾ ಸಮಾವೇಶ

ಕುಂದಾಪುರ, ಮಾ.12: ಡಬ್ಬಲ್ ಇಂಜಿನ್ ಸರಕಾರಗಳು ಮೂಲಭೂತ ಸೌಕರ್ಯಗಳನ್ನು ನೀಡುವುದರೊಂದಿಗೆ ರಾಷ್ಟ್ರದ ಹಾಗೂ ಮಾನವ ಸಂಪನ್ಮೂಲದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಸರ್ಕಾರವನ್ನು ಬಲಪಡಿಸಲು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನೇ ಮತ್ತೆ ಆಯ್ಕೆ ಮಾಡಬೇಕಾಗಿದೆ ಎಂದು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಆಶ್ರಯದಲ್ಲಿ ಕೋಟೇಶ್ವರದ ಕುರುಕ್ಷೇತ್ರ ಮೈದಾನದಲ್ಲಿ ರವಿವಾರ ಆಯೋಜಿಸಲಾದ ಮಹಿಳಾ ಸಮಾವೇಶ ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮಹಿಳೆಯ ಪರವಾಗಿರುವ ಕೇಂದ್ರದ ಪ್ರಧಾನಿ ಮೋದಿ ನೇತ್ರತ್ವದ ಸರಕಾರವು ಭೇಟಿ ಬಚಾವ್ ಭೇಟಿ ಪಡಾವ್ ಹಾಗೂ ಶೌಚಾಲಯ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ. ಅಲ್ಲದೆ ಸುಕನ್ಯಾ ಸಮೃದ್ಧಿ, ಸ್ಟಾಂಡಪ್ ಇಂಡಿಯಾ, ಪ್ರಧಾನ ಮಂತ್ರಿ ಕೌಶಲ್ಯ ಯೋಜನೆ, ತಲಾಕ್ ರದ್ಧತಿ ಸಹಿತ ಮಹಿಳೆಯರಿಗಾಗಿ ಹಲವು ಕಾರ್ಯ ಕ್ರಮಗಳನ್ನು ಜಾರಿಗೊಳಿಸಿದೆ. ಮಹಿಳೆಯರ ಮೇಲಿನ ದೌರ್ಜನ್ಯಗಳ ತಡೆಗೆ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದರು.

ದಿಕ್ಸೂಷಿ ಭಾಷಣ ಮಾಡಿದ ರಾಜ್ಯ ಬಿಜೆಪಿ ಪಕ್ಷದ ಪ್ರಮುಖ ಮಾಳವಿಕ ಅವಿನಾಶ್, ಜಲಜೀವನ್ ಮಿಷನ್ ಮೂಲಕ ಮನೆ ಮನೆಗೆ ಕುಡಿಯುವ ನೀರು, ಉಜ್ವಲ್ ಯೋಜನೆಯ ಮೂಲಕ ಉಚಿತ ಅಡುಗೆ ಅನಿಲ, 18,000 ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ, ಫಲನಾಭವಿಗಳಿಗೆ ಸರಕಾರ ಸೌಲಭ್ಯಗಳ ನೇರ ವರ್ಗಾವಣೆಗಾಗಿ ಜನಧನ್ ಮೂಲಕ ಠೇವಣೆ ರಹಿತ ಬ್ಯಾಂಕ್ ಖಾತೆಯಂತಹ ಯೋಜನೆಗಳನ್ನು ಸಾಕಾರಗೊಳಿಸುವ ಮೂಲಕ ಬಿಜೆಪಿ ಸರಕಾರ ಸುಧೃಢ ಹಾಗೂ ಗೌರವದ ಬದುಕಿಗೆ ಅವಕಾಶ ಮಾಡಿಕೊಟ್ಟಿದೆ ಎಂದರು.

ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು. ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್.ಮೆಂಡನ್, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಕೆ.ಉದಯ ಕುಮಾರ ಶೆಟ್ಟಿ, ಆಹಾರ ಹಾಗೂ ನಾಗರಿಕ ಪೂರೈಕೆ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ ಕೊಡ್ಗಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್, ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕಾರ್ಯದರ್ಶಿ ಸುರೇಂದ್ರ ಕಾಂಚನ್ ಸಂಗಮ್, ಕುಂದಾಪುರ ಪುರಸಭೆ ಅಧ್ಯಕ್ಷ ವೀಣಾ ಭಾಸ್ಕರ್ ಮೆಂಡನ್ ಮೊದಲಾದವರು ಉಪಸ್ಥಿತರಿದ್ದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕಿ ಇಂದ್ರಾಕ್ಷೀ ಉಡುಪ ಅವರನ್ನು ಗೌರವಿಸಲಾಯಿತು. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಾಸ್ತಾವಿಕವಾಗಿ ಮಾಡಿದರು. ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ಸ್ವಾಗತಿಸಿದರು. ರಶ್ಮೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ದರು. ಸೌರಭಿ ಪೈ ವಂದಿಸಿದರು.

share
Next Story
X