Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದಲಿತ ದೌರ್ಜನ್ಯ ನಿಷೇಧ ಕಾಯ್ದೆಯನ್ನು...

ದಲಿತ ದೌರ್ಜನ್ಯ ನಿಷೇಧ ಕಾಯ್ದೆಯನ್ನು ಸಮಗ್ರ ಜಾರಿಗೆ ಆಗ್ರಹ: ಸಚಿವ ಕೋಟ ನಿವಾಸದ ಮುಂದೆ ಧರಣಿ

13 March 2023 9:23 PM IST
share
ದಲಿತ ದೌರ್ಜನ್ಯ ನಿಷೇಧ ಕಾಯ್ದೆಯನ್ನು ಸಮಗ್ರ ಜಾರಿಗೆ ಆಗ್ರಹ: ಸಚಿವ ಕೋಟ ನಿವಾಸದ ಮುಂದೆ ಧರಣಿ

ಕುಂದಾಪುರ, ಮಾ.13: ಸಾಮಾಜಿಕ ಅಸಮತೋಲನ ತೊಡೆದು ಹಾಕುವಲ್ಲಿ ರಾಜ್ಯ ಸರಕಾರ ವಿಫಲವಾಗಿದ್ದು, ರಾಜ್ಯದಲ್ಲಿ ದಲಿತರನ್ನು ತುಚ್ಛವಾಗಿ ಕಾಣಲಾಗುತ್ತಿದೆ. ದೌರ್ಜನ್ಯ ನಿಷೇಧ ಕಾಯ್ದೆಯನ್ನು ಸಮಗ್ರವಾಗಿ ಜಾರಿಗೆ ತರಬೇಕು. ಇಲ್ಲದೇ ಇದ್ದರೆ ಕುರ್ಚಿ ಖಾಲಿ ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ರಾಜಗಿರಿ ಒತ್ತಾಯಿಸಿದ್ದಾರೆ.

ಕೋಟದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನಿವಾಸದ ಮುಂದೆ ಸೋಮವಾರ ಚಿತ್ರದುರ್ಗದ ಹಿರೆಕೆರೆ ಯೂರು ಚಳ್ಳೆಕೆರೆ ವ್ಯಾಪ್ತಿಯ ದಲಿತ ಸಂಘರ್ಷ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆದ ಧರಣಿಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು. 

ಕೇಂದ್ರ ಸರಕಾರ 1989ರಲ್ಲಿ ದಲಿತರಿಗಾಗಿ ತಂದ ಕಾಯಿದೆಯನ್ನು ಅನುಷ್ಠಾನ ಗೊಳಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಇಂದಿಗೂ ರಾಜ್ಯದ ಹೆಚ್ಚಿನ ಭಾಗದಲ್ಲಿ ದಲಿತರು ಕೂಲಿ ಮಾಡಿ ಬದುಕುತ್ತಿದ್ದಾರೆ. ಅಲ್ಲದೇ ಸಾಮಾಜಿಕವಾಗಿ ಬಹಿಷ್ಕಾರ ಹಾಕುವಂತಹ ಸ್ಥಿತಿ ನಿರ್ಮಾಣಗೊಂಡಿದೆ. ರಾಜಕೀಯ ಪಕ್ಷಗಳು ದಲಿತರನ್ನು ಉಪಯೋಗಿಸಿ ಅವರನ್ನು ತುಳಿಯುವ ಮನಸ್ಥಿತಿ ಸೃಷ್ಠಿಸಿದ್ದಾರೆ. ಅನೇಕ ಬಾರಿ ಸರಕಾರ ಮತ್ತು ಸಚಿವರ ಮುಂದೆ ಪ್ರತಿಭಟನೆ ನಡೆಸಿದರೂ ನಮಗೆ ನ್ಯಾಯ ದೊರಕಿಲ್ಲ ಎಂದು ಅವರು ಆರೋಪಿಸಿದರು.

1989ರ ಎಸ್ಸಿ-ಎಸ್ಟಿ ದೌರ್ಜನ್ಯ ನಿಷೇಧ ಕಾಯಿದೆ ಅಡಿಯಲ್ಲಿ ಬರುವ ಸಂತ್ರಸ್ತರು, ಕುಟುಂಬದ ಸದಸ್ಯರು ಮತ್ತು ಅವಲಂಬಿತರಿಗೆ ಮೂಲಭೂತ ಸೌಕರ್ಯಗಳ ಒದಗಿಸುವುದು, ದೌರ್ಜನ್ಯ ನಿಷೇಧ ಕಾಯಿದೆಯನ್ನು ಜಾರಿಗೆ ತರುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರಕಾರದ ಮುಂದಿರಿಸಿ ಪ್ರತಿಭಟನೆಗೆ ನಿರತರಾಗಿದ್ದೇವೆ. ವಿವಿಧ ಸಚಿವರ ಮನೆಯ ಮುಂದೆ, ಕಬ್ಬನ್ ಪಾರ್ಕ್, ವಿಧಾನಸೌಧಗಳಲ್ಲಿಯೂ ನಾವು ಪ್ರತಿಭಟನೆ ನಡೆಸಿದ್ದೇವೆ. ನೂರಾರು ಬಾರಿ ಮನವಿ ಮಾಡಿದ್ದರೂ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ದೂರಿದರು.

ನಮಗೆ ಆಶ್ವಾಸನೆ ಬೇಡ. ರಾಜ್ಯದಲ್ಲಿರುವ 156 ಪರಿಶಿಷ್ಟ ಜಾತಿಯ ಸುಮಾರು 1ಕೋಟಿ 60 ಲಕ್ಷ ಜನಸಂಖ್ಯೆ ಇರುವ ಸಮುದಾಯಕ್ಕೆ ನ್ಯಾಯ ದೊರಕಿಸಬೇಕು. ರಾಜ್ಯ ಹಾಗೂ ಕೇಂದ್ರ ಸರಕಾರಗಳು ತಕ್ಷಣ ಈ ಬಗ್ಗೆ ಎಚ್ಚರ ವಹಿಸಿ ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಮಾಡು ಇಲ್ಲವೇ ಮಡಿ ಎನ್ನುವಂತೆ ಹೋರಾಟ ಗಟ್ಟಿಗೊಳಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು. 

ಸಚಿವರು ಸ್ಥಳಕ್ಕೆ ಬರುವ ತನಕ ಪ್ರತಿಭಟನೆ ಮುಂದುವರೆಯಲಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು. ಈ ಸಂದರ್ಭದಲ್ಲಿ ದಲಿತ ಮುಖಂಡರಾದ ನಾಗರಾಜ್, ಜಗದೀಶ್, ನರಸಪ್ಪ, ಪೂಜಾರಿ ಕಿಟ್ಟಿ ಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

share
Next Story
X