Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪ್ರತಿ ಗ್ರಾಮದಲ್ಲೂ ಕೋಮು ಸಾಮರಸ್ಯದ...

ಪ್ರತಿ ಗ್ರಾಮದಲ್ಲೂ ಕೋಮು ಸಾಮರಸ್ಯದ ಸಮಿತಿ ರಚನೆ: ಮಂಜುನಾಥ ಭಂಡಾರಿ

18 March 2023 9:02 PM IST
share
ಪ್ರತಿ ಗ್ರಾಮದಲ್ಲೂ ಕೋಮು ಸಾಮರಸ್ಯದ ಸಮಿತಿ ರಚನೆ: ಮಂಜುನಾಥ ಭಂಡಾರಿ

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ ಕೋಮುಗಲಭೆ ನಡೆಸುವ ಹುನ್ನಾರಗಳು ನಡೆಯುತ್ತಿವೆ. ಇದಕ್ಕೆ ಪ್ರತಿಯಾಗಿ ಮುಂದೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಪ್ರತಿ ಗ್ರಾಮ ಪಂಚಾಯತ್‌ನ ವಾರ್ಡ್ ಮಟ್ಟದಲ್ಲಿ ಸ್ವಾಮಿ ವಿವೇಕಾನಂದ ಕೋಮು ಮತ್ತು ಸಾಮಾಜಿಕ ಸಾಮರಸ್ಯದ ಸಮಿತಿಯನ್ನು ರಚಿಸಲಾಗುವುದು. ಅಲ್ಲದೆ ಆ ಸಮಿತಿಗೆ ಅನುದಾನವನ್ನು ನೀಡಿ ಕೋಮು, ಜಾತಿ ಘರ್ಷಣೆ ಹೋಗಲಾಡಿಸುವ ಕಾರ್ಯ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದ್ದಾರೆ.

ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಉಡುಪಿ ಸಂತೆಕಟ್ಟೆಯಲ್ಲಿ ನಡೆದ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಗೃಹ ಜ್ಯೋತಿ ಹಾಗೂ ಗೃಹ ಲಕ್ಷ್ಮೀ ಯೋಜನೆಯ ಮೂಲಕ ಪ್ರತಿಮನೆಗೆ ವಾರ್ಷಿಕ 55200ರೂ. ನೀಡಲಾಗುವುದು. ನಮ್ಮ ಸರಕಾರ ಐದು ವರ್ಷ ಅಧಿಕಾರದಲ್ಲಿ ಪ್ರತಿಮನೆಗೆ ಈ ಯೋಜನೆ ಮೂಲಕ ಒಟ್ಟು 2.76ಲಕ್ಷ ರೂ. ಸಹಾಯಧನ ದೊರೆಯಲಿದೆ. ಈ ಯೋಜನೆಗಳಿಗೆ ಈಗಿನ ಬಿಜೆಪಿ ಸರಕಾರದ ಶೇ.40 ಕಮಿಷನ್ ಹಣದ ಸೋರಿಕೆಯನ್ನು ತಡೆದು ಬಳಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಮೇಲ್ದರ್ಜೆಗೇರಿಸಿ 2500ಕೋಟಿ ರೂ. ಅನುದಾನ ಒದಗಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಇದರಿಂದ ಕರಾವಳಿ ಜಿಲ್ಲೆಯಲ್ಲಿ ಹೂಡಿಕೆ ಹೆಚ್ಚಾಗಿ ಉದ್ಯೋಗ ಸೃಷ್ಠಿಯಾಗುತ್ತದೆ. ಅಲ್ಲದೆ ಐಟಿ ಪಾರ್ಕ್ ಮತ್ತು ಟೆಕ್ಸ್‌ಟೈಲ್ ಪಾರ್ಕ್ ನಿರ್ಮಿಸಿ 30000 ಮಂದಿಗೆ ಉದ್ಯೋಗ ನೀಡಲಾಗುವುದು. ಅತೀಸೂಕ್ಷ್ಮ ಹಿಂದುಳಿದವರ್ಗಗಳ ಅಭಿವೃದ್ಧಿ ನಿಗಮ ಸ್ಥಾಪಿಸಿ ಎಲ್ಲ ಸಮುದಾಯಕ್ಕೂ ನ್ಯಾಯ ಒದಗಿಸಲಾಗುವುದು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಸಚಿವ ಬಿ.ಎಲ್.ಶಂಕರ್ ಮಾತನಾಡಿ, ಈ ಬಾರಿಯ ಚುನಾವಣೆಯನ್ನು ಎದುರಾಳಿಗಳನ್ನು ಟೀಕಿಸದೆ, ವೈಯಕ್ತಿಕ ನಿಂದನೆ ಮಾಡದೆ ಅಭಿವೃದ್ಧಿ ವಿಚಾರದ ಬಗ್ಗೆ ಚರ್ಚೆ ನಡೆಸುವ ಮೂಲಕ ಎದುರಿಸಬೇಕು. ಈ ಮೂಲಕ ಈ ಚುನಾವಣೆ ನೆಗೆಟಿವ್ ರಾಜ ಕಾರಣವಾಗಿದೆ ಪಾಸಿಟಿವ್ ರಾಜಕಾರಣ ವಾಗಿರಬೇಕು ಎಂದು ತಿಳಿಸಿದರು.

ವೇದಿಕೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಮುಖಂಡರಾದ ಸರಳ ಕಾಂಚನ್, ರಾಜು ಪೂಜಾರಿ, ದಿನಕರ ಹೇರೂರು, ಪ್ರಸಾದ್‌ ರಾಜ್ ಕಾಂಚನ್, ವರೋನಿಕಾ ಕರ್ನೆಲಿಯೋ, ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ದಿವಾಕರ್ ಕುಂದರ್, ವಿಶ್ವಾಸ್ ಅಮೀನ್, ಪ್ರಖ್ಯಾತ್ ಶೆಟ್ಟಿ, ಹರೀಶ್ ಕಿಣಿ, ಮೀನಾಕ್ಷಿ ಮಾಧವ ಬನ್ನಂಜೆ, ಅಣ್ಣಯ್ಯ ಶೇರಿಗಾರ್ ಮೊದಲಾದವರು ಉಪಸ್ಥಿತರಿದ್ದರು.

share
Next Story
X