Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆಡಳಿತ ವ್ಯವಸ್ಥೆ ಜನರ ಸಮಸ್ಯೆಗೆ...

ಆಡಳಿತ ವ್ಯವಸ್ಥೆ ಜನರ ಸಮಸ್ಯೆಗೆ ಪರಿಹಾರವಾಗಬೇಕು: ಸಚಿವ ಕೋಟ ಶ್ರೀನಿವಾಸ ಪೂಜಾರಿ

23 March 2023 8:34 PM IST
share
ಆಡಳಿತ ವ್ಯವಸ್ಥೆ ಜನರ ಸಮಸ್ಯೆಗೆ ಪರಿಹಾರವಾಗಬೇಕು: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬ್ರಹ್ಮಾವರ, ಮಾ.23: ಆಡಳಿತ ವ್ಯವಸ್ಥೆಯು ಜನಸಾಮಾನ್ಯರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವ ಅತ್ಯಂತ ಪ್ರಮುಖ ಭಾಗವಾಗಿ ಕಾರ್ಯನಿರ್ವಹಿಸುವ ಮೂಲಕ ಜನಸ್ನೇಹಿಯಾಗಿರಬೇಕು ಎಂದು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಗುರುವಾರ ಬ್ರಹ್ಮಾವರದ ವಾರಂಬಳ್ಳಿ ಗ್ರಾಮದ ಸುಮಾರು ಮೂರು ಎಕರೆ ಪ್ರದೇಶದಲ್ಲಿ ಕಂದಾಯ ಇಲಾಖೆ ಹಾಗೂ ಉಡುಪಿ ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ, 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.

ಸಾರ್ವಜನಿಕರ ಬಹುತೇಕ ಸಮಸ್ಯೆಗಳು ಕಂದಾಯ ಇಲಾಖೆಗೆ ಸಂಬಂಧಪಟ್ಟಿದ್ದಾಗಿರುತ್ತವೆ. ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆಯಿಂದ ಕಾರ್ಯ ನಿರ್ವಹಿಸಿ, ಜನರ ಸಮಸ್ಯೆಗಳನ್ನು ಶೀಘ್ರದಲ್ಲಿ ಇತ್ಯರ್ಥಪಡಿಸುವ ಮೂಲಕ ಜನಪರ ಕೆಲಸಗಳನ್ನು ಮಾಡುವ ಮನೋಭಾವವನ್ನು ಸಿಬ್ಬಂದಿಗಳು ಬೆಳೆಸಿಕೊಳ್ಳುವಂತೆ ಕಿವಿಮಾತು ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಡೀಮ್ಡ್ ಅರಣ್ಯ ವಿನಾಯತಿಯ ನಂತರ ಕಂದಾಯ ಇಲಾಖೆಗೆ ನೀಡಿರುವ ಜಾಗವನ್ನು ಅರ್ಹರಿಗೆ 94ಸಿ ಮತ್ತು 94ಸಿಸಿ ಅಡಿಯಲ್ಲಿ ಆದ್ಯತೆಯ ಮೇಲೆ ಹಕ್ಕುಪತ್ರಗಳನ್ನು ನೀಡುವ ಜನಪರ ಕಾರ್ಯವನ್ನು ಕಂದಾಯ ಇಲಾಖೆ ಮಾಡಬೇಕು ಎಂದರು.

ಅತಿಥಿಗಳಾಗಿ ಉಪಸ್ಥಿತರಿದ್ದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಸದ್ಯ ಕೆನೆಪದರದ ಮೇಲಿನವರಿಗೆ ಜಾತಿ ಸರ್ಟಿಫಿಕೇಟ್ ನೀಡಲಾಗುತ್ತಿಲ್ಲ. ಮೀಸಲಾತಿಗೆ ಹೊರತಾಗಿಯೂ ಅವರಿಗೆ ಜಾತಿ ಸರ್ಟಿಫಿಕೇಟ್ ನೀಡುವ ಬಗ್ಗೆ ಕ್ರಮಕೈಗೊಳ್ಳಲಾಗುತ್ತಿದೆ. ಅದೇ ರೀತಿ ಆದಾಯ ಸರ್ಟಿಫಿಕೇಟ್‌ಗೆ ಕೇವಲ ತಂದೆ-ತಾಯಿಯರ ಆದಾಯವನ್ನು ಮಾತ್ರ ಪರಿಗಣಿಸುವಂತೆ ಸೂಚಿಸಿದ ಅವರು, ಸಂಶಯಗಳಿದ್ದಾಗ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಜಾತಿ-ಆದಾಯ ಸರ್ಟಿಫಿಕೇಟ್‌ನ್ನು ತ್ವರಿತವಾಗಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಶಾಸಕ ಕೆ.ರಘುಪತಿ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುವಿಭಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ವಾರಂಬಳ್ಳಿ ಗ್ರಾಪಂ ಅಧ್ಯಕ್ಷೆ ನಾಗವೇಣಿ ಪಂಡರೀನಾಥ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ. ಹಾಕೆ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ, ಕರ್ನಾಟಕ ಗೃಹ ಮಂಡಳಿ ಇಂಜಿನಿಯರ್ ಸಹನಾ ಮತ್ತಿತರರು ಉಪಸ್ಥಿತರಿದ್ದರು.

ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿ ಸ್ವಾಗತಿಸಿ, ಕಂದಾಯ ನಿರೀಕ್ಷಕ ಲಕ್ಷ್ಮಿನಾರಾಯಣ ಭಟ್ ವಂದಿಸಿದರು.

ಬ್ರಹ್ಮಾವರದಲ್ಲಿ 100 ಹಾಸಿಗೆಗಳ ಇಎಸ್‌ಐ ಆಸ್ಪತ್ರೆ

ಕೇಂದ್ರ ಸರಕಾರದ ಕಾರ್ಮಿಕ ಇಲಾಖೆಯ ಮೂಲಕ ಉಡುಪಿ ಜಿಲ್ಲೆಗೆ ಈಗಾಗಲೇ ಮಂಜೂರಾಗಿರುವ 100 ಬೆಡ್‌ಗಳ ಸುಸಜ್ಜಿತ ಇಎಸ್‌ಐ ಆಸ್ಪತ್ರೆ  ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಐದು ಎಕರೆ ಪ್ರದೇಶದಲ್ಲಿ  ನಿರ್ಮಾಣಗೊಳ್ಳಲಿದ್ದು, ಟೆಂಡರ್ ಹಂತದಲ್ಲಿದೆ ಎಂದು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ರಘುಪತಿ ಭಟ್ ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಬ್ರಹ್ಮಾವರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ಗಳನ್ನು ಕೈಗೊಂಡಿದ್ದು, ಕೃಷಿ ಮತ್ತು ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಕಾಮಗಾರಿಗಳಿಗಾಗಿ 310 ಕೋಟಿ ರೂ. ಮತ್ತು 195 ಕೋಟಿ ರೂ. ವೆಚ್ಚದಲ್ಲಿ ಸೀತಾನದಿ ಹಾಗೂ ಸ್ವರ್ಣ ನದಿಗಳಿಗೆ ಬ್ರಿಜ್ ಕಮ್ ಬ್ಯಾರೆಜ್ ನಿರ್ಮಿಸಲಾಗುವುದು. ಈ ಯೋಜನೆ ಈಗ ಟೆಂಡರ್ ಹಂತದಲ್ಲಿದೆ. ವಾರಾಹಿ ಯೋಜನೆಯೊಂದಿಗೆ ಈ ಯೋಜನೆಗಳು ಕಾರ್ಯರೂಪಕ್ಕೆ ಬಂದಾಗ ಉಡುಪಿ ವಿಧಾನಸಭಾ ಕ್ಷೇತ್ರದ 19 ಗ್ರಾಪಂಗಳಿಗೂ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದರು.

80 ಕೋಟಿ ರೂ. ವೆಚ್ಚದಲ್ಲಿ ಗ್ರಾಮಾಂತರ ಭಾಗದ ಬ್ರಹ್ಮಾವರ-ಸೀತಾನದಿ ಚತುಷ್ಪಥ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ. ನೂತನ ತಾಲೂಕು ಕೋರ್ಟ್ ಹಾಗೂ ತಾಲೂಕು ಪಂಚಾಯತ್ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನಗಳು ನಡೆದಿವೆ ಎಂದರು.

ಪ್ರಸ್ತುತ ನೂತನ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ಮಟ್ಟದ ಎಲ್ಲಾ ಕಚೇರಿಗಳು ಒಂದೇ ಕಡೆ ಇರುವುದರಿಂದ ನಾಗರಿಕರಿಗೆ ಒಂದೇ ಕಡೆಯಲ್ಲಿ ಹಲವು ಸೌಲಭ್ಯಗಳು ಶೀಘ್ರದಲ್ಲಿ ದೊರೆಯಲಿದೆ. ಹೆಚ್ಚುವರಿ ಯಾಗಿ ಕಾಂಪೌಂಡ್ ಗೋಡೆ, ಇಂಟರ್‌ಲಾಕ್, ಪೀಠೋಪಕರಣ ಮತ್ತಿತರ ಸೌಲಭ್ಯ ಕ್ಕಾಗಿ 2.75 ಕೋಟಿ ರೂ.ಗಳನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸುವುದಾಗಿ ಕಂದಾಯ ಸಚಿವರು ಭರವಸೆ ನೀಡಿದ್ದಾರೆ ಎಂದರು.

share
Next Story
X