Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸೆಸೆಲ್ಸಿ ಪರೀಕ್ಷೆಗೆ ಉಡುಪಿ...

ಎಸೆಸೆಲ್ಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು: ಡಿಸಿ ಕೂರ್ಮರಾವ್

ಮಾ.31ರಿಂದ ಎ.15ರವರೆಗೆ ಪರೀಕ್ಷೆ

24 March 2023 7:17 PM IST
share
ಎಸೆಸೆಲ್ಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು: ಡಿಸಿ ಕೂರ್ಮರಾವ್
ಮಾ.31ರಿಂದ ಎ.15ರವರೆಗೆ ಪರೀಕ್ಷೆ

ಉಡುಪಿ, ಮಾ.24: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಗಳು ಮಾರ್ಚ್ 31ರಿಂದ ಎಪ್ರಿಲ್ 15ರವರೆಗೆ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 13,753 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 55 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆಗಳು ಸುಗಮವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಸೂಚನೆಗಳನ್ನು ನೀಡಿದ್ದಾರೆ. 

ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಇಂದು ನಡೆದ ಎಸೆಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. 

ಜಿಲ್ಲೆಯಲ್ಲಿ ಈ ಬಾರಿ ಎಸೆಸೆಲ್ಸಿ ಪರೀಕ್ಷೆಗಾಗಿ ರೆಗ್ಯೂಲರ್, ಖಾಸಗಿ ಮತ್ತು ಪುನಾರಾವರ್ತಿತರು ಸೇರಿದಂತೆ 7,185 ಬಾಲಕರು ಮತ್ತು 6,568 ಬಾಲಕಿಯರು ಸೇರಿದಂತೆ ಒಟ್ಟು 13753 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಬೈಂದೂರಿನಲ್ಲಿ 8, ಕುಂದಾಪುರದಲ್ಲಿ 9, ಕಾರ್ಕಳದಲ್ಲಿ 10, ಬ್ರಹ್ಮಾವರದಲ್ಲಿ 12 ಹಾಗೂ ಉಡುಪಿಯಲ್ಲಿ 16 ಸೇರಿದಂತೆ ಒಟ್ಟು 55 ಕೇಂದ್ರಗಳಲ್ಲಿ, ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಸಿಸಿಟಿವಿಗಳನ್ನು ಅಳವಡಿಸಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಸ್ಮಾರ್ಟ್‌ವಾಚ್, ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾಹಿತಿ ನೀಡುವಂತೆ ಮತ್ತು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನವೇ ಇವುಗಳನ್ನು ಹೊಂದಿರುವ ಬಗ್ಗೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಕಸ್ಟೋಡಿಯನ್‌ಗಳು, ಸ್ಥಾನಿಕ ಜಾಗೃತ ದಳ, ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ನಿಯೋಜಿಸುವಂತೆ ಸೂಚನೆ ನೀಡಿದ ಕೂರ್ಮಾರಾವ್, ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳಾಗದಂತೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯ ಗಳನ್ನು ಒದಗಿಸುವಂತೆ ಸೂಚಿಸಿದರು.

ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ: ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಆಗಮಿಸಲು ಬಸ್‌ಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಮತ್ತು ವಾಪಾಸ್ ಮರಳಲು ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ ಎಂದರು.

ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಈ ಬಸ್‌ಗಳಲ್ಲಿ ಪ್ರಯಾಣ ಮಾಡಬಹುದಾಗಿದ್ದು, ಜಿಲ್ಲೆಯ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪ್ರಥಮ ಚಿಕಿತ್ಸಾ ಕಿಟ್‌ನೊಂದಿಗೆ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಪ್ರಶ್ನೆಪತ್ರಿಕೆ ಬಂಡಲ್‌ಗಳನ್ನು ಖಜಾನೆಯಿಂದ ಪಡೆಯುವಾಗ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅವುಗಳನ್ನು ತೆರೆಯುವಾಗ ವೀಡಿಯೋ ಚಿತ್ರೀಕರಣ ಮಾಡುವಂತೆ ಮತ್ತು ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆ ಸಾಗಾಟ ವಾಹನ, ಪರೀಕ್ಷಾ ಕೇಂದ್ರ ಮತ್ತು ಭದ್ರತಾ ಕೊಠಡಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ಪಡೆಯುವಂತೆ ಹಾಗೂ ಎಲ್ಲಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆಪತ್ರಿಕೆಗಳು ಪರೀಕ್ಷಾ ಕೇಂದ್ರ ತಲುಪಲು ಸಾಧ್ಯವಾಗುವಂತೆ ಅಗತ್ಯವಿರುವ ವಾಹನಗಳ ವ್ಯವಸ್ಥೆ, ಮಾರ್ಗಾಧಿಕಾರಿಗಳನ್ನು ನೇಮಿಸುವಂತೆ ತಿಳಿಸಿದರು.

ಪರೀಕ್ಷೆಯ ಅವಧಿಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಗೊಂದಲಕ್ಕೀಡು ಮಾಡುವ ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದ ಜಿಲ್ಲಾಧಿಕಾರಿ ಗಳು, ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ.ಪ್ರದೇಶದಲ್ಲಿ ಸೆಕ್ಷನ್ 144ರಂತೆ ನಿಷೇಧಾಜ್ಞೆ ವಿಧಿಸುವುದರ ಜೊತೆಗೆ ಸುತ್ತಲಿನ ಜೆರಾಕ್ಸ್ ಅಂಗಡಿ ಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಗಳು ಯಾವುದೇ ಗೊಂದಲಗಳಿಲ್ಲದೇ ಸುಗಮ ಮತ್ತು ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಡಿಡಿಪಿಐ ಗಣಪತಿ, ಸಹಾಯಕ ಖಜಾನಾಧಿಕಾರಿ ರೂಪಶ್ರೀ, ಎಸೆಸೆಲ್ಸಿ ಪರೀಕ್ಷೆಯ ಜಿಲ್ಲಾ ನೋಡೆಲ್ ಅಧಿಕಾರಿ ಸಿಪ್ರಿಯಾನ್ ಮಂಥೆರೋ ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸುವ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

share
Next Story
X