Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರೈತ ವಿರೋಧಿ ಕಾನೂನಿನಿಂದ ತುಂಡು...

ರೈತ ವಿರೋಧಿ ಕಾನೂನಿನಿಂದ ತುಂಡು ಭೂಮಿಗಾಗಿ ಪರದಾಟ: ಉದ್ಯಾವರ ಹಾಲು ಉತ್ಪಾದಕರ ಸಹಕಾರಿ ಸಂಘ ಆರೋಪ

25 March 2023 5:26 PM IST
share
ರೈತ ವಿರೋಧಿ ಕಾನೂನಿನಿಂದ ತುಂಡು ಭೂಮಿಗಾಗಿ ಪರದಾಟ: ಉದ್ಯಾವರ ಹಾಲು ಉತ್ಪಾದಕರ ಸಹಕಾರಿ ಸಂಘ ಆರೋಪ

ಉಡುಪಿ, ಮಾ.25: ಕಳೆದ 17ವರ್ಷಗಳಿಂದ ಉದ್ಯಾವರ ರೈತರಿಗೆ ಹಾಲಿನ ಸಂಗ್ರಹ ಮತ್ತು ಕೆಎಂಎಫ್‌ಗೆ ಸರಬರಾಜು ಕೇಂದ್ರವಾಗಿ ಕಾರ್ಯಾಚರಿಸುತ್ತಿ ರುವ ಉದ್ಯಾವರ ಹಾಲು ಉತ್ಪಾದಕರ ಸಹಕಾರಿ ಸಂಘವು ಸರಕಾರದ ರೈತ ವಿರೋಧಿ ಕಾನೂನಿನಿಂದಾಗಿ ತುಂಡು ಸರಕಾರಿ ಜಾಗಕ್ಕಾಗಿ ಪರದಾಡು ವಂತಾಗಿದೆ ಎಂದು ಸಂಘದ ಅಧ್ಯಕ್ಷ ವಿಜಯ ಕುಮಾರ್ ಆರೋಪಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ಆಧುನಿಕ ಪರಿಕರಗಳನ್ನು ಹೊಂದಿದ್ದರೂ ಸೂಕ್ತ ಕೊಠಡಿ, ಸ್ವಂತ ಕಟ್ಟಡ ಇಲ್ಲದೆ ತೊಂದರೆ ಅನುಭವಿಸುತ್ತಿದೆ. ಈವರೆಗೆ ಬಾಡಿಗೆ ಮನೆಯಿಂದ ಬಾಡಿಗೆ ಮನೆಗಳಿಗೆ ಸ್ಥಳಾಂತರಗೊಳ್ಳುತ್ತಿದ್ದ ಸಂಘವು ಇದೀಗ ಗ್ರಾಪಂ ನೀಡಿದ ತುಂಡು ಜಾಗದಲ್ಲಿ ತಾತ್ಕಾಲಿಕ ಕಟ್ಟಡ ನಿರ್ಮಿಸಿ ಕೆಲಸ ಕಾರ್ಯವನ್ನು ಮುಂದು ವರೆಸುತ್ತಿದೆ ಎಂದರು.

ಕಳೆದ 17ವರ್ಷಗಳಿಂದ 2-3ಸೆಂಟ್ಸ್ ಸರಕಾರಿ ಜಾಗವನ್ನು ಸರಕಾರಿ ದರ ನೀಡಿ ಖರೀದಿಸಲು ಪ್ರಯತ್ನಿಸಿದರೂ ಈವರೆಗೆ ಸಾಧ್ಯವಾಗಿಲ್ಲ. ನಮ್ಮ ಮನವಿ ಒಳಗೊಂಡ ಕಡತ ಸಹಾಯಕ ಕಮಿಷನರ್ ಕುಂದಾಪುರ ಇಲ್ಲಿಂದ ತಿರಸ್ಕರಿಸ ಲ್ಪಡುತ್ತಿದೆ. ಇದಕ್ಕೆ ಕಾರಣ ಕರ್ನಾಟಕ ಭೂ ಮಂಜೂರಾತಿ ನಿಯಮಗಳನ್ವಯ ಖಾಸಗಿ ಸಂಸ್ಥೆಗಳಿಗೆ ಸರಕಾರಿ ಜಮೀನು ಮಂಜೂರು ಮಾಡಲು ಅವಕಾಶ ಇಲ್ಲದೆ ಇರುವುದು. ಇದೊಂದು ರೈತ ವಿರೋಧಿ ಕಾನೂನು ಆಗಿದೆ. ಇದನ್ನು ಯಾವುದೇ ಸರಕಾರ ಕೂಡ ತಿದ್ದುಪಡಿ ಮಾಡುವ ಕಾರ್ಯಕ್ಕೆ ಮುಂದಾಗಿಲ್ಲ. ಇದರಿಂದ ಸರಕಾರಗಳು ರೈತರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದು ತಿಳಿಯುತ್ತದೆ ಎಂದು ಅವರು ದೂರಿದರು.

ಉದ್ಯಾವರದಲ್ಲಿರುವ ಗೋಮಾಳ ಭೂಮಿಯನ್ನು ವಿವಿಧ ಸಂಸ್ಥೆಗಳಿಗೆ, ಘಟಕಗಳಿಗೆ ವಿತರಿಸಲಾಗಿದೆ. ಆದರೆ ಗೋವುಗಳನ್ನು ನಂಬಿ ಜೀವನ ಸಾಗಿಸುವ ಉದ್ಯಾವರ ಹಾಲು ಉತ್ಪಾದಕರ ಸಂಘದ ಸ್ವಂತ ಕಟ್ಟಡಕ್ಕೆ ಒಂಚೂರು ಜಮೀನು ನೀಡಲು ಅವಕಾಶ ಇಲ್ಲದೆ ಇರುವುದು ದುರಂತ. ಆದುದರಿಂದ 250ಕ್ಕಿಂತ ಅಧಿಕ ಸದಸ್ಯರನ್ನು ಹೊಂದಿರುವ ಈ ಸಂಘಕ್ಕೆ ಕೂಡಲೇ ಸರಕಾರಿ ಜಮೀನು ಮಂಜೂರು ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ದೇಜು ಪೂಜಾರಿ,  ನಿರ್ದೇಶಕರಾದ ಭಾಸ್ಕರ್ ಅಂಚನ್, ವಿಠಲ ಜತ್ತನ್ನ, ವಿಜಯ ಕುಮಾರ್ ಕಲಾಯಿ, ಸುಕುಮಾರ್ ಉಪಸ್ಥಿತರಿದ್ದರು.

share
Next Story
X