Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಹಿಳೆಯರ ಆರೋಗ್ಯ ಚಿಕಿತ್ಸೆಗಾಗಿ...

ಮಹಿಳೆಯರ ಆರೋಗ್ಯ ಚಿಕಿತ್ಸೆಗಾಗಿ ಆಯುಷ್ಮತಿ ಕ್ಲಿನಿಕ್

26 March 2023 6:36 PM IST
share
ಮಹಿಳೆಯರ ಆರೋಗ್ಯ ಚಿಕಿತ್ಸೆಗಾಗಿ ಆಯುಷ್ಮತಿ ಕ್ಲಿನಿಕ್

ಉಡುಪಿ, ಮಾ.26: ಮಹಿಳೆಯರ ಆರೋಗ್ಯ ಸುಧಾರಣೆಗಾಗಿ ಮತ್ತು  ಆರೋಗ್ಯ ಸಮಸ್ಯೆಗಳ ಕುರಿತು ಮುಕ್ತವಾಗಿ ಚರ್ಚಿಸಲು ಪ್ರತ್ಯೇಕ ಕ್ಲಿನಿಕ್‌ಗಳ ಅವಶ್ಯಕತೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ವಿಶೇಷ ಆರೋಗ್ಯ ಸೇವೆಗಳನ್ನು ಒದಗಿಸಲು ಆಯುಷ್ಮತಿ ಕ್ಲಿನಿಕ್‌ಗಳನ್ನು ರಾಜ್ಯದ ಪ್ರಮುಖ ನಗರಗಳಲ್ಲಿ ಸ್ಥಾಪಿಸ ಲಾಗುತ್ತಿದೆ. ಅದರಂತೆ ಉಡುಪಿ ಜಿಲ್ಲೆಯಲ್ಲಿ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ (ಅಲಂಕಾರ್ ಚಿತ್ರಮಂದಿರ ಹತ್ತಿರ)ದಲ್ಲಿ ಆಯುಷ್ಮತಿ ಕ್ಲಿನಿಕ್ ಆರಂಭಿಸಲಾಗಿದೆ.

ಮಹಿಳೆಯರಿಗೆ ತಮ್ಮ ಆರೋಗ್ಯ ಸಮಸ್ಯೆಗಳ ಕುರಿತು ಮುಕ್ತವಾಗಿ ಚರ್ಚಿಸಲು ಅವಕಾಶ ಕಲ್ಪಿಸುವುದು, ಹದಿಹರೆಯದ ಹೆಣ್ಣು ಮಕ್ಕಳಿಗೆ ದೈಹಿಕ ಬದಲಾವಣೆ ನೈರ್ವಲ್ಯ ಮತ್ತು ಸಂತಾನೋತ್ಪತ್ತಿ ಕುರಿತು ಅರಿವು ಮೂಡಿಸುವುದು ಮತ್ತು ಆಪ್ತ ಸಮಾಲೋಚನೆ ನಡೆಸುವುದು, 30ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಅಸಾಂಕ್ರಮಿಕ ರೋಗಗಳ ತಪಾಸಣೆ ನಡೆಸುವುದು, ರೆಪರಲ್ ಸೇವೆ ಒದಗಿಸುವುದು ಈ ಆಯುಷ್ಮತಿ ಕ್ಲಿನಿಕ್‌ನ ಪ್ರಮುಖ ಉದ್ದೇಶವಾಗಿದೆ.

ಈ ಕ್ಲಿನಿಕ್‌ನಲ್ಲಿ ಪ್ರತಿದಿನ ಒಬ್ಬ ತಜ್ಞ ವೈದ್ಯರ ಸೇವೆಯು ಲಭ್ಯವಿದ್ದು, ಸೋಮವಾರ: ಫಿಜಿಷಿಯನ್, ಮಂಗಳವಾರ: ಮೂಳೆ ಮತ್ತು ಕೀಲು ತಜ್ಞರು, ಬುಧವಾರ: ಶಸ್ತ್ರ ಚಿಕಿತ್ಸಾತಜ್ಞರು, ಗುರುವಾರ: ಮಕ್ಕಳ ತಜ್ಞರು, ಶುಕ್ರವಾರ: ಸ್ತ್ರೀರೋಗ ತಜ್ಞರು, ಶನಿವಾರ: ಇತರೆ ತಜ್ಞರು(ಕಿವಿ, ಮೂಗು, ಗಂಟಲು, ಚರ್ಮ, ನೇತ್ರ) ಮಹಿಳೆಯರನ್ನು ತಪಾಸಣೆ ನಡೆಸಲಿದ್ದಾರೆ.

ಅಲ್ಲದೆ ಆಪ್ತ ಸಮಲೋಚನೆ ಕೂಡ ಲಭ್ಯವಿದ್ದು, ಋತುಚಕ್ರ ಸಂಬಂಧಿ ಹಾಗೂ ಋತುಚಕ್ರ ನೈರ್ಮಲ್ಯ, ಕುಟುಂಬ ಕಲ್ಯಾಣ ಯೋಜನೆಗಳು, ಅಸಾಂಕ್ರಾಮಿಕ ರೋಗಗಳು, ಸಂತಾನೋತ್ಪತ್ತಿ ಅಂಗಗಳ ಸೋಂಕು/ಲೈಂಗಿಕ ಸೋಂಕುಗಳು, ಮಾನಸಿಕ ಆರೋಗ್ಯ ಸಮಸ್ಯೆಗಳು, ಹದಿಹರೆಯದ ಸಮಸ್ಯೆಗಳು, ಮುಟ್ಟು ನಿಲ್ಲುವ ಸಮಯದ ಸವಸ್ಯೆಗಳು, ಪೋಷ್ಟಿಕಾಂಶದ ಕೊರತೆಗಳ ಬಗ್ಗೆ ವೈದ್ಯರಿಂದ ಸೂಕ್ತ ಸಲಹೆ ಸೂಚನೆಗಳನ್ನು ಪಡಯಬಹುದು. ಅಲ್ಲದೇ ಲ್ಯಾಬ್ ಪರೀಕ್ಷೆಗಳ ಸೇವೆ ಮತ್ತು ಉಚಿತ ಔಷಧಿಗಳು ದೊರೆಯುತ್ತವೆ.

ಉಡುಪಿಯ ಈ ಕ್ಲಿನಿಕ್ ಬೆಳಿಗ್ಗೆ 9ಗಂಟೆಯಿಂದ ಸಂಜೆ 4.30ರವರೆಗೆ ತೆರೆದಿರುತ್ತದೆ. ಜಿಲ್ಲೆಯ ಮಹಿಳೆಯರು ಹಾಗೂ ಹೆಣ್ಣು ಮಕ್ಕಳು ಈ ಕ್ಲಿನಿಕ್‌ನ ಸದುಪಯೋಗ ಪಡೆಯಬಹುದಾಗಿದೆ.

"ಆರೋಗ್ಯ ಸಮಸ್ಯೆಗಳ ಬಗ್ಗೆ ಪರೀಕ್ಷಿಸಿಕೊಳ್ಳಲು ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಶುಲ್ಕ ನೀಡಲಾಗದೇ, ತಜ್ಞ ವೈದ್ಯರ ಸೇವೆಯಿಂದ ವಂಚಿತರಾಗಿ, ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯದೇ ಸಾಕಷ್ಟು ಸಂಖ್ಯೆಯ ಮಹಿಳೆಯರು ಮತ್ತು ಹದಿ ಹರೆಯದವರು ಅನಾರೋಗ್ಯ ಪೀಡಿತರಾಗಿ, ಅನೇಕ ಸಮಸ್ಯೆಗಳನ್ನು ಎದುರಿಸುತಿ ದ್ದಾರೆ. ಜಿಲ್ಲೆಯಲ್ಲಿ ಆರಂಭವಾಗಿರುವ ಆಯುಷ್ಮತಿ ಕ್ಲಿನಿಕ್‌ಗಳಲ್ಲಿ  ಮಹಿಳೆಯರು ಮತ್ತು ಹದಿ ಹರೆಯದವರಿಗೆ ತಜ್ಞ ವೈದ್ಯರಿಂದ ಉಚಿತ ತಪಾಸಣೆ, ಆಪ್ತ ಸಮಾ ಲೋಚನೆಯೊಂದಿಗೆ ಅಗತ್ಯ ಔಷಧಗಳನ್ನು ಉಚಿತವಾಗಿ ನೀಡಲಾಗುವುದು"
-ಕೂರ್ಮಾರಾವ್ ಎಂ., ಜಿಲ್ಲಾಧಿಕಾರಿ, ಉಡುಪಿ

ಆಯುಷ್ಮತಿ ಕ್ಲಿನಿಕ್ ಉದ್ಘಾಟನೆ
ಆಯುಷ್ಮತಿ ಕ್ಲಿನಿಕ್‌ನ ಉದ್ಘಾಟನೆಯನ್ನು ಮಾ.27ರಂದು ಬೆಳಗ್ಗೆ 11.30ಕ್ಕೆ ರಾಜ್ಯದ ಮುಖ್ಯಮಂತ್ರಿಗಳು, ಭಾರತ ಸರಕಾರದ ಆರೋಗ್ಯ ಸಚಿವರು  ಮತ್ತು ರಾಜ್ಯದ ಆರೋಗ್ಯ ಸಚಿವರು ವರ್ಚುಲ್ ಮೂಲಕ ನೆರವೇರಿಸಲಿದ್ದಾರೆ.

ಈ ಕಾರ್ಯಕ್ರಮದ ನೇರ ಪ್ರಸಾರವನ್ನು ಉಡುಪಿಯ ಅಲಂಕಾರ್ ಚಿತ್ರಮಂದಿರದ ಬಳಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಆಯುಷ್ಮತಿ ಕ್ಲಿನಿಕ್‌ನಲ್ಲಿ ಮಾಡಲಾಗಿದ್ದು, ಜಿಲ್ಲೆಯ ಆಯುಷ್ಮತಿ ಕ್ಲಿನಿಕ್‌ನ ಉದ್ಘಾಟನೆ ಸಹ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
Next Story
X