ಮಾ.31ರಿಂದ ಎಸೆಸೆಲ್ಸಿ ಪರೀಕ್ಷೆ: ನಿಷೇಧಾಜ್ಞೆ
ಉಡುಪಿ, ಮಾ.27: ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 31ರಿಂದ ಎಪ್ರಿಲ್ 15ರವರೆಗೆ ಜಿಲ್ಲೆಯ ಒಟ್ಟು 55 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಯಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.
Next Story