ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 75 ವಿದ್ಯಾರ್ಥಿಗಳು ಗೈರು
ಉಡುಪಿ, ಮಾ.31: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಗಳು ಇಂದಿನಿಂದ ಜಿಲ್ಲೆಯ ಒಟ್ಟು 54 ಕೇಂದ್ರಗಳಲ್ಲಿ ಆರಂಭಗೊಂಡಿದ್ದು, ಇಂದು ನಡೆದ ಪ್ರಥಮ ಭಾಷಾ ಪರೀಕ್ಷೆಗೆ ಒಟ್ಟು 75 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಪರೀಕ್ಷೆಗೆ ಫ್ರೆಶರ್ 13129, ರಿಪೀಟರ್ 164 ಸೇರಿದಂತೆ ಒಟ್ಟು 13310 ಮಂದಿ ವಿದ್ಯಾರ್ಥಿಗಳು ನೋಂದಾವಣೆ ಮಾಡಿಕೊಂಡಿದ್ದು, 13235 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ ಫ್ರೆಶರ್ 50 ಮತ್ತು ರಿಪೀಟರ್ 25 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ ಎಂದು ವಿದ್ಯಾಂಗ ಇಲಾಖೆ ತಿಳಿಸಿದೆ.
ಜಿಲ್ಲಾಧಿಕಾರಿ ಭೇಟಿ: ಎಸೆಸೆಲ್ಸಿ ಪರೀಕ್ಷೆ ಪ್ರಯುಕ್ತ ಉಡುಪಿಯ ಬೋರ್ಡ್ ಹೈಸ್ಕೂಲ್ನಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಭೇಟಿ ನೀಡಿದರು.
ಈ ವೇಳೆ ಇವರು ಕೇಂದ್ರದಲ್ಲಿ ಕೈಗೊಂಡಿರುವ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಬಗ್ಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಡಯಟ್ನ ಡಾ.ಅಶೋಕ್ ಕಾಮತ್ ಮೊದಲಾದವರು ಹಾಜರಿದ್ದರು.