ಜೂ.6: ಗೃಹ ಸಚಿವ ಡಾ.ಪರಮೇಶ್ವರ್ ಉಡುಪಿಗೆ ಭೇಟಿ
ಉಡುಪಿ, ಜೂ.5: ಕರ್ನಾಟಕ ಸರಕಾರದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಜೂ.6ರ ಮಂಗಳವಾರ ಅಪರಾಹ್ನ ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಡಾ.ಪರಮೇಶ್ವರ್ ಅವರು ಅಪರಾಹ್ನ 3 ಗಂಟೆಗೆ ಆಗಮಿಸಲಿದ್ದು, ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಹಿರಿಯ ಅಧಿಕಾರಿಗಳೊಂದಿಗೆ ಕಾನೂನು ಪಾಲನೆ ಕುರಿತು ಸಭೆ ನಡೆಸಲಿದ್ದಾರೆ.
ಬಳಿಕ ಅವರು ಸಂಜೆ 5:00 ಗಂಟೆಗೆ ಬ್ರಹ್ಮಗಿರಿಯ ನಾಯರ್ಕೆರೆ ಯಲ್ಲಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿರುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡ ವೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story