Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಜಾತ್ಯತೀತವಾಗಿ ನ್ಯಾಯಪರ ಕೆಲಸ...

ಜಾತ್ಯತೀತವಾಗಿ ನ್ಯಾಯಪರ ಕೆಲಸ ಮಾಡುತ್ತೇನೆ: ಹಾಲಾಡಿ ಶ್ರೀನಿವಾಸ ಶೆಟ್ಟಿ

ಅತಂತ್ರ ಅಥವಾ ಸಮ್ಮಿಶ್ರ ಸರಕಾರದಿಂದ ಕ್ಷೇತ್ರದ ಅಭಿವೃದ್ಧಿಗೆ ತೊಡಕಾಗದು

ಸಂದರ್ಶನ: ನಝೀರ್ ಪೊಲ್ಯಸಂದರ್ಶನ: ನಝೀರ್ ಪೊಲ್ಯ24 May 2018 11:39 AM IST
share
ಜಾತ್ಯತೀತವಾಗಿ ನ್ಯಾಯಪರ ಕೆಲಸ ಮಾಡುತ್ತೇನೆ: ಹಾಲಾಡಿ ಶ್ರೀನಿವಾಸ ಶೆಟ್ಟಿ

ನಾಲ್ಕು ಬಾರಿ ಬಿಜೆಪಿಯಲ್ಲಿ, ಒಂದು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಪ್ರತೀ ಚುನಾವಣೆಯಲ್ಲೂ ಗೆಲುವಿನ ಅಂತರ ಹೆಚ್ಚಿಸಿಕೊಂಡು ಹೋಗಿದ್ದಾರೆ. 1999ರಲ್ಲಿ ಕಾಂಗ್ರೆಸ್‌ನ ಪ್ರತಾಪ್‌ಚಂದ್ರ ಶೆಟ್ಟಿ ವಿರುದ್ಧ 1,021, 2004ರಲ್ಲಿ ಕಾಂಗ್ರೆಸ್‌ನ ಅಶೋಕ್ ಕುಮಾರ್ ಹೆಗ್ಡೆ ವಿರುದ್ಧ 19,665, 2008ರಲ್ಲಿ ಕಾಂಗ್ರೆಸ್‌ನ ಕೆ.ಜಯಪ್ರಕಾಶ್ ಹೆಗ್ಡೆ ವಿರುದ್ಧ 25,083, 2013ರಲ್ಲಿ (ಪಕ್ಷೇತರರಾಗಿ) ಕಾಂಗ್ರೆಸ್‌ನ ಮಲ್ಯಾಡಿ ಶಿವರಾಮ್ ಶೆಟ್ಟಿ ವಿರುದ್ಧ 40,611, 2018ರಲ್ಲಿ ಕಾಂಗ್ರೆಸ್‌ನ ರಾಕೇಶ್ ಮಲ್ಲಿ ವಿರುದ್ಧ 56,405 ಮತಗಳ ಅಂತರದಲ್ಲಿ ಜಯ ಗಳಿಸಿದ್ದರು. ವೀರಪ್ಪಮೊಯ್ಲಿ (ಕಾರ್ಕಳ ಕ್ಷೇತ್ರದಲ್ಲಿ ಒಟ್ಟು ಆರು ಬಾರಿ) ನಂತರ ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಅತೀ ಹೆಚ್ಚು ಬಾರಿ ಗೆದ್ದವರು ಹಾಲಾಡಿ ಶ್ರೀನಿವಾಸ ಶೆಟ್ಟಿ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲೇ ಅತ್ಯಂತ ಹೆಚ್ಚು ಅಂತರದಲ್ಲಿ ಗೆಲುವು ಸಾಧಿಸಿ ಐದನೆ ಬಾರಿಗೆ ಕುಂದಾಪುರ ಶಾಸಕರಾಗಿ ಆಯ್ಕೆಯಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ‘ವಾರ್ತಾಭಾರತಿ’ ಜೊತೆ ನಡೆಸಿದ ಸಂದರ್ಶನದ ಆಯ್ದ ಭಾಗಗಳ ವಿವರ ಇಲ್ಲಿದೆ.

► ನಿಮ್ಮ ಗೆಲುವಿಗೆ ಕಾರಣವಾದ ಅಂಶಗಳೇನು?

ಈ ಬಾರಿ ನಾನು ಬಿಜೆಪಿ ಅಭ್ಯರ್ಥಿ ಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿ ಕೆಲಸಗಳು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಸಾಧನೆಗಳು, ವಾಜಪೇಯಿ ಪ್ರಧಾನ ಮಂತ್ರಿಯಾಗಿದ್ದ ಜಾರಿಗೆ ತಂದ ಒಳ್ಳೆಯ ಕಾರ್ಯಕ್ರಮ ಮತ್ತು ನಾನು ನಡೆದು ಬಂದ ದಾರಿಯನ್ನು ನೋಡಿ ಜನ ಈ ಬಾರಿ ನನಗೆ ಮತ ಹಾಕಿದ್ದಾರೆ. ಕ್ಷೇತ್ರದ ಜನತೆಗೆ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಟ್ಟಿದ್ದೇನೆ. ಅದನ್ನು ಜನ ಒಪ್ಪಿದ್ದಾರೆ. ಆದುದರಿಂದ ಮತ್ತೆ ಅವರ ಸೇವೆ ಮಾಡುವುದಕ್ಕಾಗಿ ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಕ್ಷೇತ್ರದ ಮತದಾರರಿಂದಾಗಿ ನಾನು ಪ್ರತಿ ಚುನಾವಣೆಯಲ್ಲೂ ನನ್ನ ಗೆಲುವಿನ ಅಂತರವನ್ನು ಹೆಚ್ಚಿಸಿಕೊಂಡು ಹೋಗಲು ಸಾಧ್ಯವಾಗಿದೆ.

► ಕ್ಷೇತ್ರದ ಅಭಿವೃದ್ಧಿಯಲ್ಲಿ ನೀವು ಯಾವ ಅಂಶಗಳಿಗೆ ಹೆಚ್ಚು ಆದ್ಯತೆ ನೀಡುತ್ತೀರಿ?

ಕ್ಷೇತ್ರದ ಜನರ ಬೇಡಿಕೆ, ಅಗತ್ಯ ಕೆಲಸಗಳು ಮತ್ತು ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತೇನೆ. ಪ್ರಾಥಮಿಕ ಶಾಲೆಯಿಂದ ಪದವಿ ಕಾಲೇಜು ವರೆಗಿನ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ರಸ್ತೆಗಳು, ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ನನ್ನ ಕ್ಷೇತ್ರದಲ್ಲಿ ಅಧಿಕಾರವನ್ನು ವೀಕೇಂದ್ರೀಕರಣಗೊಳಿಸುತ್ತೇನೆ. ಶಾಲಾಭಿವೃದ್ಧಿ ಸಮಿತಿ ರಚನೆ ಮಾಡುವ ಅಧಿಕಾರ ಶಾಸಕರಿಗೆ ಇದ್ದರೂ ಕೂಡ ನಾನು ಯಾವುದೇ ಶಾಲೆಯ ಆಡಳಿತ ಮಂಡಳಿಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಆ ಜವಾಬ್ದಾರಿಯನ್ನು ಆಯಾ ಶಾಲೆಗಳ ಅಧ್ಯಾಪಕ ರಿಗೆ ಬಿಟ್ಟು ಕೊಡುತ್ತೇನೆ. ಇದರಲ್ಲಿ ಒಂದೇ ಒಂದು ನೇಮಕಾತಿಯನ್ನು ನಾನು ಮಾಡುವುದಿಲ್ಲ. ಶಾಲೆ ಮತ್ತು ಶಿಕ್ಷಣಕ್ಕೆ ಅನುಕೂಲ ಆಗುವ ರೀತಿಯಲ್ಲಿ ಒಳ್ಳೆಯವರನ್ನು ನೋಡಿ ನೀವೇ ನೇಮಕಾತಿ ಮಾಡಿಕೊಳ್ಳಿ ಎಂದು ಶಾಲೆಯವರಿಗೆ ಸಲಹೆ ನೀಡುತ್ತೇನೆ.

► ನೀವು ಕಂಡಂತೆ ಕ್ಷೇತ್ರದ ಪ್ರಮುಖ ಸಮಸ್ಯೆಗಳೇನು?

ನನ್ನ ಕ್ಷೇತ್ರದ ಪ್ರಮುಖ ಸಮಸ್ಯೆಯಾಗಿರುವ ಕುಡಿಯುವ ನೀರಿನ ವ್ಯವಸ್ಥೆ ಮತ್ತಷ್ಟು ಉತ್ತಮವಾಗಬೇಕಾಗಿದೆ. ನಾನು ಆದಷ್ಟು ಹಲವು ಕಡೆಗಳಲ್ಲಿ ಈ ಸಮಸ್ಯೆಯನ್ನು ಬಗೆಹರಿಸಿದ್ದೇನೆ. ಆದರೂ ಇನ್ನು ತುಂಬಾ ಮಾಡಬೇಕಾ ಗಿದೆ. ಅದಕ್ಕೆ ಬೇಕಾದ ಕಾರ್ಯಯೋಜನೆಯನ್ನು ಮುಂದಿನ ದಿನಗಳಲ್ಲಿ ಹಾಕಿಕೊಳ್ಳುತ್ತೇನೆ. ಅದೇ ರೀತಿ ಮತ್ತೊಂದು ಬಹಳ ದೊಡ್ಡ ಸಮಸ್ಯೆ ಅಂದರೆ ನಿರುದ್ಯೋಗ. ಈ ಸಮಸ್ಯೆ ಬಗೆಹರಿಯಬೇಕಾದರೆ ನನ್ನಿಂದ ಆಗಲ್ಲ, ಅದು ರಾಜ್ಯ ಹಾೂ ರಾಷ್ಟ್ರ ಮಟ್ಟದಲ್ಲಿ ಆಗಬೇಕಾಗಿದೆ.

► ವಿಜಯೋತ್ಸವ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪ ಸತ್ಯವೇ?

ನನ್ನ ಕ್ಷೇತ್ರದಲ್ಲಿ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಆಸ್ಪತ್ರೆಗೆ ಸೇರಿಸುವಂತಹ ಗಂಭೀರ ಗಲಾಟೆಗಳು ಎಲ್ಲೂ ನಡೆದಿಲ್ಲ. ಅಲ್ಲಲ್ಲಿ ಮಾತಿನ ಚಕಮಕಿ ನಡೆದಿರಬಹುದು. ವಿರೋಧಿಗಳು ಸುಳ್ಳು ಆರೋಪ ಮಾಡುತ್ತಿದ್ದಾರೆ. ನಮ್ಮಲ್ಲಿ ಅಂತಹ ಯಾವುದೇ ಘರ್ಷಣೆಗಳು ನಡೆಯುವುದಿಲ್ಲ. ಚುನಾವಣೆ ಆದ ನಂತರ ಎಲ್ಲ ಪಕ್ಷದವರನ್ನು ನಾವು ಗೌರವಿಸಿಕೊಂಡು ಹೋಗುತ್ತೇವೆ.

► ಮತಯಂತ್ರದಲ್ಲಿನ ದೋಷದ ಕುರಿತ ವಿರೋಧಿ ಪಕ್ಷಗಳ ಆರೋಪದ ಬಗ್ಗೆ ನೀವು ಏನು ಹೇಳುತ್ತೀರಿ?

ಈ ಆರೋಪವನ್ನು ನಾನು ಒಪ್ಪುವುದಿಲ್ಲ. ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾಗಿದ್ದ ಮೊಯ್ದಿನ್ ಬಾವಾ ಕಳೆದ ಬಾರಿ ಗೆದ್ದಾಗ ಇದೇ ಯಂತ್ರ ಸರಿ ಇತ್ತು. ಆದರೆ ಈ ಬಾರಿ ಸೋತಾಗ ಸರಿ ಇಲ್ಲ ಎಂದು ಹೇಳುವುದು ಎಷ್ಟು ನ್ಯಾಯ?

► ಕುಂದಾಪುರದ ಪಕ್ಷದೊಳಗಿನ ಭಿನ್ನಮತವನ್ನು ಯಾವ ರೀತಿ ಸರಿಪಡಿಸುತ್ತೀರಿ?

ಪಕ್ಷದೊಳಗಿನ ಭಿನ್ನಮತವನ್ನು ಸರಿಪಡಿಸುವ ಜವಾಬ್ದಾರಿ ಪಕ್ಷಕ್ಕೆ ಬಿಟ್ಟ ವಿಚಾರ. ನಾನೊಬ್ಬ ಶಾಸಕ ಮಾತ್ರ. ಅದಕ್ಕಾಗಿ ಕ್ಷೇತ್ರ, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಪಕ್ಷದ ಪದಾಧಿಕಾರಿಗಳಿದ್ದಾರೆ. ಅದು ಅವರ ವಿಮರ್ಶೆಗೆ ಬಿಟ್ಟ ವಿಚಾರ. ಭಿನ್ನಮತೀಯರು ಬಿಜೆಪಿ ಸದಸ್ಯರಾಗಿದ್ದುಕೊಂಡು ಚುನಾ ವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಮತ ಹಾಕುವಂತೆ ನನ್ನ ವಿರುದ್ಧ ಪ್ರಚಾರ ಮಾಡಿದ್ದಾರೆ. ಅದಕ್ಕೆ ಬೇಕಾದ ದಾಖಲೆಗಳು ನನ್ನ ಬಳಿ ಇವೆ. ನನ್ನ ಆಯ್ಕೆ ವಿರೋಧಿಸಿ ಪಕ್ಷದ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದ ಭಿನ್ನಮತೀಯರ ಮತಗಟ್ಟೆಗಳಲ್ಲೂ ಎದುರು ಪಕ್ಷದವರಿಗೆ ಮುನ್ನಡೆ ಸಿಕ್ಕಿಲ್ಲ. ಎಲ್ಲ ಮತಗಟ್ಟೆಗಳಲ್ಲಿಯೂ ನನಗೇ ಮುನ್ನಡೆ ದೊರೆತಿದೆ.

► ಅತಂತ್ರ ಸರಕಾರದಿಂದ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗಬಹುದೇ?

ಅತಂತ್ರ ಅಥವಾ ಸಮ್ಮಿಶ್ರ ಸರಕಾರ ಯಾವುದೂ ಇದ್ದರೂ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ತೊಡಕಾಗುವುದಿಲ್ಲ. ಈ ಹೊಸ ಸಮ್ಮಿಶ್ರ ಸರಕಾರದ ಮುಂದಿನ ಹೆಜ್ಜೆ ಏನು ಅಂತ ನೋಡಬೇಕಾಗುತ್ತದೆ. ಸಮ್ಮಿಶ್ರ ಸರಕಾರ ರಾಜ್ಯ ದಲ್ಲಿ ಮಾತ್ರವಲ್ಲ ಕೇಂದ್ರದಲ್ಲಿಯೂ, ಮಹಾರಾಷ್ಟ್ರ, ಬಿಹಾರದಲ್ಲೂ ಇದೆ. ಈ ಹಿಂದೆ ಪಕ್ಷೇತರ ಶಾಸಕನಾಗಿದ್ದಾಗ ಕೂಡ ನನಗೆ ಅನುದಾನ ಯಾರಿಗಿಂತಲೂ ಕಡಿಮೆ ಇಲ್ಲ ಎಂಬಂತೆ ಹಿಂದಿನ ಸರಕಾರ ನೀಡಿದೆ. ಅನುದಾನದ ವಿಚಾರದಲ್ಲಿ ಸಾಕಷ್ಟು ಗೌರವ ಕೊಟ್ಟಿದ್ದಾರೆ. ಯಾರು ಕೂಡ ನನಗೆ ಅನುದಾನ ನಿರಾಕರಿಸಿಲ್ಲ. ಅದೇ ಪ್ರಯತ್ನ ಈ ಸರಕಾರದಲ್ಲೂ ಮಾಡುತ್ತೇನೆ.

ನಾನು ಯಾವುದೇ ಜಾತಿ ಸಂಘಟನೆಗಳಿಗೆ ಹೋಗುವುದಿಲ್ಲ. ಸ್ವಜಾತಿ ಸೇರಿದಂತೆ ಯಾವುದೇ ಜಾತಿ ಸಂಘಟನೆಗಳಿಗೆ ಒತ್ತು ಕೊಡುವುದಿಲ್ಲ. ಅನ್ಯಾಯ ಮಾಡಿದವರಿಗೆ ಬೆಂಬಲ ನೀಡುವುದಿಲ್ಲ. ಐದು ವರ್ಷಗಳ ಕಾಲ ಜಾತ್ಯತೀತವಾಗಿ ಮತ್ತು ನ್ಯಾ ಯಪರವಾಗಿ ಕೆಲಸ ಮಾಡುತ್ತೇನೆ.

ಹಾಲಾಡಿ ಶ್ರೀನಿವಾಸ ಶೆಟ್ಟಿ,  ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ

share
ಸಂದರ್ಶನ: ನಝೀರ್ ಪೊಲ್ಯ
ಸಂದರ್ಶನ: ನಝೀರ್ ಪೊಲ್ಯ
Next Story
X