-

ಮುಖ್ಯಮಂತ್ರಿಗೆ ಒಂದು ಪತ್ರ

ಇದು ಕನ್ನಡ ಸಾಹಿತ್ಯ ಪರಿಷತ್‌ಗೆ ಹಾಗೂ ಸಮಸ್ತ ಕನ್ನಡಿಗರಿಗೆ ಮಾಡಿದ ಅನ್ಯಾಯವಲ್ಲವೇ?

-

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022ರ ಜಾರಿಯಲ್ಲಿ ಪ್ರಾಧಿಕಾರದ, ರಾಜ್ಯಮಟ್ಟದ ಹಾಗೂ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರನ್ನು ಕೈಬಿಟ್ಟಿರುವುದನ್ನು ಖಂಡಿಸಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಂದ ಮುಖ್ಯಮಂತ್ರಿಯವರಿಗೆ ಪತ್ರ

ನ್ಯಾಯಮೂರ್ತಿ ಶ್ರೀ ಎಸ್.ಆರ್. ಬನ್ನೂರಮಠ ಅವರ ನೇತೃತ್ವದ ಕರ್ನಾಟಕ ಕಾನೂನು ಆಯೋಗವು ತನ್ನ ಐವತ್ತೇಳನೇ ವರದಿಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಅನ್ನು ಸರಕಾರಕ್ಕೆ ಸಲ್ಲಿಸಿ, ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಉತ್ತಮ ಅವಕಾಶಗಳನ್ನು ಒದಗಿಸುವುದಕ್ಕಾಗಿ ಉಪಬಂಧ ಕಲ್ಪಿಸುವ ಒಂದು ವಿಧೇಯಕ ಎಂದು ಸ್ಪಷ್ಟವಾಗಿ ನಮೂದಿಸಿದೆ. ಕರ್ನಾಟಕ ಕಾನೂನು ಆಯೋಗವು ಸರಕಾರಕ್ಕೆ ಸಲ್ಲಿಸಿದ್ದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022ರ ಕಲಂ-7ರಲ್ಲಿ ಅಧಿಕೃತ ಭಾಷೆಯ ಅನುಷ್ಠಾನಕ್ಕಾಗಿ ಕಾರ್ಯವ್ಯವಸ್ಥೆ ಶೀರ್ಷಿಕೆಯಡಿಯಲ್ಲಿ ಒಂದು ರಾಜ್ಯಮಟ್ಟದ ಸಮಿತಿ ಇರತಕ್ಕದ್ದು ಎಂದು ಉಲ್ಲೇಖಿಸಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ ಇವರನ್ನು ರಾಜ್ಯಮಟ್ಟದ ಸಮಿತಿಯ ಸದಸ್ಯರನ್ನಾಗಿಯೂ ಹಾಗೂ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇವರನ್ನು ಜಿಲ್ಲಾ ಮಟ್ಟದ ಸದಸ್ಯರುಗಳನ್ನಾಗಿಯೂ ಸೇರ್ಪಡಿಸಿ, ವಿಧೇಯಕ ಜಾರಿಗೆ ತರಲು ಮುಂದಿನ ಕ್ರಮಕ್ಕಾಗಿ ಸರಕಾರಕ್ಕೆ ಸಲ್ಲಿಸಿತ್ತು.

ದಿನಾಂಕ 22-09-2022ರಂದು ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶ್ರೀ ವಿ. ಸುನೀಲ್ ಕುಮಾರ್ ಅವರು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ವಿಧಾನಸಭೆಯ ಅಧಿವೇಶನದಲ್ಲಿ ಮಂಡಿಸಿದಾಗ, ಮಂಡಿಸಿದ ಈ ವಿಧೇಯಕದ ಕಲಂ-7ರಲ್ಲಿ ತಿಳಿಸಿದಂತೆ ಪ್ರಸ್ತಾಪಿತ ವಿಧೇಯಕದಲ್ಲಿ ಇದ್ದ, ರಾಜ್ಯಮಟ್ಟದ ಸಮಿತಿಯಲ್ಲಿ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ ಇವರನ್ನು ಹಾಗೂ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇವರುಗಳನ್ನು ಜಾರಿ ಪ್ರಾಧಿಕಾರದಿಂದ ಕೈಬಿಡಲಾಗಿದೆ.

ಸರಕಾರದ ಈ ಕ್ರಮದಿಂದಾಗಿ, ಸಮಗ್ರ ಕನ್ನಡಿಗರ ಏಕೈಕ ಪ್ರಾತಿನಿಧಿಕ ಹಾಗೂ ಎಲ್ಲ ಕನ್ನಡ ಸಂಘ-ಸಂಸ್ಥೆಗಳ ಮಾತೃ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್‌ಗೆ ಹಾಗೂ ಸಮಸ್ತ ಕನ್ನಡಿಗರಿಗೆ ಘೋರ ಅನ್ಯಾಯವಾಗಿದೆ ಮತ್ತು ಅಕ್ಷಮ್ಯ ಅಪರಾಧವಾಗಿದೆ. ಇದು ಕನ್ನಡ ವಿರೋಧಿಗಳ ಕುತಂತ್ರ ಹಾಗೂ ಕನ್ನಡಿಗರನ್ನು ಪ್ರತಿನಿಧಿಸುವ ಕನ್ನಡ ಸಾಹಿತ್ಯ ಪರಿಷತ್‌ಗೆ ಮಾತ್ರವಲ್ಲ, ಎಲ್ಲ ಕನ್ನಡಿಗರಿಗೆ ತೋರುತ್ತಿರುವ ಅಸಡ್ಡೆ, ಅಸಹನೆ, ತಾತ್ಸಾರ ಹಾಗೂ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತದೆ. ಕನ್ನಡ ಸಾಹಿತ್ಯ ಪರಿಷತ್‌ನ್ನು ಈ ವಿಧೇಯಕದಿಂದ ಕೈಬಿಡುವ ಮೂಲಕ ಸರಕಾರವು ಕನ್ನಡ ವಿರೋಧಿ ಧೋರಣೆ ತೋರುತ್ತಿದೆ ಎಂದು ಸಮಗ್ರ ಕನ್ನಡಿಗರು ಅದರಲ್ಲೂ, ಸಾಹಿತಿಗಳು, ಸಂಘಟಕರು, ಕನ್ನಡಪರ ಹೋರಾಟಗಾರರು ಖಂಡಿಸುತ್ತಿದ್ದಾರೆ. ಜೊತೆಗೆ ತಮಗೆ ಈಗಾಗಲೇ ತಿಳಿದಿರುವಂತೆ ನನ್ನ ಹಾಗೂ ತಮ್ಮ ತವರು ಜಿಲ್ಲೆಯಾದ ಹಾವೇರಿಯಲ್ಲಿ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿದ್ದು, ಸಮ್ಮೇಳನದ ಸಂದರ್ಭದಲ್ಲಿ ಈ ವಿಚಾರವನ್ನೇ ಮುಂದಿಟ್ಟುಕೊಂಡು ಪ್ರತಿಭಟನೆ, ಘೋಷಣೆ ಮುಂತಾದ ಅಹಿತಕರ ಘಟನೆಗಳು ನಡೆಯುವ ಎಲ್ಲ ಸಾಧ್ಯತೆಗಳು ಹೆಚ್ಚಾಗುವಂತೆ ಕಾಣುತ್ತಿವೆ. ವಿಧಾನಸಭೆಯ ಅಧಿವೇಶನದಲ್ಲಿ ಸರಕಾರ ಮಂಡಿಸಿದ ಈ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022ರಲ್ಲಿದ್ದ ಕನ್ನಡ ಸಾಹಿತ್ಯ ಪರಿಷತ್‌ನ ಹೆಸರನ್ನು ಕೈ ಬಿಟ್ಟಿರುವ ಈ ವಿಚಾರ ಈಗ ಕಾಳ್ಗಿಚ್ಚಿನಂತೆ ಎಲ್ಲ ಕಡೆ ಹಬ್ಬುತ್ತಿದೆ. ಜೊತೆಗೆ ನಾಡಿನಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದು, ಇದು ಕೈ ಮೀರುವುದರ ಜೊತೆಗೆ ಸಾಹಿತ್ಯ ಸಮ್ಮೇಳನದ ಮೇಲೆ ಕರಿಛಾಯೆ ಮೂಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಆದ್ದರಿಂದ ತಾವು ತಕ್ಷಣ ಸೂಕ್ತ ಕ್ರಮಕೈಗೊಳ್ಳಬೇಕು. ಜೊತೆಗೆ ಕನ್ನಡ ಸಾಹಿತ್ಯ ಪರಿಷತ್‌ನ ಹೆಸರನ್ನು ಕೈಬಿಟ್ಟಿರುವ ಅಧಿಕಾರಿಗಳನ್ನು ಗುರುತಿಸಿ, ಅವರ ಹೆಸರುಗಳನ್ನು ಸಾರ್ವಜನಿಕವಾಗಿ ಪ್ರಕಟಿಸಿ ಪರಿಷತ್‌ಗೆ ಹಾಗೂ ಕನ್ನಡಿಗರಿಗೆ ಆಗಿರುವಂತಹ ಅನ್ಯಾಯವನ್ನು ಸರಿಪಡಿಸಿಕೊಡಬೇಕೆಂಬುದು ಕನ್ನಡಿಗರೆಲ್ಲರ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ, ತಾಲೂಕು, ಹೋಬಳಿ, ಗಡಿರಾಜ್ಯ, ಹೊರರಾಜ್ಯ ಅಧ್ಯಕ್ಷರುಗಳ, ಕಾರ್ಯಕಾರಿ ಸಮಿತಿಗಳ ಒಕ್ಕೊರಲ ಧ್ವನಿಯಾಗಿದೆ. 

ಕಲಂ-7ರಲ್ಲಿ ರಾಜ್ಯಮಟ್ಟದ ಸಮಿತಿಯನ್ನು ಪರಿಷ್ಕೃತಗೊಳಿಸ ಲಾಗಿದ್ದು, ಈ ಸಮಿತಿಯಲ್ಲಿರುವ ಎಲ್ಲರೂ ಸರಕಾರದ ಅಧಿಕಾರಿಗಳೇ ಇದ್ದು, ಸ್ವತಂತ್ರವಾಗಿರುವ, ಸ್ವಾಯತ್ತತೆಯಿಂದ ಸರಕಾರವನ್ನು ಎಚ್ಚರಿಸುವ ಯಾವುದೇ ಸಂಸ್ಥೆ ಇರುವುದಿಲ್ಲ. ಹಾಗಾಗಿ His Masters Voice (HMV)  ಅಂದರೆ, ಸರಕಾರದ ಧ್ವನಿಯಾಗುವುದೇ ಹೊರತು, ಕನ್ನಡದ ಧ್ವನಿಯಾಗುವುದಿಲ್ಲ. ಜೊತೆಗೆ ಸರಕಾರದ ಮುಖ್ಯ ಕಾರ್ಯದರ್ಶಿಯನ್ನು ಸಮಿತಿಯ ಉಪಾಧ್ಯಕ್ಷರನ್ನಾಗಿಸಿ, ಸಚಿವ ಸ್ಥಾನಮಾನ ಹೊಂದಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಸಮಿತಿಗೆ ಕೇವಲ ಸದಸ್ಯರನ್ನಾಗಿಸಿರುವುದು ಕನ್ನಡಿಗರಿಗೆ ಮಾಡಿದ ಅವಮಾನವಾಗಿದೆ ಹಾಗೂ ಅಧಿಕಾರಶಾಹಿ ಧೋರಣೆಯಿಂದ ಸರಕಾರವನ್ನು ಶರಣಾಗತಿ ಮಾಡುವಂತೆ ಕಂಡುಬರುತ್ತಿರುವುದು, ಕನ್ನಡವನ್ನು ವ್ಯವಸ್ಥಿತವಾಗಿ ಹತ್ತಿಕ್ಕಲು ಅಧಿಕಾರಿಗಳು ಸರಕಾರವನ್ನು ತಪ್ಪುದಾರಿಗೆ ಎಳೆದು ತರುವ ಕುತಂತ್ರವಾಗಿದೆ. ಅದರಲ್ಲೂ ಕನ್ನಡಪರ ಕೆಲಸವನ್ನು ಮಾಡಬೇಕಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳೇ ಕನ್ನಡವನ್ನು ಅಧಿಕಾರಶಾಹಿಗಳ ನಿಯಂತ್ರಣದಲ್ಲಿಡುವಂತೆ ಈ ವಿಧೇಯಕವನ್ನು ರೂಪಿಸಿ, ಸರಕಾರವನ್ನು ಬಲಹೀನವನ್ನಾಗಿಸಿರುವುದು ಅತ್ಯಂತ ಖೇದಕರ ಎಂಬ ಮಾತುಗಳು ಮಾಧ್ಯಮಗಳಲ್ಲಿ, ಸಾರ್ವಜನಿಕರಲ್ಲಿ ಎದ್ದು ಕಾಣುತ್ತಿದ್ದು, ಈ ಬಗ್ಗೆ ಚರ್ಚೆಯೂ ಪ್ರಾರಂಭವಾಗಿದೆ. ಜೊತೆಗೆ ಕನ್ನಡ ಅನುಷ್ಠಾನದ ಈ ಮಹತ್ವದ ವಿಧೇಯಕದಿಂದ ಕನ್ನಡದ ಅಸ್ಮಿತೆಯ ಪ್ರತೀಕವಾಗಿರುವ ಕನ್ನಡ ಸಾಹಿತ್ಯ ಪರಿಷತ್ತನ್ನು ಹೊರಗಿಟ್ಟಿರುವುದು ಚಳವಳಿಯ ರೂಪದಲ್ಲೂ ಹೊರಹೊಮ್ಮುವ ಸಾಧ್ಯತೆ ಇದೆ. ಪರಿಸ್ಥಿತಿ ಕೈ ಮೀರಿ ಹೋಗುವುದಕ್ಕಿಂತ ಮುಂಚೆ ಸರಕಾರ ತಕ್ಷಣ ಎಚ್ಚೆತ್ತುಕೊಂಡು ಕ್ರಮಕೈಗೊಳ್ಳಬೇಕು. ಸರಕಾರದ ಜೊತೆ ಸೌಹಾರ್ದಯುತ ಸಂಬಂಧವನ್ನು ಹೊಂದಬೇಕೆಂಬ ಉದ್ದೇಶದಿಂದ ಹಾಗೂ ಮುಂದೆ ಆಗುವ ಅನಾಹುತಕ್ಕೆ ಪರಿಷತ್ ಹೊಣೆಯಾಗದಿರುವುದರಿಂದ ಈ ಬಗ್ಗೆ ತಮಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತಿದ್ದೇವೆ.

ಕನ್ನಡ ಭಾಷೆಯ ಅಭಿವೃದ್ಧಿ ಕುರಿತು ಆಳವಾಗಿ ಅಧ್ಯಯನ ನಡೆಸಿ, ಚರ್ಚಿಸಿ, ಸಿದ್ಧಪಡಿಸಲಾದ ಈ ವಿಧೇಯಕವನ್ನು ಜಾರಿ ಮಾಡಲೇಬೇಕಾದ ಅನಿವಾರ್ಯತೆ ಸರಕಾರಕ್ಕೆ ಇದೆ. ವಿಧೇಯಕ ತಯಾರಿಸಿದ್ದು ಆಗಲೇಬೇಕಾದ ಮತ್ತು ಶ್ರೇಷ್ಠ ಕಾರ್ಯವಾಗಿದೆ. ಆದ್ದರಿಂದ ಮಂಡನೆಯಾಗಿರುವ ಈ ವಿಧೇಯಕವು ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ಅಧಿವೇಶನದಲ್ಲಿ ಚರ್ಚೆಯಾಗುವುದು ಎಂದು ಮಾಧ್ಯಮಗಳ ಮೂಲಕ ವರದಿಯಾಗಿದ್ದು, ಕನ್ನಡದ ಕೆಲಸವಾಗಿರುವ ಈ ವಿಧೇಯಕ ಜಾರಿಗೊಳಿಸುವುದು ಸರಕಾರದ ಆದ್ಯ ಕರ್ತವ್ಯವಾಗಿರುವುದರಿಂದ, ವಿಧೇಯಕದಲ್ಲಿರುವ ತಪ್ಪುಗಳನ್ನು ಸರಿಪಡಿಸಿ, ಕನ್ನಡ ನಾಡಿನಲ್ಲಿ ಕನ್ನಡ ಭಾಷೆ ಉಳಿಸಿ, ಬೆಳೆಸುವುದರ ಜತೆಗೆ ಅನ್ಯ ಭಾಷೆಗಳ ದಬ್ಬಾಳಿಕೆಗೆ ಅಂಕುಶ ಹಾಕಲು ಜಾರಿಗೆ ತರಲಾಗುತ್ತಿರುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಅನ್ನು ಕಾನೂನಾಗಿ ಜಾರಿಗೊಳಿಸಬೇಕೆಂದು ಸಮಸ್ತ ಕನ್ನಡಿಗರ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತದೆೆ. ದಿನಾಂಕ 26-8-2022ರಂದು ನಡೆದ ಶ್ರೀ ಕೃಷ್ಣರಾಜ ಪರಿಷತ್‌ನ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ತಾವೇ ಖುದ್ದು ಈ ವಿಧೇಯಕದ ವಿಷಯ ಪ್ರಸ್ತಾಪಿಸಿ, ಕನ್ನಡಪರವಾದ ಈ ಕಾನೂನು ಜಾರಿಗೆ ಕುರಿತಂತೆ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಚರ್ಚೆಮಾಡಬೇಕು, ಇದರ ಜವಾಬ್ದಾರಿಯನ್ನು ಕನ್ನಡ ಸಾಹಿತ್ಯ ಪರಿಷತ್ ವಹಿಸಿಕೊಳ್ಳಬೇಕು ಎಂದು ತಿಳಿಸಿದ್ದೀರಿ. ಈ ಹಿನ್ನೆಲೆಯಲ್ಲಿ ದಿನಾಂಕ 12-10-2022ರಂದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಕುರಿತಂತೆ ಚಿಂತನಾಗೋಷ್ಠಿಯನ್ನು ಪರಿಷತ್ ಏರ್ಪಡಿಸಿದ್ದು, ಸಾಹಿತ್ಯ, ಶಿಕ್ಷಣ, ಉದ್ಯೋಗ, ಕೈಗಾರಿಕಾ, ನ್ಯಾಯಾಂಗ ಸೇರಿದಂತೆ ಪ್ರಮುಖ ಕ್ಷೇತ್ರಗಳ ಪರಿಣತರನ್ನು ಈ ಗೋಷ್ಠಿಗೆ ಆಹ್ವಾನ ಮಾಡಿದ್ದೇವೆ. ಅಂದು ಸಭೆಯಲ್ಲಿ ಚರ್ಚೆಯಾದ ನಂತರ, ಕೈಗೊಂಡ ಮಹತ್ವದ ನಿರ್ಣಯಗಳನ್ನು ಸರಕಾರಕ್ಕೆ ಸಲ್ಲಿಸಲಾಗುವುದು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top