ಬಾಗಲಕೋಟೆ | ನೀಲ ಮಾಣಿಕಮಠದ ಅನ್ನದಾನೇಶ್ವರ ಸ್ವಾಮೀಜಿ ನಿಧನ

ಬಾಗಲಕೋಟೆ: ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯ ಬಸವಗೋಪಾಲ ನೀಲ ಮಾಣಿಕಮಠದ ಅನ್ನದಾನೇಶ್ವರ ಸ್ವಾಮೀಜಿ (75) ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಳಗಾವಿ ಕೆಎಲ್ಇ ಆಸ್ಪತೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ತ್ರಿವಿಧ ದಾಸೋಹಿ, ಕರ್ನಾಟಕ ರಾಜ್ಯೋತ್ಸವದ ಸುವರ್ಣ ಸಂಭ್ರಮ-2024ರ ಪ್ರಶಸ್ತಿ ಪುರಸ್ಕ್ರತರಾಗಿರುವ ದಾನೇಶ್ವರ ಸ್ವಾಮೀಜಿಯ ಅಂತ್ಯಕ್ರಿಯೆಗೆ ಸಕಲ ರೀತಿಯ ಸಿದ್ಧತೆಯನ್ನು ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯ ಬಸವಗೋಪಾಲ ನೀಲಮಾಣಿಕಮಠದಲ್ಲಿ ಮಾಡಲಾಗುತ್ತಿದೆ. ಶುಕ್ರವಾರ ರಾತ್ರಿ 10ರಿಂದ ಶನಿವಾರ ಸಂಜೆ 4ರವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
Next Story





