Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. Bagalkot by-election results |...

Bagalkot by-election results | ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್ ಮೇಟಿ ಜಯಭೇರಿ

ವಾರ್ತಾಭಾರತಿವಾರ್ತಾಭಾರತಿ4 May 2026 12:38 PM IST
share
Bagalkot by-election results | ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್ ಮೇಟಿ ಜಯಭೇರಿ

ಬಾಗಲಕೋಟೆ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು 21,866 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಗೆಲುವಿನೊಂದಿಗೆ ಕಾಂಗ್ರೆಸ್ ಪಕ್ಷ ಕ್ಷೇತ್ರದಲ್ಲಿ ತನ್ನ ಬಲವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದು, ಕಾರ್ಯಕರ್ತರಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.

ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಒಟ್ಟು 97,941 ಮತಗಳು ಲಭಿಸಿದರೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ 76,075 ಮತಗಳು ದೊರೆತಿವೆ. ಈ ಮೂಲಕ ಉಮೇಶ್ ಮೇಟಿ ಅವರು 21,866 ಮತಗಳ ಅಂತರದಲ್ಲಿ ಸ್ಪಷ್ಟ ಮುನ್ನಡೆಯೊಂದಿಗೆ ಗೆಲುವು ಸಾಧಿಸಿದ್ದಾರೆ.

ಗೆಲುವಿನ ಬಳಿಕ ಮಾತನಾಡಿದ ಉಮೇಶ್ ಮೇಟಿ ಅವರು ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. “ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ನಗರ ಹಾಗೂ ಗ್ರಾಮೀಣ ಭಾಗದ ಎಲ್ಲಾ ಮತದಾರರಿಗೆ ಧನ್ಯವಾದಗಳು ತಿಳಿಸುತ್ತೇನೆ. ಈ ಗೆಲುವು ನನ್ನ ವೈಯಕ್ತಿಕ ಸಾಧನೆಯಲ್ಲ, ಇಡೀ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಗ್ಯಾರಂಟಿ ಸರಕಾರದ ಗೆಲುವಾಗಿದೆ” ಎಂದು ಅವರು ತಿಳಿಸಿದ್ದಾರೆ.

“ನಾಮಪತ್ರ ಸಲ್ಲಿಕೆಯಿಂದ ಹಿಡಿದು ಚುನಾವಣಾ ಪ್ರಚಾರ ಮುಗಿಯುವವರೆಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಬಾಗಲಕೋಟೆಯ ಉಸ್ತುವಾರಿ ಸಚಿವರಾದ ಆರ್. ಬಿ. ತಿಮ್ಮಾಪುರ್, ಸಚಿವ ಸತೀಶ ಜಾರಕಿಹೋಳಿ ಸೇರಿದಂತೆ ಪಕ್ಷದ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ಅಪಾರ ಶ್ರಮ ಪಟ್ಟಿದ್ದಾರೆ. ಅವರ ಸಹಕಾರದಿಂದಲೇ ಈ ಗೆಲುವು ಸಾಧ್ಯವಾಗಿದೆ” ಎಂದು ಅವರು ಹೇಳಿದರು.

“ಈ ಗೆಲುವನ್ನು ನಾನು ಬಾಗಲಕೋಟೆ ಕ್ಷೇತ್ರದ ಮತದಾರರಿಗೆ ಸಮರ್ಪಿಸುತ್ತೇನೆ. ನಮ್ಮ ತಂದೆಯವರ ಮೇಲಿರುವ ಅಭಿಮಾನವನ್ನು ಕ್ಷೇತ್ರದ ಜನರು ಮತ್ತೊಮ್ಮೆ ತೋರಿಸಿದ್ದಾರೆ. ಹಿರಿಯರು ಹಾಗೂ ಕಿರಿಯರು ಎಲ್ಲ ಕಾರ್ಯಕರ್ತರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು” ಎಂದು ಹೇಳಿದರು.

ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ ಆರಂಭಗೊಂಡಿದ್ದು, ಆರಂಭಿಕ ಸುತ್ತುಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದರು. ಪ್ರತಿ ಸುತ್ತಿನ ಫಲಿತಾಂಶ ಹೊರಬರುವಂತೆ ಮುನ್ನಡೆ ಹೆಚ್ಚುತ್ತಾ ಹೋಗಿದ್ದು, ಕೊನೆಗೆ ಭರ್ಜರಿ ಅಂತರದಲ್ಲಿ ಗೆಲುವು ಖಚಿತಗೊಂಡಿತು. ಇದರಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಮತ್ತು ಸಂಭ್ರಮ ಹೆಚ್ಚಾಯಿತು.

ಫಲಿತಾಂಶ ಹೊರಬಂದ ನಂತರ ಕ್ಷೇತ್ರದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಣ್ಣ ಹಚ್ಚಿಕೊಂಡು ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ, ಘೋಷಣೆಗಳನ್ನು ಕೂಗಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು. ಕೆಲವು ಕಡೆಗಳಲ್ಲಿ ಮೆರವಣಿಗೆಗಳು ನಡೆದಿದ್ದು, ಗೆಲುವಿನ ಸಂಭ್ರಮ ಎಲ್ಲೆಡೆ ಕಂಡುಬಂದಿತು.

Tags

Bagalkotby-electionresultsCongressUmesh Meti
share
ವಾರ್ತಾಭಾರತಿ
ವಾರ್ತಾಭಾರತಿ
Next Story
X