Bagalkot | ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹಿಸಿ ಹುಬ್ಬಳ್ಳಿ ಪ್ರತಿಭಟನೆಗೆ ರೈತರ ಪಯಣ

ಬಾಗಲಕೋಟೆ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಲೋಕಾಪುರ ಹೋಬಳಿಯ ವೆಂಕಟಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನೂರಾರು ರೈತರು ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಇಂದು ಪಯಣ ಬೆಳೆಸಿದರು.
ಲೋಕಾಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಮೂರ್ತಿಗೆ ರೈತರು ಹೂವಿನ ಮಾಲೆ ಅರ್ಪಿಸಿ, ಬಳಿಕ ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಪಯಣ ಆರಂಭಿಸಿದರು.
ಸಂಘಟನೆಯ ‘ಜೈ ಜವಾನ್, ಜೈ ಕಿಸಾನ್’ ಘೋಷಣೆಯೊಂದಿಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಒಗ್ಗೂಡಿ ಪ್ರತಿಭಟನೆ ನಡೆಸಲು ರೈತರು ಮುಂದಾಗಿದ್ದಾರೆ. ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಹಾಗೂ ಸೂಕ್ತ ಪರಿಹಾರ ಒದಗಿಸಬೇಕು ಎಂದು ಈ ಸಂದರ್ಭದಲ್ಲಿ ರೈತರು ಒತ್ತಾಯಿಸಿದರು.
Next Story




