Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. Bagalkot | ಆಹಾರ ಸುರಕ್ಷತಾ ಇಲಾಖೆಯಿಂದ...

Bagalkot | ಆಹಾರ ಸುರಕ್ಷತಾ ಇಲಾಖೆಯಿಂದ ದಾಳಿ; ಹೋಟೆಲ್, ಬೇಕರಿ ಅಂಗಡಿಗಳ ತಪಾಸಣೆ

56 ಅಂಗಡಿಗಳಿಗೆ ನೋಟಿಸ್, 16 ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ6 Nov 2026 6:20 PM IST
share
Bagalkot | ಆಹಾರ ಸುರಕ್ಷತಾ ಇಲಾಖೆಯಿಂದ ದಾಳಿ; ಹೋಟೆಲ್, ಬೇಕರಿ ಅಂಗಡಿಗಳ ತಪಾಸಣೆ

ಬಾಗಲಕೋಟೆ : ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ತಡೆಗಟ್ಟುವ ನಿಟ್ಟಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳ ತಂಡ ಶುಕ್ರವಾರ ಕಾರ್ಯಾಚರಣೆ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ 56 ಅಂಗಡಿಗಳಿಗೆ ನೋಟಿಸ್ ನೀಡಿದೆ, 16 ಅಂಗಡಿಗಳ ಮೇಲೆ ಪ್ರಕರಣ ದಾಖಲಿಸಿದೆ.

ಬಾಗಲಕೋಟೆ ನಗರದ ನವನಗರದ ಬಸ್ ನಿಲ್ದಾಣ ವ್ಯಾಪ್ತಿಯಲ್ಲಿ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾ ಅಂಕಿತ ಅಧಿಕಾರಿ ಮಹೇಶ ಮಾಲಗಿತ್ತಿ ಅವರ ನೇತೃತ್ವದಲ್ಲಿ ನಡೆದ ತಪಾಸಣೆಯಲ್ಲಿ ಬೇಕರಿ ಅಂಗಡಿಗಳಲ್ಲಿನ ಆಹಾರ ಪದಾರ್ಥಗಳ ಗುಣಮಟ್ಟ, ಅವಧಿ, ಸಂಗ್ರಹಣೆ ಹಾಗೂ ಎಫ್‍ಎಸ್‍ಎಸ್‍ಎಐ ಪರವಾನಗಿ ಸೇರಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸಲಾಯಿತು.

ಈ ವೇಳೆ ಲೈಸೆನ್ಸ್ ಪಡೆಯದೇ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಲಾಯಿತು. ಪರಿಶೀಲನೆಯಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿರುವುದು ಪತ್ತೆಯಾಗಿದ್ದು, ಸಂಬಂಧಿಸಿದ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅಧಿಕಾರಿಗಳು ಸೂಚಿಸಿದರು. ನಿಯಮ ಉಲ್ಲಂಘಿಸಿದ ಹಲವು ಬೇಕರಿ ಅಂಗಡಿಗಳಿಗೆ ದಂಡ ವಿಧಿಸಿ, ಪ್ರಕರಣ ದಾಖಲಿಸುವ ಕ್ರಮವೂ ಕೈಗೊಳ್ಳಲಾಯಿತು. ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಜಮಖಂಡಿ ಉಪವಿಭಾಗ ವ್ಯಾಪ್ತಿಯ ತಾಲೂಕುಗಳಲ್ಲಿ ಸಹ ಜಂಟಿ ತಂಡ ಕಾರ್ಯಾಚರಣೆ ನಡೆಸಲಾಯಿತು.

ಜಿಲ್ಲೆಯಾದ್ಯಂತ 70 ಅಂಗಡಿಗಳ ತಪಾಸಣೆ

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ವತಿಯಿಂದ ಎಫ್‍ಎಸ್‍ಎಸ್‍ಎಐ ಕಾಯ್ದೆಯನ್ವಯ ಜಿಲ್ಲೆಯ ಬಾಗಲಕೋಟೆ, ಬಾದಾಮಿ, ಮುಧೋಳ, ಜಮಖಂಡಿ ಹಾಗೂ ಹುನಗುಂದ ತಾಲ್ಲೂಕುಗಳಲ್ಲಿ ಒಟ್ಟು 70 ಅಂಗಡಿಗಳ ತಪಾಸಣೆ ನಡೆಸಲಾಗಿದೆ. ಈ ಪೈಕಿ 56 ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, 38 ಹೋಟೆಲ್, 22 ಬೇಕರಿ ಹಾಗೂ 9 ಇತರೆ ಆಹಾರ ಸಂಸ್ಥೆಗಳನ್ನು ಪರಿಶೀಲಿಸಲಾಗಿದೆ. 12 ಆಹಾರ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, 16 ಮೊಕದ್ದಮೆಗಳನ್ನು ದಾಖಲಿಸಲಾಗಿದೆ.

ತಾಲ್ಲೂಕುವಾರು ವಿವರದಂತೆ ಬಾಗಲಕೋಟೆಯಲ್ಲಿ 25, ಬಾದಾಮಿಯಲ್ಲಿ 18, ಮುಧೋಳದಲ್ಲಿ 4, ಜಮಖಂಡಿಯಲ್ಲಿ 6 ಹಾಗೂ ಹುನಗುಂದದಲ್ಲಿ 17 ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.

ಆಹಾರ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅಂಗಡಿ ಮಾಲೀಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಪರವಾನಗಿ ಇಲ್ಲದೆ ಆಹಾರ ವ್ಯಾಪಾರ ನಡೆಸುವುದು, ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವುದು ಹಾಗೂ ಆಹಾರ ಸುರಕ್ಷತಾ ಮಾನದಂಡ ಉಲ್ಲಂಘಿಸುವವರ ವಿರುದ್ಧ ನಿರಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ನಡೆದ ದಾಳಿ ವೇಳೆ ತಹಶೀಲ್ದಾರ್ ವಾಸುದೇವ ಸ್ವಾಮಿ, ನಗರಸಭೆ ಪೌರಾಯುಕ್ತ ಎಂ.ಎಂ. ಸಾರವಾನ ಹಾಗೂ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ ಸಾಳಗುಂದಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags

BagalkotFood Safety Department
share
ವಾರ್ತಾಭಾರತಿ
ವಾರ್ತಾಭಾರತಿ
Next Story
X