Bagalkot | ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಕೆಎಸ್ಸಾರ್ಟಿಸಿ ಬಸ್: 6 ಪ್ರಯಾಣಿಕರಿಗೆ ಗಾಯ

ಬಾಗಲಕೋಟೆ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆಎಸ್ಸಾರ್ಟಿಸಿ ಬಸ್ ರಸ್ತೆ ಬದಿಯ ಜಮೀನಿಗೆ ನುಗ್ಗಿದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಗೋವಿನಕಪ್ಪ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ–218ರಲ್ಲಿ ನಡೆದಿದೆ.
ಬಾಗಲಕೋಟೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಬಸ್‌ನ ಎಕ್ಸೆಲ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಹೆದ್ದಾರಿ ಪಕ್ಕದ ಜಮೀನಿಗೆ ನುಗ್ಗಿದೆ ಎಂದು ತಿಳಿದು ಬಂದಿದೆ.
60ಕ್ಕೂ ಹೆಚ್ಚು ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಬಸ್ ಏಕಾಏಕಿ ಜಮೀನಿಗೆ ನುಗ್ಗಿ ಎತ್ತರಕ್ಕೆ ಜಿಗಿದ ಪರಿಣಾಮ ಐದಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆ ಕುಳಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Next Story




