Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. Bagalkot | ಆಶಾ ಕಾರ್ಯಕರ್ತೆಯರ ಬೇಡಿಕೆ...

Bagalkot | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Oct 2026 2:50 PM IST
share
Bagalkot | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

ಬಾಗಲಕೋಟೆ: ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಗರದ ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬೆಲೆ ಏರಿಕೆಗೆ ಅನುಗುಣವಾಗಿ ಗೌರವಧನ ಹೆಚ್ಚಳ, ಪ್ರೋತ್ಸಾಹಧನದ ನಿಯಮಿತ ಪಾವತಿ ಹಾಗೂ ಕೆಲಸಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಸಂಘ ಒತ್ತಾಯಿಸಿದೆ.

ಆಶಾ ಕಾರ್ಯಕರ್ತೆಯರಿಗೆ ಸಿಗುತ್ತಿರುವ ಗೌರವಧನ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ. ಹಲವು ಜಿಲ್ಲೆಗಳಲ್ಲಿ ಪ್ರೋತ್ಸಾಹಧನ ಬಾಕಿ ಉಳಿದಿದ್ದು, ನಿರ್ವಹಿಸಿದ ಕೆಲಸಕ್ಕೆ ತಕ್ಕಂತೆ ಹಣ ಪಾವತಿಯಾಗುತ್ತಿಲ್ಲ ಎಂಬುದು ಸಂಘದ ಪ್ರಮುಖ ಆರೋಪವಾಗಿದೆ. ಸರ್ವರ್ ಸಮಸ್ಯೆ, ತಾಂತ್ರಿಕ ತೊಂದರೆಗಳು ಹಾಗೂ ಮೊಬೈಲ್ ಸೌಲಭ್ಯದ ಕೊರತೆಯಿಂದ ಕೆಲಸ ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಸಂಘ ತಿಳಿಸಿದೆ.

ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ 15,000 ರೂ. ಗೌರವಧನ ನೀಡಬೇಕು, ಪ್ರೋತ್ಸಾಹಧನವನ್ನು ಪ್ರತಿ ತಿಂಗಳು ನಿಗದಿತ ಸಮಯಕ್ಕೆ ಬಿಡುಗಡೆ ಮಾಡಬೇಕು ಹಾಗೂ ಕೆಲಸ ನಿರ್ವಹಿಸಲು ಅಗತ್ಯವಾದ ಮೊಬೈಲ್ ಸೌಲಭ್ಯ ಕಲ್ಪಿಸಬೇಕು ಎಂಬ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

Tags

Asha workersprotestBagalkot
share
ವಾರ್ತಾಭಾರತಿ
ವಾರ್ತಾಭಾರತಿ
Next Story
X