ಬಾಗಲಕೋಟೆ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನವನಗರದ ವಾಗ್ದೇವಿ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ.
ಬೀಳಗಿ ತಾಲ್ಲೂಕಿನ ಸುನಗ ತಾಂಡಾದ ಸೀಮಾ ರಾಠೋಡ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಪ್ರಥಮ ಪಿಯುಸಿಯಲ್ಲಿ ಕಲಿಯುತ್ತಿದ್ದು, ರಜೆ ಇದ್ದರೂ ಹಾಸ್ಟೆಲಿಗೆ ಹೋಗಿದ್ದಳು ಎನ್ನಲಾಗಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಸಿಮಾಳನ್ನು ಕಂಡ ಇತರ ವಿದ್ಯಾರ್ಥಿನಿಯರು ಹೊರಗೆ ಓಡಿ ಬಂದಿದ್ದು, ಕೂಡಲೇ ಹಾಸ್ಟೆಲ್ ಸಿಬ್ಬಂದಿ ನೇಣು ಬಿಚ್ಚಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಯುವತಿ ಮೃತಪಟ್ಟಿದ್ದನ್ನು ವೈದ್ಯರು ಖಚಿತ ಪಡಿಸಿದ್ದಾರೆ
ಸೀಮಾಳಿಗೆ ಪಿಟ್ಸ್ ಬಂದಿದೆ ಎಂದು ನಮಗೆ ಕರೆ ಮಾಡಿದ್ರು. ನಂತರ ನೇಣು ಹಾಕಿಕೊಂಡಿದ್ದಾಳೆ ಅಂತಿದ್ದಾರೆ. ಆದ್ದರಿಂದ ಸಾವಿನಲ್ಲಿ ಸಂಶಯವಿದೆ ಸೂಕ್ತ ತನಿಖೆ ಆಗಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಸ್ಥಳಕ್ಕೆ ನವನಗರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





