Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. Bagalkot | ಮಹಿಳೆಯರಿಗೆ 43.40 ಲಕ್ಷ...

Bagalkot | ಮಹಿಳೆಯರಿಗೆ 43.40 ಲಕ್ಷ ರೂ. ವಂಚನೆ ಆರೋಪ: ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ15 July 2026 10:33 AM IST
share
Bagalkot | ಮಹಿಳೆಯರಿಗೆ 43.40 ಲಕ್ಷ ರೂ. ವಂಚನೆ ಆರೋಪ: ಇಬ್ಬರ ಬಂಧನ
9 ಜನರ ವಿರುದ್ಧ ಪ್ರಕರಣ ದಾಖಲು

ಬಾಗಲಕೋಟೆ : ಮಹಿಳಾ ಸಂಘಟನೆ ಮೂಲಕ ಆಕರ್ಷಕ ಲಾಭಾಂಶದ ಭರವಸೆ ನೀಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚನೆ ಎಸಗಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಬೀಳಗಿ ಪೊಲೀಸರು ಬಂಧಿಸಿದ್ದಾರೆ.

ಬೀಳಗಿ ಪೊಲೀಸ್ ಠಾಣೆಯಲ್ಲಿ ಶ್ರೀ ದುರ್ಗಾದೇವಿ ಮಹಿಳಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವಿರುದ್ಧ ಪ್ರಕರಣ ದಾಖಲಾಗಿದ್ದು, ಮಹಿಳೆಯರನ್ನು ಸಣ್ಣ-ಸಣ್ಣ ಗುಂಪುಗಳಾಗಿ ಸೇರಿಸಿ, ಮೂರು ವರ್ಷಗಳ ಬಳಿಕ ಹೆಚ್ಚಿನ ಹಣ ಮರಳಿ ನೀಡುವುದಾಗಿ ಭರವಸೆ ನೀಡಿ ವಾರ ಹಾಗೂ ತಿಂಗಳ ಕಂತುಗಳ ರೂಪದಲ್ಲಿ ಹಣ ಸಂಗ್ರಹಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಸಂಸ್ಥೆಯ ಭರವಸೆಯನ್ನು ನಂಬಿ ಅನೇಕ ಮಹಿಳೆಯರು ತಮ್ಮ ದುಡಿಮೆ ಹಣವನ್ನು ಹೂಡಿಕೆ ಮಾಡಿದ್ದು, ಸಂತ್ರಸ್ತರ ದೂರಿನ ಮೇರೆಗೆ ಪೊಲೀಸರು ಸಂಸ್ಥೆಯ ಕಚೇರಿ ಮೇಲೆ ದಾಳಿ ನಡೆಸಿ 200ಕ್ಕೂ ಹೆಚ್ಚು ರಿಜಿಸ್ಟರ್‌ಗಳು, ರಸೀದಿ ಪುಸ್ತಕಗಳು, ಕಂಪ್ಯೂಟರ್‌ಗಳು ಹಾಗೂ ಇತರೆ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಸಹಕಾರ ಸಂಘಗಳ ಜಿಲ್ಲಾ ನಿಬಂಧಕರೂ ಸ್ಥಳಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಇದುವರೆಗೆ ಲಭ್ಯವಾದ ದಾಖಲೆಗಳು ಹಾಗೂ ಸಂತ್ರಸ್ತರ ಹೇಳಿಕೆಗಳ ಆಧಾರದ ಮೇಲೆ ಸುಮಾರು 43.40 ಲಕ್ಷ ರೂ. ವಂಚನೆ ನಡೆದಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪ್ರಕರಣದಲ್ಲಿ ಸಂಸ್ಥೆಯ ಆಡಿಟರ್ ಸೇರಿದಂತೆ ಒಟ್ಟು 9 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದುವರೆಗೆ 8 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ಪೈಕಿ ರಚನಾ ಬಂಟನೂರ ಹಾಗೂ ವಿದ್ಯಾಶ್ರೀ ಹಲ್ಲೂರು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಂಚನೆಯಾದ ಒಟ್ಟು ಹಣದ ಪ್ರಮಾಣ, ಇನ್ನಷ್ಟು ಸಂತ್ರಸ್ತರ ಮಾಹಿತಿ ಹಾಗೂ ಇತರ ಆರೋಪಿಗಳ ಪಾತ್ರದ ಕುರಿತು ತನಿಖೆ ಮುಂದುವರಿದಿದೆ.

ಈ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾಗಿರುವ ಸಾರ್ವಜನಿಕರು ತಮ್ಮ ಬಳಿ ಇರುವ ರಸೀದಿಗಳು, ಪಾಸ್‌ಬುಕ್, ಠೇವಣಿ ದಾಖಲೆಗಳು ಸೇರಿದಂತೆ ಸಂಬಂಧಿತ ದಾಖಲಾತಿಗಳೊಂದಿಗೆ ಬೀಳಗಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ತನಿಖೆಗೆ ಸಹಕರಿಸುವಂತೆ ಕೋರಲಾಗಿದೆ.

ಯಾವುದೇ ಸಂಸ್ಥೆ ಅಥವಾ ಹೂಡಿಕೆ ಯೋಜನೆಯಲ್ಲಿ ಹಣ ಹೂಡಿಕೆ ಮಾಡುವ ಮುನ್ನ ಅದರ ನೋಂದಣಿ, ಕಾನೂನುಬದ್ಧತೆ ಹಾಗೂ ವಿಶ್ವಾಸಾರ್ಹತೆಯನ್ನು ಪರಿಶೀಲಿಸಬೇಕು. ಅಸಾಮಾನ್ಯ ಅಥವಾ ಖಚಿತ ಹೆಚ್ಚಿನ ಲಾಭದ ಭರವಸೆ ನೀಡುವ ಯೋಜನೆಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಮನವಿ ಮಾಡಿದ್ದಾರೆ.

Tags

womenDefraudingBagalkot
share
ವಾರ್ತಾಭಾರತಿ
ವಾರ್ತಾಭಾರತಿ
Next Story
X