Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. ಸಿಎಂ ಸ್ಥಾನದ ವಿಚಾರ ಮಾತನಾಡಲು ಬಿಜೆಪಿ...

ಸಿಎಂ ಸ್ಥಾನದ ವಿಚಾರ ಮಾತನಾಡಲು ಬಿಜೆಪಿ ನಮ್ಮ ಪಕ್ಷದ ಹೈ ಕಮಾಂಡ್ ಅಲ್ಲ: ಸಿದ್ದರಾಮಯ್ಯ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ3 April 2026 3:34 PM IST
share
ಸಿಎಂ ಸ್ಥಾನದ ವಿಚಾರ ಮಾತನಾಡಲು ಬಿಜೆಪಿ ನಮ್ಮ ಪಕ್ಷದ ಹೈ ಕಮಾಂಡ್ ಅಲ್ಲ: ಸಿದ್ದರಾಮಯ್ಯ ತಿರುಗೇಟು
'ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಸಚಿವ''

ಬಾಗಲಕೋಟೆ, ಎ.3: ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡಲು ಬಿಜೆಪಿಯವರೇನು ಕಾಂಗ್ರೆಸ್ ಪಕ್ಷದ ಹೈ ಕಮಾಂಡ್ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು.

ಬಿಜೆಪಿ ಯವರು ಸಿಎಂ ಸ್ಥಾನದ ಬಗ್ಗೆ ಪದೇ ಪದೇ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಈಗಾಗಲೇ ಈ ಕುರಿತು ಸ್ಪಷ್ಟವಾಗಿ ತಿಳಿಸಿದ್ದು, ಬಿಜೆಪಿಯವರು ಇದರ ಬಗ್ಗೆ ಮಾತನಾಡಲು ಅವರೇನು ನಮ್ಮ ಹೈಕಮಾಂಡ್ ಅಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಂದರು.

ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

*ಬಿಜೆಪಿಗೆ ಸೋಲಿನ ಭಯ

ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಯನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ ಹಾಗೂ ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆ ಎಂಬ ಕೇಂದ್ರ ಸಚಿವ ವಿ.ಸೋಮಣ್ಣರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸೋಮಣ್ಣರಿಗೆ ಪ್ರಚಾರ ಮಾಡಲು ಸಮಯವಿಲ್ಲ. ಕ್ಷೇತ್ರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ ಎಂದರು.

ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಿಚ್ಚಿಸುವುದಿಲ್ಲ.

ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿವೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.

ಬಿಜೆಪಿ ದ್ವಂದ್ವ ನೀತಿ

ಪಕ್ಷದಿಂದ ಉಚ್ಚಾಟಿಸಲ್ಪಟ್ಟಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಗೋಗರೆದು ಕರೆ ತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ ಎಂದರಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸ್ಥಿತಿಯಲ್ಲಿದೆ ಎಂದರು.

*ಲೋಕಸಭಾ ಸ್ಥಾನಗಳ ಹೆಚ್ಚಳ: ಮಲತಾಯಿ ಧೋರಣೆ ಇರಬಾರದು

ಲೋಕಸಭಾ ಸ್ಥಾನಗಳನ್ನು ಹೆಚ್ಚಿಸುವುದರಿಂದ ರಾಜ್ಯಕ್ಕಾಗುವ ಲಾಭವೇನು ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಜನಸಂಖ್ಯೆಗೆ ಅನುಗುಣವಾಗಿ ಸ್ಥಾನಗಳನ್ನು ಹೆಚ್ಚಿಸಬೇಕು, ಆದರೆ ಮಲತಾಯಿ ಧೋರಣೆ ಇರಬಾರದು. ದಕ್ಷಿಣದ ರಾಜ್ಯಗಳಿಗೆ ಕಡಿಮೆ, ಉತ್ತರದ ರಾಜ್ಯಗಳಿಗೆ ಹೆಚ್ಚಿನ ಸ್ಥಾನ ಕೊಡುವ ಕೆಲಸ ಮಾಡಬಾರದು ಎಂದರು.

ಮೋದಿಯವರ ಮನೆಗೆ ಮುತ್ತಿಗೆ ಹಾಕಬೇಕು

ಗ್ಯಾಸ್ ಸಿಲಿಂಡರ್ ಅಭಾವದ ಬಗ್ಗೆ ಮಾತನಾಡಿ ಕೇಂದ್ರ ಸರಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಅದು ಅವರ ಕರ್ತವ್ಯ. ರಾಜ್ಯ ಸರ್ಕಾರ ವಿತರಣೆ ಮಾಡುತ್ತದೆಯಷ್ಟೇ ಎಂದರು. ಆಟೋ ಚಾಲಕರು ಆಹಾರ ಸಚಿವರ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳಿರುವ ಬಗ್ಗೆ ಮಾತನಾಡಿ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಬೇಕು ಎಂದರು.

ಎರಡೂ ಕಡೆ ನಮ್ಮ ಪಕ್ಷ ಗೆಲ್ಲಲಿದೆ

ಉಪಚುನಾವಣೆ ಫಲಿತಾಂಶ ಸಿಎಂ ಸ್ಥಾನದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಎರಡೂ ಕಡೆ ನಮ್ಮ ಪಕ್ಷ ಗೆಲ್ಲಲಿದ್ದು, ಪರಿಣಾಮ ಹೇಗೆ ಬೀರಲು ಸಾಧ್ಯ ಎಂದರು.

ಎಲ್ಲರಿಗೂ ಅನುದಾನ ನೀಡಿದಂತೆ ಅಲ್ಪಸಂಖ್ಯಾತರಿಗೂ ಅನುದಾನ ಒದಗಿಸಲಾಗಿದೆ

ರಾಜ್ಯದ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಯತ್ನಾಳ್ ಅವರು ಆರೋಪಿಸಿರುವ ಬಗ್ಗೆ ಮಾತನಾಡಿ ಅಲ್ಪಸಂಖ್ಯಾತರು ಈ ರಾಜ್ಯದ ನಾಗರಿಕರಲ್ಲವೇ? ಅವರ ಜನಸಂಖ್ಯೆ ಶೇ14% ರಷ್ಟಿದ್ದು ಎಲ್ಲರಿಗೂ ಅನುದಾನ ನೀಡಿದಂತೆ ಅವರಿಗೂ ನೀಡಲಾಗಿದೆ ಎಂದರು.

*ಬಿಜೆಪಿಯಿಂದ ಹಣದ ದುರುಪಯೋಗ

ಅಧಿಕಾರ ಮತ್ತು ಹಣದ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಹಾಗೇನಾದರೂ ಹಣ ಮತ್ತು ಅಧಿಕಾರದ ದುರುಪಯೋಗ ಮಾಡಿಕೊಂಡಿದ್ದರೆ ಅದು ಬಿಜೆಪಿ ಎಂದರು.

Tags

Siddarmaiahhigh command
share
ವಾರ್ತಾಭಾರತಿ
ವಾರ್ತಾಭಾರತಿ
Next Story
X