Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. ಇಲಕಲ್ಲ | ಸೀರತ್ ಅಭಿಯಾನ: ಎರಡು ಕೃತಿಗಳ...

ಇಲಕಲ್ಲ | ಸೀರತ್ ಅಭಿಯಾನ: ಎರಡು ಕೃತಿಗಳ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ25 Aug 2026 10:58 PM IST
share
ಇಲಕಲ್ಲ | ಸೀರತ್ ಅಭಿಯಾನ: ಎರಡು ಕೃತಿಗಳ ಬಿಡುಗಡೆ

ಬಾಗಲಕೋಟೆ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ‘ಸೀರತ್ ಅಭಿಯಾನ’ದ ಪ್ರಯುಕ್ತ ಸಾಹಿತಿ ಹಾಗೂ ಗ್ರಂಥಕರ್ತ ಯೋಗೇಶ್ ಮಾಸ್ಟರ್ ಅವರು ರಚಿಸಿದ ‘ಮಾನವ ಮನಸ್ಸಿನ ಕೃಷಿಕ - ಮನದೊಡೆಯ ಪ್ರವಾದಿ ಮುಹಮ್ಮದ್(ಸ)’ ಹಾಗೂ ‘ವಾರ್ತಾ ಭಾರತಿ’ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ ‘ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)’ ಎಂಬ ಎರಡು ಕೃತಿಗಳನ್ನು ಬಿಡುಗಡೆಗೊಳಿಸಲಾಗಿದ್ದು, ಈ ಕೃತಿಗಳನ್ನು ಅಭಿಯಾನದ ಭಾಗವಾಗಿ ರಾಜ್ಯಾದ್ಯಂತ ಜನರಿಗೆ ತಲುಪಿಸಲಾಗುವುದು ಎಂದು ಇಲಕಲ್ಲ ಜಮಾಅತೆ ಇಸ್ಲಾಮೀ ಹಿಂದ್ ಪದಾಧಿಕಾರಿ ಹುಸೇನ ಬಾದಶಾ ಸೂಳಿಭಾವಿ ತಿಳಿಸಿದರು.

ಇಲಕಲ್ಲ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ. 26 ರಿಂದ ಸೆ. 06 ರವರೆಗೆ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)’ ಎಂಬ ಶೀರ್ಷಿಕೆಯಡಿ ಈ ಬೃಹತ್ ಸೀರತ್ ಅಭಿಯಾನ ನಡೆಯಲಿದೆ. ಪ್ರವಾದಿ ಮುಹಮ್ಮದ್(ಸ) ಅವರು ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಘನತೆ ಹಾಗೂ ಏಕತೆಯ ಮೂಲತತ್ತ್ವಗಳ ಮೇಲೆ ಸ್ಥಾಪಿತವಾಗಿದೆ. ವ್ಯಕ್ತಿಗಳ ನೈತಿಕತೆ ಮತ್ತು ಚಾರಿತ್ರ್ಯವನ್ನು ಶುದ್ಧೀಕರಿಸುವ ಮೂಲಕ ಸುಭಿಕ್ಷೆ ಹಾಗೂ ನಿರ್ಭಯತ್ವದ ಸಮಾಜ ನಿರ್ಮಾಣ ಮಾಡುವುದು ಅವರ ಮುಖ್ಯ ಗುರಿಯಾಗಿತ್ತು. ಈ ಮಾನವೀಯ ಸಂದೇಶವನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಮತ್ತು ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಪ್ರಮುಖ ಆಶಯವಾಗಿದೆ ಎಂದರು.

‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)’ ವಿಷಯದಡಿ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮಗಳು, ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ, ಸೀರತ್ ಎಕ್ಸಿಬಿಶನ್ ಹಾಗೂ ಸೌಹಾರ್ದ ಸಂದೇಶ ರ‍್ಯಾಲಿಗಳು.

ಸ್ಥಾನೀಯ ಕಾರ್ಯಕ್ರಮಗಳು: ಪುಸ್ತಕ ವಿತರಣೆ, ನಿಬಂಧ ಸ್ಪರ್ಧೆ, ಮೋಹಲ್ಲಾ ಸೀರತ್ ಕಾರ್ಯಕ್ರಮಗಳು, ಗಣ್ಯರ ಸಭೆಗಳು ಹಾಗೂ ಶಿವನಗುತ್ತಿ ಮತ್ತು ಕೃಷ್ಣಾಪೂರದಲ್ಲಿ ವಿಶೇಷ ಸೀರತ್ ಸಮಾವೇಶಗಳು.

ಸಾಮಾಜಿಕ ಹಾಗೂ ಮಾನವೀಯ ಸೇವೆ: ಮಹಿಳಾ ವಿಭಾಗದ ವಿಶೇಷ ನೇತೃತ್ವದಲ್ಲಿ ಆಸ್ಪತ್ರೆಗಳು, ವೃದ್ಧಾಶ್ರಮಗಳು ಮತ್ತು ಅನಾಥಾಶ್ರಮಗಳಿಗೆ ಭೇಟಿ ನೀಡಿ ಸಾಂತ್ವನ ಹಾಗೂ ನೆರವು ನೀಡುವ ಸಮಾಜಸೇವಾ ಚಟುವಟಿಕೆಗಳು ನಡೆಯುತ್ತವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಹಮ್ಮದ್ ಹುಸೇನ ಬಾಗವಾನ, ಮಹಮ್ಮದ್ ಅಲಿ ಯತ್ನಟ್ಟಿ, ಡಾ. ನೂರ ಮಹಮ್ಮದ ಬಿಳೇಕುದರಿ, ಅಬ್ದುಲ್ ಗಫ್ಫಾರ ತಹಸೀಲ್ದಾರ, ಮಹಮ್ಮದ ತಾಜುದ್ದೀನ, ಮುಷ್ತಾಕ್ ಅಲಿ ಜಾಗಿರದಾರ, ಮುಹಮ್ಮದ್ ಯಾಸೀನ್ ಗಬ್ಬೂರು ಉಪಸ್ಥಿತರಿದ್ದರು

Tags

IlkalSeerat Campaign
share
ವಾರ್ತಾಭಾರತಿ
ವಾರ್ತಾಭಾರತಿ
Next Story
X