ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಖಚಿತ : ಸತೀಶ್ ಜಾರಕಿಹೊಳಿ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಖಚಿತ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗೆ ಸಚಿವರು, ನಾಯಕರು ಬರುವುದು ಸಹಜ. ನಮ್ಮ ಅಭ್ಯರ್ಥಿ ಪರ ಪ್ರಚಾರ ಮಾಡಲು ಬರುತ್ತಾರೆ. ಈ ಬಾರಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದರು.
ಜಾತಿ ಆಧಾರಿತ ಚುನಾವಣೆ ಅಲ್ಲ. ಪಕ್ಷ ಆಧಾರಿ ಚುನಾವಣೆ ನಡೆಯುತ್ತದೆ. ದಾವಣಗೆರೆಯಲ್ಲಿ ಮುಸ್ಲಿಂ ಸಮುದಾಯದ ಸಂಖ್ಯೆ ಹೆಚ್ಚಿದೆ. ಅದಕ್ಕೆ ಅವರು ಬೇಡಿಕೆ ಇಟ್ಟಿದ್ದರು. ದಾವಣೆಗೆರೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದ ಬೇಡಿಕೆ ಇದ್ದರೆ ಅದನ್ನು ಸಾರ್ವತ್ರಿಕ ಚುನಾವಣೆಯಲ್ಲಿ ಪರಿಗಣಿಸುತ್ತೇವೆ ಎಂದು ಹೇಳಿದರು.
Next Story




