ಬೆಂಗಳೂರು | ಹೊಸಕೋಟೆ ಗೊಟ್ಟಿಪುರ ಗೇಟ್ ಬಳಿ ಭೀಕರ ಅಪಘಾತ: ನಾಲ್ವರು ಮೃತ್ಯು

ಬೆಂಗಳೂರು, ಜೂ.13: ಸಾರಿಗೆ ಬಸ್ ಮತ್ತು ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳ ಸಹಿತ ನಾಲ್ವರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದೆ.
ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4) ಹಾಗೂ 1 ವರ್ಷದ ಮಗು ಮೃತಪಟ್ಟಿದೆ.
ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ಮಧ್ಯೆ ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ಸಿನಲ್ಲಿದ್ದ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ. 16 ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ವಾಹನವೊಂದನ್ನು ಓವರ್ಟೇಕ್ ಭರದಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
Next Story