Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ಗ್ರಾಮಾಂತರ
  4. ಅಭಿವೃದ್ಧಿಗೆ ದುಡ್ಡೇ ಇಲ್ಲ ಎಂದು...

ಅಭಿವೃದ್ಧಿಗೆ ದುಡ್ಡೇ ಇಲ್ಲ ಎಂದು ಹೇಳುತ್ತಿರುವ ಬಿಜೆಪಿಯವರಿಗೆ ಸುಳ್ಳೇ ಮನೆದೇವರು : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ10 March 2024 10:58 PM IST
share
ಅಭಿವೃದ್ಧಿಗೆ ದುಡ್ಡೇ ಇಲ್ಲ ಎಂದು ಹೇಳುತ್ತಿರುವ ಬಿಜೆಪಿಯವರಿಗೆ ಸುಳ್ಳೇ ಮನೆದೇವರು : ಸಿಎಂ ಸಿದ್ದರಾಮಯ್ಯ

"ಬೊಮ್ಮಾಯಿ ಕಾಲದ ಬಜೆಟ್ ಗಿಂತ ನಮ್ಮ ಬಜೆಟ್ ನ ಗಾತ್ರ ದೊಡ್ಡದು"

ಹೊಸಕೋಟೆ: ಬಜೆಟ್ ನಲ್ಲಿ ಗ್ಯಾರಂಟಿಗಳ ಜೊತೆಗೂ ಅಭಿವೃದ್ಧಿಗೆ ಅಪಾರ ಅನುದಾನ ಇಡಲಾಗಿದ್ದು, ಈ ಸತ್ಯವನ್ನು ಚರ್ಚಿಸಲು ರಾಜ್ಯದ ಜನರ ಮುಂದೆ ಬಹಿರಂಗ ಚರ್ಚೆ ಮಾಡೋಣ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲೆಸೆದರು.

ಇಂದು ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸವಲತ್ತುಗಳನ್ನು ನೀಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಬಿಜೆಪಿಯವರಿಗೆ ಸುಳ್ಳೇ ಮನೆದೇವರು

ಗ್ಯಾರಂಟಿಗಳನ್ನು ಜಾರಿ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ಖಜಾನೆಯಲ್ಲಿ ದುಡ್ಡು ಉಳಿದಿಲ್ಲ ಎಂದು ವಿರೋಧ ಪಕ್ಷಗಳು ನಿರಂತರವಾಗಿ ಸುಳ್ಳು ಸೃಷ್ಟಿಸುತ್ತಿದ್ದು, ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಆದರೆ ಇಂದು ಈ ಕ್ಷೇತ್ರದಲ್ಲಿ 600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ಅಭಿವೃದ್ಧಿಗೆ ದುಡ್ಡೇ ಇಲ್ಲ ಎಂದು ಹೇಳುತ್ತಿರುವ ಬಿಜೆಪಿಯವರಿಗೆ ಸುಳ್ಳೇ ಮನೆದೇವರು. ನಾವು ಅಧಿಕಾರಕ್ಕೆ ಬಂದು 9 ತಿಂಗಳ ಒಳಗೆ 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದು,36 ಸಾವಿರ ಕೋಟಿ ವೆಚ್ಚವಾಗಿದ್ದರೂ, ನಮ್ಮ ಖಜಾನೆ ಖಾಲಿಯಾಗಿಲ್ಲ. ಬಜೆಟ್ ನಲ್ಲಿ ಅಭಿವೃದ್ಧಿಗೆ 1.20 ಲಕ್ಷ ಕೋಟಿ ಪಾಲು ಇಟ್ಟಿದ್ದೇವೆ. 2024-25 ಕ್ಕೆ 3.71 ಲಕ್ಷ ಕೋಟಿ ರೂ.ಗಳ ಬಜೆಟ್ ನ್ನು ಮಂಡಿಸಿದ್ದೇನೆ. ಬೊಮ್ಮಾಯಿ ಯವರ ಕಾಲದ ಬಜೆಟ್ ಗಿಂತ ನಮ್ಮ ಬಜೆಟ್ ನ ಗಾತ್ರ ದೊಡ್ಡದು. ಇದು ರಾಜ್ಯದ ಅಭಿವೃದ್ಧಿಯ ಗುರುತಲ್ಲವೇ ಎಂದು ಸಿಎಂ ಪ್ರಶ್ನಸಿದರು.

ಗ್ಯಾರಂಟಿಗಳ ಮೂಲಕ ಜನರಿಗೆ ಆರ್ಥಿಕ ಬಲ

ರಾಜ್ಯದ ಜನರ ಕೈಗಳಿಗೆ ಮಧ್ಯವರ್ತಿಗಳ ಕಾಟವಿಲ್ಲದೇ ಹಣ ನೀಡುವ ಕೆಲಸವನ್ನು ಮಾಡಲಾಗುತ್ತಿದೆ. ಹೊಸಕೋಟೆ ವಿಧಾನಸಭಾ ಕ್ಷೇತ್ರವೊಂದರಲ್ಲೇ ಗೃಹಲಕ್ಷ್ಮಿ ಯೋಜನೆಯಡಿ 52 ಸಾವಿರ ಮಹಿಳೆಯರಿಗೆ 2000 ರೂ. ಹಣ ನೀಡಲಾಗುತ್ತಿದೆ. ಶಕ್ತಿ ಹಾಗೂ ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಯೋಜನೆಗಳ ಹಣದಿಂದ ಜನರಿಗೆ ಉಳಿತಾಯವಾಗುತ್ತಿದೆ. ಈ ಎಲ್ಲ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ತಲಾ 4 ರಿಂದ 5 ಸಾವಿರ ರೂ. ದೊರೆಯುತ್ತಿದೆ ಎಂದರು.

38 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 150 ಕೋಟಿ ರೂ.ಗಳನ್ನು ವೆಚ್ಚ

2008-2013ರವರೆಗೆ ಬಿಜೆಪಿಯವರ ಸರ್ಕಾರವಿತ್ತು. ಆಗ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೆರೆಗಳಿಗೆ ನೀರು ತುಂಬುವ ಯೋಜನೆಗಳ ಬಗ್ಗೆ ಗಮನಹರಿಸಲಿಲ್ಲ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾ , ತುಮಕೂರು, ಆನೇಕಲ್ ಕ್ಷೇತ್ರಗಳಲ್ಲಿ ಕೆರೆಗಳು ಬತ್ತಿಹೋಗಿದ್ದು, ಅವುಗಳನ್ನು ತುಂಬಿಸುವ ಕೆಸಿ ವ್ಯಾಲಿ, ಎಚ್ ಸಿ ವ್ಯಾಲಿ, ಅನೇಕಲ್ , ಹೊಸಕೇಟೆ, ಕಾಡುಬೀಜನಹಳ್ಳಿ ಯೋಜನೆಗಳ ಮೂಲಕ ಕೆರೆ ತುಂಬಿಸಲಾಯಿತು ಎಂದರು.

ಸಮಸಮಾಜ ಬಾಯಿಮಾತಿನಿಂದ ಆಗೋಲ್ಲ

ಗ್ಯಾರಂಟಿ ಯೋಜನಗಳಿಂದ ಬಡವರು, ಹಿಂದುಳಿದವರು,ಪರಿಶಿಷ್ಟರು ಹಾಗೂ ಅಲ್ಪಸಂಖ್ಯಾತರು ಆರ್ಥಿಕ ಸಾಮಾಜಿಕ ಸ್ಥಿತಿ ಬದಲಾಗುತ್ತಿದೆ. ಸಮಸಮಾಜ ನಿರ್ಮಾಣ ಮಾಡುತ್ತೇವೆ ಎಂದು ಬಾಯಿ ಮಾತಿನಲ್ಲಿ ಹೇಳಿದರೆ ಸಾಧ್ಯವಾಗುವುದಿಲ್ಲ. ಸಮಸಮಾಜ ನಿರ್ಮಾಣಕ್ಕೆ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಕಾರ್ಮಿಕರು, ಮಹಿಳೆಯರಿಗೆ ಆರ್ಥಿಕ ಸಾಮಾಜಿಕ ಶಕ್ತಿಯನ್ನು ತುಂಬುವ ಕೆಲಸ ಮಾಡಬೇಕು ಎಂದರು.

ಶರತ್ ಬಚ್ಚೇಗೌಡ ಕ್ರಿಯಾಶೀಲ ಶಾಸಕರು

ಶರತ್ ಬಚ್ಚೇಗೌಡ ಕ್ರಿಯಾಶೀಲ ಶಾಸಕರು. ಅವರ ತಂದೆಯನ್ನೂ ಮೀರಿಸಿ ಬೆಳೆಯುವ ಎಲ್ಲಾ ಲಕ್ಷಣಗಳೂ ಇವೆ. ಜನಪ್ರತಿನಿಧಿಗಳಿಗೆ ಜನಪರ ಕಾಳಜಿ ಮುಖ್ಯ. ಕ್ಷೇತ್ರ ಅಭಿವೃದ್ಧಿ ಯ ಕಾಳಜಿ ಶರತ್ ಬಚ್ಚೇಗೌಡರಲ್ಲಿ ಇದೆ. ಉತ್ತಮ ಸಂಸದೀಯ ಪಟುವಾಗಿಯೂ ಹೊರಹೊಮ್ಮುತ್ತಿದ್ದಾರೆ. ವಿಧಾನಸಭೆಯಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆಯಲ್ಲಿ ಭಾಗವಹಿಸುತ್ತಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X