Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ಗ್ರಾಮಾಂತರ
  4. ಪ್ರಜ್ವಲ್‌ ವಿದೇಶಕ್ಕೆ ಪರಾರಿಯಾಗಲು ...

ಪ್ರಜ್ವಲ್‌ ವಿದೇಶಕ್ಕೆ ಪರಾರಿಯಾಗಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸರಕಾರ ಮುಖ್ಯ ಕಾರಣ: ವಿ.ಮನೋಹರ್ ಆರೋಪ

ಪೆನ್‌ಡ್ರೈವ್ ಪ್ರಕರಣದ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು

ವಾರ್ತಾಭಾರತಿವಾರ್ತಾಭಾರತಿ29 April 2024 3:20 PM IST
share
ಪ್ರಜ್ವಲ್‌ ವಿದೇಶಕ್ಕೆ ಪರಾರಿಯಾಗಲು  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸರಕಾರ ಮುಖ್ಯ ಕಾರಣ: ವಿ.ಮನೋಹರ್ ಆರೋಪ

ಬೆಂಗಳೂರು, ಎ. 29: ಹಾಸನ ಜಿಲ್ಲೆಯಲ್ಲಿ ಮುಗ್ಧ ಮಹಿಳೆಯರ ಮೇಲೆ ಮಾನಸಿಕವಾಗಿ ಚಿತ್ರಹಿಂಸೆ ನೀಡಿ, ಮಹಿಳೆಯರನ್ನು ಬೆತ್ತಲೆಗೊಳಿಸಿ, ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾನವ ಹಕ್ಕುಗಳ ಆಯೋಗಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಮನೋಹರ್ ದೂರು ನೀಡಿದ್ದಾರೆ.

ಸೋಮವಾರ ನಗರದ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್‌ಡ್ರೈವ್ ಪ್ರಕರಣದ ಕುರಿತು ರಾಜ್ಯ ಸರಕಾರ ಈಗಾಗಲೇ ಎಸ್‌ಐಟಿ ರಚನೆ ಮಾಡಿದೆ. ಮಹಿಳಾ ಆಯೋಗ ತನ್ನ ವ್ಯಾಪ್ತಿಯಲ್ಲಿ ಈಗಾಗಲೇ ದೂರನ್ನು ಕೊಟ್ಟಿದೆ. ಮಾನವ ಹಕ್ಕುಗಳ ಆಯೋಗ ಈಗಾಗಲೇ ಸ್ವಯಂ ಪ್ರೇರಿತವಾಗಿ ದೂರನ್ನು ದಾಖಲಿಸಿಕೊಳ್ಳಬೇಕಿತ್ತು. ಮಾನವ ಹಕ್ಕುಗಳು ಉಲ್ಲಂಘನೆ ಆದರೂ ಇಲ್ಲಿಯವರೆಗೂ ಯಾವುದೇ ಕ್ರಮ ತೆಗೆದುಕೊಳ್ಳದೆ ಇರುವುದು ಅತ್ಯಂತ ವಿಷಾದ ಎಂದು ಬೇಸರ ವ್ಯಕ್ತಪಡಿಸಿದರು.

ಮಾನವ ಹಕ್ಕುಗಳ ಆಯೋಗ ಕೂಡಲೇ ಹಾಸನ ಜಿಲ್ಲೆಗೆ ಭೇಟಿ ನೀಡಿ, ಮಹಿಳೆಯರಿಗೆ ಆಗಿರುವಂತಹ ಅನ್ಯಾಯ, ದೌರ್ಜನ್ಯವನ್ನು ಕಣ್ಣಾರೆ ಕಂಡು ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಆರೋಪಿ ಪ್ರಜ್ವಲ್ ಮತ್ತು ರೇವಣ್ಣರನ್ನು ಬಂಧಿಸಬೇಕು. ಮಾನವ ಹಕ್ಕುಗಳ ಆಯೋಗ ವಿಶೇಷ ತಂಡ ರಚನೆ ಮಾಡಿ ನಾಳೆ ಸಂಜೆಯ ಒಳಗೆ ಮಾಹಿತಿ ಪಡೆದುಕೊಳ್ಳಬೇಕು. ಈ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕೂಡಲೇ ಅತ್ಯಂತ ಕಠಿಣ ಕ್ರಮ ಕೈಗೊಂಡು ಸಂತ್ರಸ್ತ ಮಹಿಳೆಯರನ್ನ ರಕ್ಷಿಸ ಬೇಕು ಎಂದು ಮನೋಹರ್ ತಿಳಿಸಿದರು.

ಕೋಮುವಾದವನ್ನು ವಿರೋಧ ಮಾಡುತ್ತಿದ್ದ ದೇವೇಗೌಡರು, ಯಾವ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಪ್ರಜ್ವಲ್‌ ನನ್ನು ರಕ್ಷಣೆ ಮಾಡಬೇಕು ಎನ್ನುವ ಉದ್ದೇಶದಿಂದಲೇ ಜನತಾದಳ ಬಿಜೆಪಿಯೊಂದಿಗೆ ಕೈ ಜೋಡಿಸಿರುವುದು. ತನ್ನ ಕುಟುಂಬ ರಕ್ಷಣೆ ಮಾಡಿಕೊಳ್ಳುವುದಕ್ಕಾಗಿ ಈ ತರದ ಕೆಲಸ ಮಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪರಾರಿಯಾಗಲು ಮುಖ್ಯ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಕೇಂದ್ರ ಸರಕಾರ. ಪ್ರಜ್ವಲ್ ಇಂತಹ ಕೆಟ್ಟ ಕೆಲಸವನ್ನು ಮಾಡಿರುವುದು ಇವರಿಗೆ ಮೊದಲೆ ಗೊತ್ತಿತ್ತು ಎಂದು ಆರೋಪ ವಿ.ಮನೋಹರ್ ಆರೋಪ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X