Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ಗ್ರಾಮಾಂತರ
  4. ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ...

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಸಚಿವ ಮುನಿಯಪ್ಪ ಚಾಲನೆ

ವಾರ್ತಾಭಾರತಿವಾರ್ತಾಭಾರತಿ21 Dec 2025 12:42 PM IST
share
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಸಚಿವ ಮುನಿಯಪ್ಪ ಚಾಲನೆ

ಬೆಂ.ಗ್ರಾಂ.ಜಿಲ್ಲೆ: ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ದೇವನಹಳ್ಳಿಯ ತಾಲ್ಲೂಕಿನ ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪೋಷಕರು ಯಾವುದೇ ಭಯವಿಲ್ಲದೆಯೇ ಮಕ್ಕಳಿಗೆ ಪೋಲಿಯೋ ಹನಿಯನ್ನು ತಪ್ಪದೇ ಹಾಕಿಸುವ ಮೂಲಕ ಮಕ್ಕಳನ್ನು ಅಂಗವೈಕಲ್ಯದಿಂದ ಪಾರುಮಾಡಿ. ಪೋಲಿಯೋ ಹನಿ ಪಡೆಯದಿಲ್ಲದ ಯಾವ ಮಗುವು ಸುರಕ್ಷಿತವಲ್ಲ ಎಂಬ ಅಂಶವನ್ನು ಪೋಷಕರು ಮನಗಾಣಬೇಕು ಎಂದರು.

ಡಿಸೆಂಬರ್ 21 ರಿಂದ 24 ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಒಟ್ಟು 99828 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಮತ್ತು ಜಿಲ್ಲೆಯಲ್ಲಿ ಒಟ್ಟು 1374 ಕಠಿಣ ಪ್ರದೇಶಗಳನ್ನು (ಹೆಚ್.ಆರ್.ಎ) ಗುರುತಿಸಲಾಗಿದ್ದು, ಇವುಗಳ ಮೇಲೆ ಹೆಚ್ಚು ನಿಗಾವಹಿಸಿ ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಯಾವುದೇ ಕಾರಣಕ್ಕೂ ಪೋಲಿಯೋ ಲಸಿಕೆಯಿಂದ ವಂಚಿತ ಆಗದಂತೆ ಕ್ರಮವಹಿಸಲಾಗಿದೆ ಎಂದರು.

ಎಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಉಪಕೇಂದ್ರಗಳಲ್ಲಿ ಹಾಗೂ ಶಾಲೆಗಳಲ್ಲಿ/ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು.

ಜಿಲ್ಲೆಯಾದ್ಯಂತ ಒಟ್ಟು 476 ಬೂತ್‌ಗಳ ಜೊತೆಗೆ 85 ಟ್ರಾನ್ಸಿಟ್ ತಂಡಗಳ ವ್ಯವಸ್ಥೆ ಮಾಡಲಾಗಿದ್ದು, ಮಕ್ಕಳಿಗೆ ಲಸಿಕೆಯನ್ನು ಹಾಕಲು ಒಟ್ಟು 2148 ಲಸಿಕಾದಾರರನ್ನು ನಿಯೋಜಿಸಲಾಗಿದೆ. ಇದರ ಮೇಲ್ವಿಚಾರಣೆಗಾಗಿ ಒಟ್ಟು 106 ಮೇಲ್ವಿಚಾರಕರನ್ನು ನೇಮಿಸಿದ್ದು. ಜಿಲ್ಲೆಯಲ್ಲಿ ಗ್ರಾಮೀಣ / ನಗರ ಪ್ರದೇಶದ ಒಟ್ಟು 2,80,986 ಮನೆಗಳಿಗೆ ಭೇಟಿ ನೀಡಿ ಲಸಿಕೆ ನೀಡಲು ಗುರಿ ಹೊಂದಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ರಾಜಣ್ಣ, ಬಯಪ್ಪ ಅಧ್ಯಕ್ಷರಾದ ವಿ. ಶಾಂತಕುಮಾರ್, ಬಯಪ್ಪ ನಿರ್ದೇಶಕರಾದ ಪ್ರಸನ್ನಕುಮಾರ್, ಪುರಸಭೆ ಅಧ್ಯಕ್ಷರಾದ ಡಿ.ಎಂ ಮುನಿಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಲಕ್ಕಾ ಕೃಷ್ಣಾರೆಡ್ಡಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಸೀಮಾ ರುದ್ರಪ್ಪ ಮಾಬಳೆ, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಕೆಪಿಸಿಸಿ ಸದಸ್ಯರಾದ ಚಿನ್ನಪ್ಪ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಸಿ ಮಂಜುನಾಥ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನ್ನೂರ ವೆಂಕಟೇಶ್ ಸೇರಿದಂತೆ ಆರೋಗ್ಯ ಇಲಾಖೆ ವೈದ್ಯರು ಹಾಗೂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X