Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ಗ್ರಾಮಾಂತರ
  4. ಬಯೋ ಸಿಎನ್‌ಜಿ ಪ್ಲಾಂಟ್‌ಗೆ ಕಾರ್ಬನ್‌...

ಬಯೋ ಸಿಎನ್‌ಜಿ ಪ್ಲಾಂಟ್‌ಗೆ ಕಾರ್ಬನ್‌ ಕ್ರೆಡಿಟ್ಸ್‌ ಬಳಕೆ: ಕೃಷಿ ಮಾರುಕಟ್ಟೆ ಸಚಿವರೊಂದಿಗೆ ಕೊಸ್ಯಾಂಬೊ ಅಧಿಕಾರಿ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ23 Jun 2025 2:27 PM IST
share
ಬಯೋ ಸಿಎನ್‌ಜಿ ಪ್ಲಾಂಟ್‌ಗೆ ಕಾರ್ಬನ್‌ ಕ್ರೆಡಿಟ್ಸ್‌ ಬಳಕೆ: ಕೃಷಿ ಮಾರುಕಟ್ಟೆ ಸಚಿವರೊಂದಿಗೆ ಕೊಸ್ಯಾಂಬೊ ಅಧಿಕಾರಿ ಚರ್ಚೆ

ಬೆಂಗಳೂರು: ತರಕಾರಿ ಮತ್ತು ಇತರ ತ್ಯಾಜ್ಯ ಬಳಕೆ ಮಾಡಿ ಬಯೋ ಸಿಎನ್‌ಜಿ ಪ್ಲಾಂಟ್‌ಗಳ ಸ್ಥಾಪನೆಗೆ ಕೇಂದ್ರ ಸರ್ಕಾರದ ಕಾರ್ಬನ್‌ ಕ್ರೆಡಿಟ್ಸ್‌ ಅನುದಾನ ಬಳಕೆ ಬಗ್ಗೆ ದೆಹಲಿಯ ಕೊಸ್ಯಾಂಬೋ ( ಕೌನ್ಸಿಲ್‌ ಆಫ್‌ ಸ್ಟೇಟ್‌ ಅಗ್ರಿಕಲ್ಟರ್‌ ಮಾರ್ಕೆಟಿಂಗ್‌ ಡಿಪಾರ್ಟ್‌ಮೆಂಟ್‌) ವ್ಯವಸ್ಥಾಪಕ ನಿರ್ದೇಶಕ ಡಾ. ಜೆ.ಎಸ್‌. ಯಾದವ್‌ ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಸೋಮವಾರ ಭೇಟಿ ಮಾಡಿ ಚರ್ಚಿಸಿದರು.

ರಾಜ್ಯದಲ್ಲಿ ಬೆಂಗಳೂರಿನ ದಾಸನಪುರ, ಮೈಸೂರು ಮತ್ತು ಕೋಲಾರಗಳಲ್ಲಿ ಈಗಾಗಲೇ ಬಯೋ ಸಿಎನ್‌ಜಿ ಪ್ಲಾಂಟ್‌ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ಅವರು ಡಾ. ಜೆ.ಎಸ್‌. ಯಾದವ್‌ ಅವರ ಗಮನಕ್ಕೆ ತಂದರು.

ತರಕಾರಿ ಮತ್ತಿತರ ತ್ಯಾಜ್ಯ ಬಳಸಿ ಬಯೋ ಗ್ಯಾಸ್‌ ಉತ್ಪಾದನೆ ಮಾಡುವುದರಿಂದ ಪರಿಸರಕ್ಕೆ ವಿಷಕಾರಿ ಅನಿಲ ಸೇರ್ಪಡೆಯಾಗುವುದನ್ನು ತಡೆಗಟ್ಟಬಹುದು. ಘನ ತ್ಯಾಜ್ಯ ನಿರ್ವಹಣೆ ಕಾಯ್ದೆಗೆ ಕೇಂದ್ರ ಸರ್ಕಾರ ಅಕ್ಟೋಬರ್‌ನಲ್ಲಿ ತಿದ್ದುಪಡಿ ತರಲಿದ್ದು, ಈ ಮೂಲಕ ಲಭ್ಯವಾಗುವ ನೆರವನ್ನು ಬಳಕೆ ಮಾಡಿಕೊಂಡು ಎಪಿಎಂಸಿಗಳಲ್ಲಿ ಬಯೋ ಗ್ಯಾಸ್‌ ಪ್ಲಾಂಟ್‌ಗಳನ್ನು ನಿರ್ಮಾಣ ಮಾಡುವುದು ಸೂಕ್ತ ಎಂದು ಡಾ. ಜೆ.ಎಸ್‌. ಯಾದವ್‌ ಸಲಹೆ ಮಾಡಿದರು.

ಪ್ರತಿದಿನ 50 ಟನ್‌ ಉತ್ಪಾದನೆ ಮಾಡಿದರೆ ಮಾತ್ರ ಈ ಯೋಜನೆ ಲಾಭದಾಯಕವಾಗಲಿದೆ. ಇದು ಲಾಭದಾಯಕ ಎಂದಾಗ ಮಾತ್ರ ಖಾಸಗಿಯವರೂ ಬಯೋ ಗ್ಯಾಸ್‌ ಪ್ಲಾಂಟ್‌ ನಿರ್ಮಿಸಲು ಮುಂದೆ ಬರುತ್ತಾರೆ. ರಾಜ್ಯದ ಯಾವ ಯಾವ ಎಪಿಎಂಸಿಗಳಲ್ಲಿ ಪ್ರತಿದಿನ ಎಷ್ಟು ತ್ಯಾಜ್ಯ ಉತ್ಪಾದನೆಯಾಗುತ್ತದೆ. ಎಲ್ಲೆಲ್ಲಿ ಬಯೋಗ್ಯಾಸ್‌ ಪ್ಲಾಂಟ್‌ ನಿರ್ಮಿಸಿದರೆ ಲಾಭದಾಯಕ ಎಂಬುದನ್ನು ಗುರುತಿಸಿ ಯೋಜನೆ ರೂಪಿಸುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಬರಲಾಯಿತು.

ಅತಿ ಹೆಚ್ಚು ತ್ಯಾಜ್ಯ ಉತ್ಪಾದನೆಯಾಗುವ ಬೆಂಗಳೂರು, ಮೈಸೂರು ಮತ್ತು ಕೋಲಾರಗಳಲ್ಲಿ ಸ್ಥಾಪನೆ ಮಾಡುವುದು ಸೂಕ್ತ ಎಂಬ ಸಲಹೆ ವ್ಯಕ್ತವಾಯಿತು.

ಹಣ್ಣುಗಳ ಪ್ಯಾಕಿಂಗ್‌ ಮಾಡಲು ಹಾನಿಕಾರಕ ರಾಸಾಯನಿಕ ಬಳಕೆ, ಸೇಬು ಸೇರಿದಂತೆ ಇತರ ಹಲವು ಹಣ್ಣುಗಳ ಬ್ರಾಂಡ್‌ಗಳನ್ನು ಗುರುತಿಸಲು ಅವುಗಳ ಮೇಲೆ ಸ್ಟಿಕ್ಕರ್‌ಗಳನ್ನು ಹಚ್ಚುವುದು ಅಪಾಯಕಾರಿ. ಇಂತಹ ಹಣ್ಣುಗಳ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು, ಈ ಬಗ್ಗೆ ವರ್ತಕರಲ್ಲಿ ಜಾಗೃತಿ ಮೂಡಿಸಬೇಕು ಎಂಬ ಬಗ್ಗೆ ಕೂಡ ಚರ್ಚೆ ನಡೆಯಿತು.

ಆಹಾರ ಸುರಕ್ಷತೆ ಕಾಯ್ದೆಯಲ್ಲಿ ಈ ಎಲ್ಲ ಅಂಶಗಳು ಬರುತ್ತವೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಅಂಶಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ. ಈ ನಿಯಮಗಳನ್ನು ಪಾಲನೆ ಮಾಡಲು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಕಲ್ಲಂಗಡಿ, ಬೆಂಡೆಕಾಯಿ, ಕ್ಯಾರೆಟ್‌ ಸೇರಿದಂತೆ ಕೆಲವು ಹಣ್ಣು, ತರಕಾರಿಗಳಿಗೆ ಕೃತಕ ಬಣ್ಣ ಬಳಕೆ ಮಾಡಲಾಗುತ್ತಿದೆ. ಗರಿಷ್ಠ ಪ್ರಮಾಣದಲ್ಲಿ ಕೀಟನಾಶಕ ಬಳಸುವುದೂ ಕೂಡ ಅಪಾಯಕಾರಿ. ಆದ್ದರಿಂದ ತರಕಾರಿಗೆ ಕೃತಕ ಬಣ್ಣ ಬಳಕೆ ಮತ್ತು ಸಾಧ್ಯವಾದಷ್ಟು ಕಡಿಮೆ ಪ್ರಮಾಣದಲ್ಲಿ ಕೀಟನಾಶಕ ಬಳಸುವ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಇಲ್ಲವಾದರೆ ಭವಿಷ್ಯದ ದಿನಗಳಲ್ಲಿ ಆರೋಗ್ಯದ ಮೇಲೆ ಗರಿಷ್ಠ ಪ್ರಮಾಣದಲ್ಲಿ ದುಷ್ಪರಿಣಾಮ ಬೀರಲಿದೆ ಎನ್ನುವ ಅಂಶಗಳ ಬಗ್ಗೆ ಕೂಡ ಚರ್ಚೆ ನಡೆಯಿತು.

ತೋಟಗಾರಿಕೆ, ಪುಷ್ಪೋದ್ಯಮ ಮತ್ತು ಹೈನುಗಾರಿಕೆ ಉದ್ಯಮದಲ್ಲಿ ಕರ್ನಾಟಕ ರಾಜ್ಯ ಮಂಚೂಣಿಯಲ್ಲಿದೆ ಎಂದು ಸಚಿವ ಶಿವಾನಂದ ಪಾಟೀಲ ಅವರು ಜೆ.ಎಸ್‌.ಯಾದವ್‌ ಅವರ ಗಮನಕ್ಕೆ ತಂದರು. ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕ ಶಿವಾನಂದ ಕಾಪಸೆ, ಅಧೀಕ್ಷಕ ಅಭಿಯಂತರ ರಘುನಂದನ್‌, ಸಚಿವರ ವಿಶೇಷ ಕರ್ತವ್ಯಾಧಿಕಾರಿ ರವಿಪ್ರಕಾಶ್‌, ಕರ್ನಾಟಕ ಕೃಷಿ ಮಾರಾಟ ಮಹಾ ಮಂಡಳದ ಮುಖ್ಯ ಪ್ರಧಾನ ವ್ಯವಸ್ಥಾಪಕ ಚಂದ್ರಕಾಂತ್‌ ಪಾಟೀಲ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X