‘ಕೆಆರ್‌ಎಸ್ ಅಣೆಕಟ್ಟೆಗೆ ಟಿಪ್ಪು ಅಡಿಗಲ್ಲು’ ನೂರಕ್ಕೆ ನೂರು ಸತ್ಯ: ಎಂ.ಲಕ್ಷ್ಮಣ್

ಮೈಸೂರು : ಕೆ.ಆರ್.ಎಸ್.ಅಣೆಕಟ್ಟೆ ಕಟ್ಟಲು ಟಿಪ್ಪು ಸುಲ್ತಾನ್ ಮೊದಲು ಅಡಿಗಲ್ಲು ಹಾಕಿದ್ದರು ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಹೇಳಿರುವುದು ನೂರಕ್ಕೆ ನೂರು ಸತ್ಯ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸಮರ್ಥಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಣೆಕಟ್ಟೆ ಕಟ್ಟಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್. ಆದರೆ ಅದಕ್ಕೂ ಮೊದಲು ಅದೇ ಜಾಗದಲ್ಲಿ ಬ್ಯಾರೇಜ್ ಕಟ್ಟಿದ್ದು ಟಿಪ್ಪು. ಮೋವಿ ಡ್ಯಾಂ ಅಂತಾ ಹೆಸರಿಟ್ಟು 6 ಟಿಎಂಸಿ ನೀರು ಸಂಗ್ರಹಣದ ಬ್ಯಾರೇಜ್ ಅನ್ನು ಟಿಪ್ಪು ಕಟ್ಟಿದ್ದರು. ಶ್ರೀರಂಗಪಟ್ಟಣ, ಕೆ.ಆರ್. ನಗರ ಭಾಗಕ್ಕೆ ಇದರಿಂದ ನೀರು ಹರಿಸುತ್ತಿದ್ದರು. ನಂತರ ಇದೇ ಜಾಗದಲ್ಲಿ ಕೆಆರ್‌ಎಸ್ ಅಣೆಕಟ್ಟು ಕಟ್ಟಲಾಗಿದೆ. ಇದಕ್ಕೆ ಶಾಸನವೇ ಸಾಕ್ಷಿ ಇದೆ ಎಂದು ಹೇಳಿದರು.
Next Story





