Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪಟ್ಟಣ ಪಂಚಾಯ್ತಿ ನಾಮಫಲಕ ಶೀಘ್ರ...

ಪಟ್ಟಣ ಪಂಚಾಯ್ತಿ ನಾಮಫಲಕ ಶೀಘ್ರ ಬೆಂಗಳೂರು ದಕ್ಷಿಣ ಪಾಲಿಕೆ ಎಂದು ಬದಲಾಗುವ ವಿಶ್ವಾಸ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ7 Aug 2025 3:52 PM IST
share
ಪಟ್ಟಣ ಪಂಚಾಯ್ತಿ ನಾಮಫಲಕ ಶೀಘ್ರ ಬೆಂಗಳೂರು ದಕ್ಷಿಣ ಪಾಲಿಕೆ ಎಂದು ಬದಲಾಗುವ ವಿಶ್ವಾಸ :  ಡಿ.ಕೆ.ಶಿವಕುಮಾರ್

ಬೆಂಗಳೂರು: “ಸದ್ಯಕ್ಕೆ ದೊಡ್ಡತೋಗೂರು ಪಟ್ಟಣ ಪಂಚಾಯ್ತಿ ಎಂದು ಇರುವ ನಾಮಫಲಕ ಬೆಂಗಳೂರು ದಕ್ಷಿಣ ಪಾಲಿಕೆ ಎಂದು ಶೀಘ್ರದಲ್ಲೇ ಬದಲಾಗಲಿದೆ ಎಂಬ ವಿಶ್ವಾಸ ನನಗಿದೆ. ಬೆಂಗಳೂರು ನಗರ ಪ್ರದೇಶದಲ್ಲಿರುವ ನೀವು ಎಲ್ಲಾ ಮೂಲಭೂತ ಸೌಕರ್ಯ ಪಡೆಯಲು ಅರ್ಹರಿದ್ದೀರಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಬೆಂಗಳೂರು ದಕ್ಷಿಣ ತಾಲ್ಲೂಕಿನ ದೊಡ್ಡತೋಗೂರು ಪಟ್ಟಣ ಪಂಚಾಯಿತಿ ಕಚೇರಿ ನೂತನ ಕಟ್ಟಡ ಶಂಕುಸ್ಥಾಪನೆ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಮಾತನಾಡಿದರು.

“ಬೆಂಗಳೂರು ನಗರದಲ್ಲಿದ್ದೇವೆ ಎಂಬ ಹಿರಿಮೆ ನಿಮಗೂ ಇರಬೇಕು. ಈ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ 28 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳಿಗೆ ಅನುಮತಿ ನೀಡಿದ್ದೇನೆ.” ಎಂದು ತಿಳಿಸಿದರು.

ಪಾಲಿಕೆ ಚುನಾವಣೆ ನಿಲ್ಲಿಸುವುದಿಲ್ಲ:

“ನಾನು ಈ ಕ್ಷೇತ್ರವನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. ಪಕ್ಕದಲ್ಲೇ ಎಲೆಕ್ಟ್ರಾನಿಕ್ ಸಿಟಿ ಇದೆ. ಈ ಭಾಗದಲ್ಲಿ ಸರಿಯಾಗಿ ತೆರಿಗೆ ಪಾವತಿಯಾಗುತ್ತಿಲ್ಲ ಎಂದು ಇಲ್ಲಿನ ಶಾಸಕರಾದ ಕೃಷ್ಣಪ್ಪ ಅವರೂ ಸೇರಿದಂತೆ ಅನೇಕರು ದೂರು ನೀಡಿದ್ದಾರೆ. ನಮ್ಮ ಸರ್ಕಾರ ಬೆಂಗಳೂರಿಗೆ ಹೊಸ ರೂಪ ನೀಡುತ್ತಿದೆ. ಗ್ರೇಟರ್ ಬೆಂಗಳೂರು ಸೇರಿದಂತೆ ಯಾವುದೇ ಅಭಿವೃದ್ದಿ ಕೆಲಸಗಳನ್ನು ಚುನಾವಣಾ ದೃಷ್ಟಿಯಿಂದ ಮಾಡುತ್ತಿಲ್ಲ. ಈಗಾಗಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿಧೇಯಕ ಅಂಗೀಕಾರವಾಗಿದೆ. ಇದರಡಿ ಐದು ಪಾಲಿಕೆ ಮಾಡಲು ತೀರ್ಮಾನಿಸಲಾಗಿದ್ದು, ಇವುಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಕೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಚುನಾವಣೆ ನಿಲ್ಲಿಸುವುದಿಲ್ಲ” ಎಂದು ತಿಳಿಸಿದರು.

“ಅಕ್ಟೋಬರ್ 31 ರ ಹೊತ್ತಿಗೆ ಪಾಲಿಕೆಗಳಲ್ಲಿ ಎಷ್ಟು ವಾರ್ಡ್ ಗಳು ಇರಬೇಕು ಎಂಬುದು ಸೇರಿದಂತೆ ಅಂತಿಮ ರೂಪುರೇಷೆ ನಿರ್ಧಾರವಾಗುತ್ತದೆ. ಈ ಮಧ್ಯೆ ಶಾಸಕರು ಹಾಗೂ ನಮ್ಮ ಮುಖಂಡರು ಈ ಭಾಗವನ್ನೂ ಗ್ರೇಟರ್ ಬೆಂಗಳೂರಿಗೆ ಸೇರಿಸಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಇದು ಬಹಳ ಅವಶ್ಯವಾಗಿದೆ. ಆನೇಕಲ್ ಶಾಸಕ ಶಿವಣ್ಣ, ರಮೇಶ್ ಹಾಗೂ ಮಾಜಿ ಸಂಸದ ಸುರೇಶ್ ಅವರು ಅನೇಕ ಬಾರಿ ನನ್ನ ಬಳಿ ಪ್ರಸ್ತಾಪ ಮಾಡಿದ್ದಾರೆ. ಇದಕ್ಕೆ ಈಗಾಗಲೇ ನೀಲನಕ್ಷೆ ರೂಪಿಸಿದ್ದೇವೆ” ಎಂದರು.

“ನಿಮ್ಮ ಭಾಗದಲ್ಲೂ ಶೀಘ್ರದಲ್ಲೇ ಚುನಾವಣೆ ಮಾಡಲಾಗುವುದು. ಪಾಲಿಕೆಗಳು ಹಾಗೂ ಈ ಹೊಸ ಪಟ್ಟಣ ಪಂಚಾಯ್ತಿ ಇನ್ನು ಮುಂದೆ ಜೊತೆಯಾಗಿ ಸಮಾನವಾಗಿ ಮುಂದೆ ಸಾಗಬೇಕು. ಮುಂದೆ ನಿಮ್ಮನ್ನು ಬೆಂಗಳೂರು ದಕ್ಷಿಣ ವ್ಯಾಪ್ತಿಯ ಪಾಲಿಕೆಗೆ ಸೇರಿಸಿಕೊಳ್ಳಲಾಗುತ್ತದೆ. ನಿಮ್ಮನ್ನು ದೂರ ಇಡಲು ಆಗುವುದಿಲ್ಲ” ಎಂದು ಹೇಳಿದರು.

ನೀರು ಹಂಚಲು ಒಂದು ವಾರದಲ್ಲಿ ಸಭೆ:

“ನೀರಿನ ವಿಚಾರದಲ್ಲಿ ಸುರೇಶ್ ಅವರು ಈಗಾಗಲೇ ಪ್ರಸ್ತಾವನೆ ಮಾಡಿ ಅನುಮೋದನೆ ಕೊಡಿಸಿದ್ದಾರೆ. ಶಾಸಕರಾದ ಕೃಷ್ಣಪ್ಪ, ರಮೇಶ್, ಗೋಪಿನಾಥ್, ರಾಮೋಜಿ ಗೌಡ ಅವರು ಸೇರಿದಂತೆ ಎಲ್ಲರೂ ನೀರು ಪೂರೈಕೆಗೆ ಒತ್ತಾಯ ಮಾಡಿದ್ದು, ಮುಂದಿನ ಒಂದು ವಾರದಲ್ಲಿ ಸಭೆ ಮಾಡಿ ನಿಮಗೆ ಹೇಗೆ ಕಾವೇರಿ ನೀರನ್ನು ಹಂಚಬೇಕು ಎಂದು ತೀರ್ಮಾನ ಮಾಡಲಾಗುವುದು” ಎಂದರು.

“ಇಲ್ಲಿನ ಜನಸಂಖ್ಯೆಗೂ ಮತದಾರರ ಪಟ್ಟಿ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಮುಂದೆ ಪ್ರಾಮಾಣಿಕವಾಗಿ ಇದನ್ನು ಸರಿಮಾಡಿಕೊಳ್ಳೋಣ. ಇದೇ ತಿಂಗಳು 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಭಾಗಕ್ಕೆ ಆಗಮಿಸುತ್ತಿದ್ದು, ಹಳದಿ ಮಾರ್ಗ ಉದ್ಘಾಟನೆಯಾಗಲಿದೆ. ನಿಮ್ಮ ಭಾಗದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ. ಆಸ್ತಿ ಮೌಲ್ಯಗಳು ಹೆಚ್ಚುತ್ತದೆ. ಮುಂದೆ ನಾವು ಎಲ್ಸಿಟಾ ಒಳಗೆ ಫ್ಲೈಓವರ್ ಮಾಡುವ ಅವಶ್ಯಕತೆ ಇದೆ. ಇಲ್ಲಿ ಸಂಜೆ ವೇಳೆ ಜನಸಂಖ್ಯೆ ಬ್ರಿಗೇಡ್ ರಸ್ತೆಗಿಂತ ಕಡಿಮೆ ಇರುವುದಿಲ್ಲ. ಲೋಕಸಭೆ ಚುನಾವಣೆ ಪ್ರಚಾರದ ವೇಳೆ ನಾನು ಇಲ್ಲಿನ ಪರಿಸ್ಥಿತಿ ನೋಡಿದ್ದೆ. ಎಲ್ಸಿಟಾ ಅವರೇ ಈ ಮೇಲ್ಸೇತುವೆ ಮಾಡಬೇಕು. ಮಾಡದಿದ್ದರೇ, ನಾವು ಇದನ್ನು ಪಾಲಿಕೆ ವ್ಯಾಪ್ತಿಗೆ ತೆಗೆದುಕೊಂಡು ಅಗತ್ಯ ಕ್ರಮ ಕೈಗೊಳ್ಳುತ್ತೇನೆ” ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X