Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜೀತಪದ್ದತಿ ಮಾನವ ಹಕ್ಕುಗಳ ಸ್ಪಷ್ಟ...

ಜೀತಪದ್ದತಿ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ : ಎಚ್.ಸಿ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ10 Aug 2025 11:59 PM IST
share
ಜೀತಪದ್ದತಿ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ : ಎಚ್.ಸಿ.ಮಹದೇವಪ್ಪ
ಕರ್ನಾಟಕ ಜೀತದಾಳು, ಕೃಷಿ ಕಾರ್ಮಿಕರ ಒಕ್ಕೂಟದ ರಾಜ್ಯ ಮಟ್ಟದ ಸಮಾವೇಶ, ಒಕ್ಕೂಟದ ಚುನಾವಣೆಗೆ ಚಾಲನೆೆ

ಮೈಸೂರು, ಆ.10 : ಶೋಷಣೆಗೆ ಒಳಗಾದವರು, ಬದುಕಿಗೆ ಮಾರ್ಗಗಳಿಲ್ಲದೆ ಹಾಗೂ ಅಸಾಯಕತೆಯ ಜೀವನವನ್ನು ನಡೆಸುವಂತಹವರು ಮತ್ತು ಎರಡನೇ ದರ್ಜೆಯ ಪ್ರಜೆಗಳಾಗಿ ಬದುಕುತ್ತಿರುವವರು ಸಂವಿಧಾನದಲ್ಲಿರುವ ಅವಕಾಶಗಳನ್ನು ಬಳಸಿಕೊಂಡು ಸಮ ಸಮಾಜದತ್ತ ಸಾಗುವ ಪ್ರಯತ್ನ ಮಾಡಬೇಕು ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ನಗರದ ಕಲಾಮಂದಿರದಲ್ಲಿ ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದಿಂದ ರವಿವಾರ ನಡೆದ ರಾಜ್ಯ ಮಟ್ಟದ ಸಮಾವೇಶ ಮತ್ತು ಒಕ್ಕೂಟದ ಚುನಾವಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಕಾರ ಜೀತ ಪದ್ದತಿ ಎನ್ನವುದು ಅಸ್ಪೃಶ್ಯತೆ ಮತ್ತು ಜಾತೀಯತೆಯ ಆಚರಣೆಯ ಒಂದು ಭಾಗ ಹಾಗೂ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ. ಹಿಂದೆ ಭಾರತದಲ್ಲಿ ಜೀತ ಪದ್ಧತಿ ವ್ಯವಸ್ಥೆ ಇರಲಿಲ್ಲ. ಚೀನಾ, ರಷ್ಯಾ ಸೇರಿದಂತೆ ಯೂರೋಪ್ ರಾಷ್ಟ್ರಗಳಲ್ಲಿ ಕಂಡು ಬರುತ್ತಿತ್ತು. ತೆಗೆದುಕೊಂಡ ಸಾಲವನ್ನು ತೀರಿಸದೆ ಇದ್ದಾಗ ಜೀವನ ಪರ್ಯಾಂತ ದುಡಿಯಬೇಕಾಗಿತ್ತು. ಈ ಪದ್ಧತಿ ತಲೆ ತಲೆ ಮಾರಿಗೂ ಪರಿವರ್ತನೆಯಾಗಿ ಬಂದಿತು ಎಂದು ತಿಳಿಸಿದರು.

ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವ ಸಲುವಾಗಿ 1976ರಲ್ಲಿ ಇಂದಿರಾ ಗಾಂಧಿ ಅವರು ಉಳುವವನೆ ಭೂಮಿಯ ಒಡೆಯ ಹಾಗೂ ಸಾಲ ನಿರ್ಮೂಲನೆಯಂತಹ ಐತಿಹಾಸಿಕ ತೀರ್ಮಾನ ತೆಗೆದುಕೊಂಡು ಜಾತಿ ಮತ್ತು ಹಣ ಬಲ ಇರತಕ್ಕಂತಹ ಹಾಗೂ ತೋಳ್ಬಲ ಜನರ ಕಪಿಮುಷ್ಟಿಯಲ್ಲಿ ಸಿಲುಕಿ ಇಡೀ ಜೀವನವನ್ನು ಗುಲಾಮ ಗಿರಿಯಿಂದ ದುರ್ಬಲ ವರ್ಗದ ಜನರನ್ನು ವಿಮೋಚನೆ ಗೊಳಿಸಿದರು. ದೇವರಾಜ ಅರಸು ಅವರು ಇಂದಿರಾಗಾಂಧಿ ಅವರು ತಂದಂತಹ ಕಾನೂನುಗಳನ್ನು ಕರ್ನಾಟದಲ್ಲಿ ಯಶಸ್ವಿಯಾಗಿ ಜಾರಿಗೆ ತಂದರು ಎಂದು ಹೇಳಿದರು.

ರಾಜ್ಯದಲ್ಲಿ 20 ಸಾವಿರ ಜನ ಜೀತಪದ್ಧತಿಯಿಂದ ಮುಕ್ತರಾಗಿದ್ದಾರೆ. ದೇವದಾಸಿ ಪದ್ಧತಿಯಲ್ಲಿ 40 ರಿಂದ 50 ಸಾವಿರ ಜನ, ಸಫಾಯಿ ಕರ್ಮಚಾರಿಗಳು 30 ಸಾವಿರ ಮತ್ತು ಮ್ಯಾನುವಲ್ ಸ್ಕಾವೆಂಜರ್ಸ್‌ 7ಸಾವಿರ ಜನ ಇದ್ದಾರೆ. ಇವರಿಗೆ ಶಾಶ್ವತವಾದ ಪರಿಹಾರವನ್ನು ಹಾಗೂ ಪುನರ್ವಸತಿಯನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಭೆ ನಡೆಸಿ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗಿದೆ ಎಂದರು.

ಶಿಕ್ಷಣವೆಂಬುದು ಹುಲಿಯ ಹಾಲಿನಂತೆ ಅದನ್ನು ಕುಡಿದವನು ಘರ್ಜಿಸಲೇ ಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದಾರೆ. ಹೀಗಾಗಿ ನಮ್ಮ ಮಕ್ಕಳನ್ನು ಶಿಕ್ಷಣದ ದಿಕ್ಕಿಗೆ ಸಾಗಿಸಬೇಕು. ವರ್ಣಾಶ್ರಮ ನೀತಿಯಲ್ಲಿ ಬರುವ ಬ್ರಾಹ್ಮಣರು, ಕ್ಷತ್ರೀಯರು ಹಾಗೂ ವೈಶ್ಯರಲ್ಲಿ ಜೀತ ಮಾಡುವವರು ಸಿಗುವುದಿಲ್ಲ. ಹೀಗಾಗಿ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ ಜೀತಪದ್ದತಿಯ ಒಂದು ಮುಖದ ಪ್ರದರ್ಶನ. ಇದನ್ನು ಉಗ್ರವಾಗಿ ಖಂಡನೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ, ಜೀವಿಕ ಸಂಸ್ಥಾಪಕ ಡಾ.ಕಿರಣ್ ಕಮಲ್ ಪ್ರಸಾದ್, ನ್ಯಾಷನಲ್ ಲಾ ಕಾಲೇಜಿನ ಪ್ರಾಧ್ಯಪಕ ಪ್ರೊ.ಬಾಬು ಮ್ಯಾಥೋ, ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ದಸಂಸ ಸಂಚಾಲಕ ಗುರುಪ್ರಸಾದ್ ಕರಗೋಡು, ದಸಂಸ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ, ಮಾಜಿ ಮೇಯರ್ ಪುರುಷೋತ್ತಮ್, ತುಂಬಲಾ ರಾಮಣ್ಣ, ಹೈರಿಗೆ ಶಿವರಾಜು, ರಾಮಸ್ವಾಮಿ, ಗೋವಿಂದರಾಜು, ಒಕ್ಕೂಟದ ಅಧ್ಯಕ್ಷ ಮಹದೇವು, ಮಲ್ಲಿಗಮ್ಮ, ಜಿಲ್ಲಾ ಸಂಚಾಲಕ ಬಸವರಾಜು, ತಾಲೂಕು ಅಧ್ಯಕ್ಷ ಗಣೇಶ್ ಕೆ.ಎಡತೊರೆ, ಕಾರ್ಯದರ್ಶಿ ಮಂಜು ಕೊತ್ತೇಗಾಲ, ಜಿ.ಟಿ.ಸಂಜೀವಮೂರ್ತಿ, ಶಿಡ್ಲಗಟ್ಟ ಶ್ರೀನಿವಾಸ್, ಶಿಡ್ಲಗಟ್ಟ ನರಸಿಂಹಪ್ಪ, ಜೀವಿಕ ಸಂಘಟನೆಯ ಪದಾಧಿಕಾರಿಗಳು ಇದ್ದರು.

ಕರ್ನಾಟಕ ಜೀತದಾಳು ಮತ್ತು ಕಾರ್ಮಿಕರ ಒಕ್ಕೂಟದಿಂದ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಬೇಡಿಕೆಗಳನ್ನು ಸಲ್ಲಿಸಲಾಯಿತು.

2017ರ ಕೇಂದ್ರ ಸರಕಾರ ಮತ್ತು 2022ರ ಕರ್ನಾಟಕ ರಾಜ್ಯದ ಎಸ್.ಒ.ಪಿ.ಗಳನ್ನು ತಕ್ಷಣವೇ ರದ್ದು ಮಾಡಬೇಕು. ಜೀತ ವಿಮುಕ್ತರಿಗೆ ಸಂಪೂರ್ಣ ಪುನರ್ವಸತಿ ಸೌಲಭ್ಯಗಳನ್ನು ಶೀಘ್ರದಲ್ಲೆ ಒದಗಿಸಬೇಕು.

ಎಸ್‌ಸಿ, ಎಸ್‌ಟಿಗಳಿಗೆ ಅನ್ವಯವಾಗುವ ಎಸ್‌ಸಿಪಿ ಕಾನೂನಿನಡಿ ಜೀವಿತದಿಂದ ಬಿಡುಗಡೆಗೊಂಡ 7ಸಾವಿರ ಮಂದಿ ಜೀತವಿಮುಕ್ತರಿಗೆ 500 ಕೋಟಿ ರೂ.ಗಳ ವಿಶೇಷ ಪುನರ್ವಸತಿ ಪ್ಯಾಕೇಜ್ ಅನ್ನು ಮಂಜೂರು ಮಾಡಬೇಕು. ಜೀತ ವಿಮುಕ್ತರಿಗೆ ಕಡ್ಡಾಯವಾಗಿ 5 ಎಕರೆ ಜಮೀನು ಮತ್ತು ನಿವೇಶನ/ಮನೆಗಳು ಮಂಜೂರು ಮಾಡಬೇಕು. ಜೀತ ಮುಕ್ತ ಮಹಿಳೆಯರ ಸ್ವ-ಸಹಾಯಕ ಸಂಘಗಳಿಗೆ ಮಹಿಳೆಯರಿಗೆ ನೇರವಾಗಿ ಸಾಲ ಸೌಲಭ್ಯಗಳನ್ನು ಕೂಡಬೇಕು.

ಜೀತಮುಕ್ತರು ಮತ್ತು ಕೃಷಿ ಕಾರ್ಮಿಕರು ಹಾಗೂ ಅವರ ಕುಟುಂಬದವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಬೆಳವಣಿಗೆಯ ಅಭಿವೃದ್ಧಿಗಾಗಿ ತರಬೇತಿಗಳು, ಜೀವನಾಧಾರಿತ ಕೌಶಲ್ಯಗಳು ಮತ್ತು ಸ್ವಾವಲಂಬನೆ ಬದುಕಿಗಾಗಿ ಬೇಕಾಗಿರುವ ವಿವಿಧ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳಬೇಕು.

ಎಚ್.ಡಿ.ಕೋಟೆ ಹ್ಯಾಂಡ್‌ಪೋಸ್ಟ್ ನಲ್ಲಿರುವ ಕಟ್ಟಡ ಮತ್ತು ಕಾಂಪೌಂಡ್ ಮತ್ತು ಇತರ ಕಾಮಕಾರಿಗಳಿಗೆ 2 ಕೋಟಿ ರೂ.ಅನುದಾನವನ್ನು ಮಂಜೂರು ಮಾಡಿಸಿಕೊಡಬೇಕು ಎಂದು ಬೇಡಿಕೆ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X