ಬೆಂಗಳೂರು | ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ: ಓರ್ವ ವಶಕ್ಕೆ

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು, ಆ.12: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹತ್ಯೆ ಮಾಡಿರುವ ಘಟನೆ ಇಲ್ಲಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಮಾಚೋಹಳ್ಳಿಯಲ್ಲಿರುವ ಡಿ-ಗ್ರೂಪ್ ಲೇಔಟ್ನಲ್ಲಿ ನಡೆದಿದೆ.
ವಿಜಯ್ ಕುಮಾರ್ (39) ಹತ್ಯೆಯಾದ ಉದ್ಯಮಿ ಎಂದು ಗುರುತಿಸಲಾಗಿದ್ದು, ಆ.11ರ ಸೋಮವಾರ ಸಂಜೆ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಪ್ರಕರಣ ಸಂಬಂಧ ಅನುಮಾನದ ಹಿನ್ನೆಲೆಯಲ್ಲಿ ಓರ್ವರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೆಲಸದ ನಿಮಿತ್ತವಾಗಿ ಆ.11ರ ಸೋಮವಾರ ಸಂಜೆ ಮನೆಯಿಂದ ಹೊರಗೆ ಹೋದ ವಿಜಯ್ ಕುಮಾರ್, ಮಾಚೋಹಳ್ಳಿಯ ಡಿ-ಗ್ರೂಪ್ ಲೇಔಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಪರಿಚಿತ ದುಷ್ಕರ್ಮಿಗಳು ವಿಜಯ್ ಕುಮಾರ್ನನ್ನು ಹತ್ಯೆಗೈದು ಪರಾರಿಯಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
Next Story





