Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಸರ್ವಾಧಿಕಾರ ತೊಲಗಿಸುವ ಪ್ರತಿಜ್ಞೆ...

‘ಸರ್ವಾಧಿಕಾರ ತೊಲಗಿಸುವ ಪ್ರತಿಜ್ಞೆ ಮಾಡಿ’ : ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ

ವಾರ್ತಾಭಾರತಿವಾರ್ತಾಭಾರತಿ15 Aug 2025 6:21 PM IST
share
‘ಸರ್ವಾಧಿಕಾರ ತೊಲಗಿಸುವ ಪ್ರತಿಜ್ಞೆ ಮಾಡಿ’ : ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ

ಬೆಂಗಳೂರು, ಆ.15: ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ, ಚುನಾವಣೆ ವ್ಯವಸ್ಥೆ ರಕ್ಷಿಸಿ, ತೆರಿಗೆ ಹಂಚಿಕೆಯಲ್ಲಿನ ತಾರತಮ್ಯ ವಿರುದ್ಧ ಹೋರಾಡಿ, ಸರ್ವಾಧಿಕಾರ ತೊಲಗಿಸುವ ಪ್ರತಿಜ್ಞೆ ಮಾಡಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ ನೀಡಿದರು.

ಶುಕ್ರವಾರ 79ನೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಾವೆಲ್ಲರೂ ಇಂದು ಪ್ರಜಾಪ್ರಭುತ್ವ ಉಳಿಸುತ್ತೇನೆ, ಸಂವಿಧಾನ, ದೇಶದ ಚುನಾವಣಾ ವ್ಯವಸ್ಥೆ ಹಾಗೂ ಮತಗಳನ್ನು ಕಾಪಾಡುತ್ತೇನೆ, ತೆರಿಗೆ ಹಂಚಿಕೆಯಲ್ಲಿನ ತಾರತಮ್ಯ ವಿರುದ್ಧ ಹೋರಾಡುತ್ತೇನೆ, ಸರ್ವಾಧಿಕಾರ ತೊಲಗಿಸಿ ಮತ್ತೆ ಜನಪರ ಸರಕಾರ ತರುತ್ತೇವೆ ಎಂಬ ಶಪಥಗಳನ್ನು ಮಾಡಬೇಕಿದೆ ಎಂದು ಕರೆ ಕೊಟ್ಟರು.

2029ರ ವೇಳೆಗೆ 2ನೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುನ್ನುಡಿ ಬರೆಯಬೇಕಾದ ಅಗತ್ಯವಿದೆ. ಸ್ವಾತಂತ್ರ್ಯ ದಿನ ಭಾರತೀಯರು ಹಾಗೂ ಕನ್ನಡಿಗರಾದ ನಮ್ಮ ಪಾಲಿಗೆ ಹೆಮ್ಮೆಯ ದಿನ. ದೇಶದ ಮೊಟ್ಟ ಮೊದಲ ಸ್ವಾತಂತ್ರ್ಯ ಸಂಗ್ರಾಮವಾಗಿದ್ದು ಕರ್ನಾಟಕದಲ್ಲೆ. ಶಿವಮೊಗ್ಗ ಜಿಲ್ಲೆಯ ಈಸೂರು, ಸ್ವಾತಂತ್ರ್ಯ ಸಂಗ್ರಾಮ ಘೋಷಿಸಿದ ಮೊದಲ ಗ್ರಾಮ ಎಂದು ಅವರು ಸ್ಮರಿಸಿದರು.

ಬ್ರಿಟಿಷರನ್ನು ಮೊದಲು ಮಣಿಸಿದ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ಕಾಂಗ್ರೆಸ್ ಮುಖಂಡ ಹನುಮಂತರಾವ್ ಮುಖಂಡತ್ವದಲ್ಲಿ 1930ರಲ್ಲಿ ಅಂಕೋಲದಲ್ಲಿ ಉಪ್ಪಿನ ಸತ್ಯಾಗ್ರಹ ಪ್ರಾರಂಭವಾಗಿದ್ದನ್ನು ನಾವು ಸ್ಮರಿಸಿಕೊಳ್ಳಬೇಕಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಆರೂವರೆ ಲಕ್ಷ ಜನ ಕಾಂಗ್ರೆಸಿಗರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಸಾವಿರಾರು ಮಂದಿ ತಮ್ಮ ಮನೆ, ಮಠ ಹಾಗೂ ಜೀವನವನ್ನೆ ತ್ಯಾಗ ಮಾಡಿದ್ದಾರೆ. ನಾವು ರಾಷ್ಟ್ರಧ್ವಜ ಹಾರಿಸಿ, ರಾಷ್ಟ್ರಗೀತೆ ಹಾಡಿದರೆ ಸಾಲದು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷ ಎಂಬುದನ್ನು ಹೊಸ ಪೀಳಿಗೆಗೆ ತಿಳಿಸಬೇಕಾಗಿದೆ ಎಂದು ಅವರು ಹೇಳಿದರು.

ಎಲ್ಲಿಯವರೆಗೆ ನಮಗೆ ಈ ಧೈರ್ಯ ಬರುವುದಿಲ್ಲವೊ ಅಲ್ಲಿಯವರೆಗೆ ದೇಶದ್ರೋಹಿಗಳು ನಮಗೆ ರಾಷ್ಟ್ರಭಕ್ತಿಯ ಪಾಠ ಮಾಡುತ್ತಲೆ ಇರುತ್ತಾರೆ. ಮಹಾತ್ಮ ಗಾಂಧಿ, ನೆಹರೂ, ಸರ್ದಾರ್ ಪಟೇಲ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ ಎಂಬ ಸುಳ್ಳು ಸುದ್ದಿ ಹಬ್ಬಿಸಿಕೊಂಡು ಬರುತ್ತಿದ್ದಾರೆ. ನೆಹರೂ 9 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಕಾಂಗ್ರೆಸ್ ನೇತೃತ್ವದಲ್ಲಿ ಅಂದು ದೇಶ ಒಗ್ಗೂಡಿತ್ತು ಎಂದು ಶಿವಕುಮಾರ್ ತಿಳಿಸಿದರು.

ಸ್ವಾತಂತ್ರ ಹೋರಾಟದಲ್ಲಿ ಮೌಲಾನ ಆಝಾದ್, ದಾದಾಬಾಯಿ ನೌರೋಜಿ, ಬಾಲಗಂಗಾಧರ ತಿಲಕ್, ಮಹತ್ಮಾ ಗಾಂಧಿ, ನೆಹರೂ, ಅಂಬೇಡ್ಕರ್, ವಲ್ಲಭಬಾಯಿ ಪಟೇಲ್ ಸುಭಾಷ್‌ ಚಂದ್ರ ಬೋಸ್, ಭಗತ್ ಸಿಂಗ್, ಚಂದ್ರಶೇಖರ್ ಆಝಾದ್, ಸರೋಜಿನಿ ನಾಯ್ಡು, ಲಾಲಾಲಜಪತರಾಯ್, ಗೋಪಾಲಕೃಷ್ಣ ಗೋಖಲೆ, ಬಿಪಿನ್ ಚಂದ್ರಪಾಲ್ ಸೇರಿದಂತೆ ಅನೇಕ ಮಹನೀಯರ ಹೋರಾಟವಿದೆ ಎಂದು ಅವರು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ, ರಾಷ್ಟ್ರಗೀತೆ, ರಾಷ್ಟ್ರಧ್ವಜ ತಂದುಕೊಟ್ಟಿದ್ದು ಕಾಂಗ್ರೆಸ್ ಎಂಬುದನ್ನು ಸಾರಬೇಕು. ನಮ್ಮ ಹೆಗಲ ಮೇಲೆ ತಿರಂಗಾ, ಎದೆಯ ಮೇಲೆ ಸಂವಿಧಾನವಿದೆ. ಮಾನಸಿಕ, ಕಾನೂನಾತ್ಮಕ, ವೈಯಕ್ತಿಕ, ಧಾರ್ಮಿಕ, ಬೌದ್ಧಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸ್ವಾತಂತ್ರ್ಯವನ್ನು ದೇಶಕ್ಕೆ ಕೊಟ್ಟವರು ಕಾಂಗ್ರೆಸ್. ಸಂವಿಧಾನದ ಅಡಿಯಲ್ಲಿ ಬದುಕುವ, ತಮಗೆ ಬೇಕಾದ ಜನಪ್ರತಿನಿಧಿ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಕೊಟ್ಟಿದ್ದೂ ಕಾಂಗ್ರೆಸ್ ಎಂದು ಶಿವಕುಮಾರ್ ತಿಳಿಸಿದರು.

ಕುತಂತ್ರಗಳ ಮೂಲಕ ಈ ಸ್ವಾತಂತ್ರ್ಯಕ್ಕೆ ಧಕ್ಕೆ ತರುವವರನ್ನು ಸಂವಿಧಾನ ವಿರೋಧಿಗಳು ಮಾತ್ರವಲ್ಲ, ಜೀವನದ ವಿರೋಧಿಗಳು, ಸಮಾಜಘಾತುಕರು, ಸ್ವಾತಂತ್ರ್ಯದ ವೈರಿಗಳು ಎಂದು ಪರಿಗಣಿಸಬೇಕು. ದೇಶದ ಹಿತದೃಷ್ಟಿಯಿಂದ ಸಂವಿಧಾನಕ್ಕೆ ಆಗುವ ಮೋಸ ತಡೆಯಬೇಕು ಎಂದು ಅವರು ಕರೆ ನೀಡಿದರು.

ಮತ ಕಳ್ಳತನ ದೇಶದ ಗೌರವಕ್ಕೆ ಧಕ್ಕೆ ತರುವಂತಾಗಿದೆ. ಇದರ ವಿರುದ್ಧದ ಹೋರಾಟಕ್ಕೆ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಕರ್ನಾಟಕದಿಂದಲೆ ಮುನ್ನುಡಿ ಬರೆದಿದ್ದಾರೆ. ಇದಕ್ಕಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ. ಕಾಂಗ್ರೆಸ್ ಸರಕಾರ ಜನರ ಬದುಕಿನ ಬಗ್ಗೆ ಆಲೋಚಿಸಿ ರಾಜಕಾರಣ ಮಾಡುತ್ತಿದೆ. ಆದರೆ ವಿರೋಧ ಪಕ್ಷಗಳು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಮುಂದಿನ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾವು ಸಜ್ಜಾಗಬೇಕಿದೆ. ಮುಂದಿನ ಆರು ತಿಂಗಳಲ್ಲಿ ಚುನಾವಣೆ ನಡೆಸಲು ಸರಕಾರ ತೀರ್ಮಾನಿಸಿದ್ದು, ನೀವೆಲ್ಲರೂ ಇದಕ್ಕಾಗಿ ಶ್ರಮಿಸಬೇಕು. 2028ರಲ್ಲಿ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಜನರ ಬದುಕಿಗೆ ಹೊಸರೂಪ ನೀಡಲು ಕೆಲಸ ಮಾಡಬೇಕು ಎಂದು ಶಿವಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X