ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಹುದ್ದೆಗಳ ನೇಮಕಾತಿ ಪ್ರಕ್ರಿಯೆ; ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು, ಆ.16: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 184 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸುವ ಮೂಲಕ ಪರೀಕ್ಷಾ ಪ್ರಕ್ರಿಯೆಯನ್ನು ನಡೆಸಿ ಪ್ರಸ್ತುತ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಅಧಿಕಾರಿಗಳ-12 ಹುದ್ದೆಗಳು, ಕ್ಷೇತ್ರ ನಿರೀಕ್ಷಕರು-60 ಹುದ್ದೆಗಳು, ಪ್ರಥಮ ದರ್ಜೆ ಸಹಾಯಕರು-12 ಹುದ್ದೆಗಳು, ದ್ವಿತೀಯ ದರ್ಜೆ ಸಹಾಯಕರು-100 ಹುದ್ದೆಗಳ ಆಯ್ಕೆಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಆ.14ರಂದು ಮಂಡಳಿಯ ವೆಬ್ಸೈಟ್ https://karbwwb.karnataka.gov.in ಮತ್ತು ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





