ಸಿಎಂ ಬದಲಾವಣೆ ಹೇಳಿಕೆ: ಶಾಸಕ ಶಿವಗಂಗಾರಿಗೆ ಶೋಕಾಸ್ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ವಿಚಾರವಾಗಿ ಪಕ್ಷಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆ ನೀಡಿರುವ ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾರಿಗೆ ಕೆಪಿಸಿಸಿ ಶಿಸ್ತು ಸಮಿತಿಯು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.
ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟು ಮಾಡುವ ರೀತಿಯ ಹೇಳಿಕೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ತಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆ ಆಗಿರುತ್ತದೆ. ಈ ಅಶಿಸ್ತಿನ ಹೇಳಿಕೆಗಳನ್ನು ಕೆಪಿಸಿಸಿ ಶಿಸ್ತು ಸಮಿತಿಯ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಕಾರಣ ನೀಡಿದ ಈ ನೋಟಿಸ್ ತಲುಪಿದ 7 ದಿನಗಳಲ್ಲಿ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡಬೇಕು ಎಂದು ಸೂಚಿಸಲಾಗಿದೆ ಎಂದು ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯ ಸಂಚಾಲಕ ನಿವೇದಿತ್ ಆಳ್ವ ನೋಟಿಸ್ ತಿಳಿಸಿದ್ದಾರೆ.
Next Story





