Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಜೆಪಿಯಿಂದ ‘ಧರ್ಮದ ಉಳಿವಿಗಾಗಿ ಧರ್ಮ...

ಬಿಜೆಪಿಯಿಂದ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ' ಹೋರಾಟ: ಬಿ.ವೈವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ21 Aug 2025 3:23 PM IST
share
ಬಿಜೆಪಿಯಿಂದ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಹೋರಾಟ: ಬಿ.ವೈವಿಜಯೇಂದ್ರ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರವಾಗಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಆ.22ರಿಂದ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ' ಹೋರಾಟ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ದಿನೇಶ್ ಗುಂಡೂರಾವ್ ನೀಡಿರುವ ಹೇಳಿಕೆಗಳು ಎಲ್ಲರಿಗೂ ತಿಳಿದಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ವಿಚಾರವಾಗಿ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ನಮಗೂ ಅನುಮಾನಗಳು ಕಾಡುತ್ತಿವೆ. ರಾಜ್ಯ ಸರ್ಕಾರದ ಈ ಧೋರಣೆಯನ್ನು ಖಂಡಿಸಿ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ’ ಪ್ರತಿಭಟನೆಯನ್ನು ಶುಕ್ರವಾರದಿಂದ ಮುಂದಿನ ವಾರದವರೆಗೂ ರಾಜ್ಯದ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಮಾಡಲಿದ್ದೇವೆ ಎಂದು ಪ್ರಕಟಿಸಿದರು.

ಕಳೆದ ಒಂದು ತಿಂಗಳಿಂದ ಧರ್ಮಸ್ಥಳ ವಿಚಾರದಲ್ಲಿ ಯಾವ ಯಾವ ಬೆಳವಣಿಗೆ ಆಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ರಾಜ್ಯ ಸರ್ಕಾರ ಧರ್ಮಸ್ಥಳ ವಿಚಾರದಲ್ಲಿ ತನಿಖೆ ನಡೆಸಬೇಕೆಂದು ಎಸ್ಐಟಿ ರಚಿಸಿದಾಗ ಅದನ್ನು ಸ್ವಾಗತ ಮಾಡಿದ್ದೆವು; ಈ ವಿಚಾರದಲ್ಲಿ ಸಮಗ್ರವಾಗಿ, ಪಾರದರ್ಶಕವಾಗಿ ತನಿಖೆಯಾಗಬೇಕು ಎಂದು ರಾಜ್ಯ ಸರಕಾರಕ್ಕೆ ನಾವು ಸಂಪೂರ್ಣವಾಗಿ ಬೆಂಬಲ ನೀಡಿದ್ದೆವು. ಇದು ಬಿಜೆಪಿಯ ಸ್ಪಷ್ಟ ನಿಲುವಾಗಿದೆ ಎಂದು ತಿಳಿಸಿದರು.

ತನಿಖೆ ವಿಚಾರದಲ್ಲಿ ಇಂದು ಕೂಡ ನಾವು ಹಿಂದೆ ಸರಿದಿಲ್ಲ. ಆದರೆ ತನಿಖೆಯ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಶ್ರೀ ಕ್ಷೇತ್ರದ ಬಗ್ಗೆ ಅಪಪ್ರಚಾರಗಳು ನಡೆದುಕೊಂಡು ಬಂದಿವೆ. ಇಂಥ ಅಪಪ್ರಚಾರವನ್ನು ನಿಲ್ಲಿಸುವ, ತಡೆಯುವ ಮತ್ತು ಕಟ್ಟಿಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ ವಿಚಾರದಲ್ಲಿ ಕ್ರಮ ಏಕೆ ಇಲ್ಲ

ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಬೇರೆ ಬೇರೆ ಸಂದರ್ಭದಲ್ಲಿ 24 ಗಂಟೆ ಒಳಗಾಗಿ ಎಫ್ಐಆರ್ ದಾಖಲಿಸುತ್ತಾರೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನೆಪದಲ್ಲಿ ದಕ್ಷಿಣ ಕನ್ನಡದಲ್ಲಿ 81 ವರ್ಷದ ಬಿಜೆಪಿ ಹಿರಿಯ ಕಾರ್ಯಕರ್ತ ಪೂವಪ್ಪರ ಮನೆಗೆ ರಾತ್ರಿ 1 ಗಂಟೆಗೆ ಪೊಲೀಸ್ ಅಧಿಕಾರಿಗಳು ಹೋಗಿ ಪೋಟೋ ತೆಗೆಯುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವ ಕಾರ್ಯಕರ್ತರು ಪೋಸ್ಟ್ ಮಾಡಿದರೆ ತಡ ಮಾಡದೇ ಅವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ಹಾಕಿ ಎಫ್ಐಆರ್ ದಾಖಲಿಸಿ ಬಂಧಿಸಿರುವುದನ್ನು ಕಳೆದ ಎರಡೂವರೆ ವರ್ಷಗಳಲ್ಲಿ ನೋಡಿದ್ದೇವೆ. ಆದರೆ ಧರ್ಮಸ್ಥಳದ ವಿಚಾರದಲ್ಲಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸರ್ಕಾರ ಏಕೆ ಕ್ರಮ ತೆಗದುಕೊಂಡಿಲ್ಲ ಎಂದು ವಿಜಯೇಂದ್ರ ಪ್ರಶ್ನಿಸಿದರು.

ಧರ್ಮಸ್ಥಳ ವಿಚಾರ ಬಂದಾಗ ಕೋಟ್ಯತರ ಭಕ್ತರ ಭಾವನೆಗೆ ಧಕ್ಕೆ ತರುತ್ತಿರುವ ಈ ಅಪಪ್ರಚಾರಗಳನ್ನು ರಾಜ್ಯ ಸರಕಾರ ತಡೆಯುವ ಕೆಲಸವನ್ನು ಮಾಡಲಿಲ್ಲ ಎಂದು ಆಕ್ಷೇಪಿಸಿದರು. ಇದು ವ್ಯವಸ್ಥಿತವಾಗಿರುವ ಷಡ್ಯಂತ್ರ. ಈ ಅಪಪ್ರಚಾರವನ್ನು ತಡೆಯುವ ಇಚ್ಛಾಶಕ್ತಿ ರಾಜ್ಯ ಸರ್ಕಾರಕ್ಕೆ ಇರಲಿಲ್ಲವೇ? ಅಥವಾ ರಾಜ್ಯ ಸರ್ಕಾರವೇ ಈ ಅಪಪ್ರಚಾರಕ್ಕೆ ಕುಮ್ಮಕ್ಕು ನೀಡುತ್ತಿದಿಯೇ ಎಂದು ಅವರು ಪ್ರಶ್ನಿಸಿದರು.

ಈ ಎಲ್ಲ ಗುಮಾನಿಗಳು ಇಂದು ರಾಜ್ಯಾದ್ಯಂತ ಮತ್ತು ರಾಜ್ಯದ ಅಸಂಖ್ಯಾತ ಭಕ್ತರಲ್ಲಿ ಚರ್ಚೆ ಆಗುತ್ತಿದೆ. ಇದೆಲ್ಲದರ ನಡುವೆಯೂ ಇಂದು ಯಾವ ದುಷ್ಟಶಕ್ತಿಗಳು ಈ ಷಡ್ಯಂತ್ರದ ಹಿಂದೆ ಕೆಲಸ ಮಾಡುತ್ತಿವೆ?; ಯಾವ ಯಾವ ಸಂಘಟನೆಗಳು ಇದಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿವೆ? ಇದನ್ನು ತಡೆಯುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿಲ್ಲ ಎಂದು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X