Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆರೆಸ್ಸೆಸ್ ಗೆ ತಾಕಿದ ಗಾಳಿಯೂ ನಮಗೆ...

ಆರೆಸ್ಸೆಸ್ ಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು: ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ24 Aug 2025 11:23 AM IST
share
ಆರೆಸ್ಸೆಸ್ ಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು: ಪ್ರಿಯಾಂಕ್ ಖರ್ಗೆ
ಡಿಸಿಎಂ ಡಿಕೆಶಿ ಆರೆಸ್ಸೆಸ್ ಗೀತೆ ಹಾಡಿದ ಬೆನ್ನಿಗೆ ಆ ಸಂಘಟನೆ ವಿರುದ್ಧ ಹರಿಹಾಯ್ದ ಸಚಿವ

ಬೆಂಗಳೂರು: ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ “ಆರೆಸ್ಸೆಸ್ ಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು“ ಎಂಬ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆರೆಸ್ಸೆಸ್ ಗೀತೆ ಹಾಡಿದ ಬೆನ್ನಿಗೆ ಆ ಸಂಘಟನೆ ವಿರುದ್ಧ ಹರಿಹಾಯ್ದಿರುವ ಸಚಿವ ಪ್ರಿಯಾಂಕ್ ಖರ್ಗೆ, ಜನಾಂಗೀಯ ದ್ವೇಷ, ವರ್ಣಾಶ್ರಮದ ಕ್ರೌರ್ಯಗಳನ್ನು ಒಳಗೊಂಡ ನಾಝಿವಾದ, ಮನುವಾದಗಳನ್ನೇ ನರನಾಡಿ, ರಕ್ತಗಳಲ್ಲಿ ಪ್ರವಾಹಿಸಿಕೊಂಡಿರುವ ಆರೆಸ್ಸೆಸ್ ಎಂಬ ವಿಷಕಾರಿ ಸಂಘಟನೆಯನ್ನು ಕಾಂಗ್ರೆಸ್ ಪಕ್ಷವು ಎಂದಿಗೂ ಶತ್ರುವಾಗಿಯೇ ನೋಡುತ್ತದೆ. ಏಕೆಂದರೆ, ಆರೆಸ್ಸೆಸ್ ಸಂವಿಧಾನಕ್ಕೆ ಶತ್ರು, ಆರೆಸ್ಸೆಸ್ ಏಕತೆಗೆ ಶತ್ರು, ಆರೆಸ್ಸೆಸ್ ರಾಷ್ಟ್ರಧ್ವಜಕ್ಕೆ ಶತ್ರು, ಆರೆಸ್ಸೆಸ್ ರಾಷ್ಟ್ರಗೀತೆಗೆ ಶತ್ರು, ಆರೆಸ್ಸೆಸ್ ಏಕತೆಗೆ, ಸಾರ್ವಭೌಮತೆಗೆ ಶತ್ರು ಎಂದವರು ಪ್ರತಿಪಾದಿಸಿದ್ದಾರೆ.

ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ “RSSಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು“ ಎಂಬ ಪ್ರತಿಜ್ಞೆ ಕೈಗೊಳ್ಳಬೇಕು.ಜನಾಂಗೀಯ ದ್ವೇಷ, ವರ್ಣಾಶ್ರಮದ ಕ್ರೌರ್ಯಗಳನ್ನು ಒಳಗೊಂಡ ನಾಜಿವಾದ, ಮನುವಾದಗಳನ್ನೇ ನರ ನಾಡಿ, ರಕ್ತಗಳಲ್ಲಿ ಪ್ರವಾಹಿಸಿಕೊಂಡಿರುವ RSS ಎಂಬ ವಿಷಕಾರಿ ಸಂಘಟನೆಯನ್ನು ಕಾಂಗ್ರೆಸ್ ಪಕ್ಷವು…

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 23, 2025

ಬಾಬಾ ಸಾಹೇಬರು, ಸರ್ದಾರ್ ಪಟೇಲರು ದಶಕಗಳ ಹಿಂದೆಯೇ ಆರೆಸ್ಸೆಸ್ ಕುರಿತು ನಿಷ್ಠುರವಾಗಿ ಎಚ್ಚರಿಕೆಯ ಸಂದೇಶ ನೀಡಿ ಹೋಗಿದ್ದಾರೆ, ಆ ಮಹನೀಯರ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿ ಮನುವಾದಿಗಳನ್ನು ದೂರ ಇಡಬೇಕಿದೆ. ಬ್ರಿಟಿಷರೊಂದಿಗೆ ಕೈಜೋಡಿಸಿ ಭಾರತ ವಿರೋಧಿಯಾಗಿ ನಡೆದುಕೊಂಡಿದ್ದ ಆರೆಸ್ಸೆಸ್ ಸ್ವಾತಂತ್ರ್ಯದ ನಂತರ ಐಕ್ಯದ ವಿರೋಧಿ ಚಟುವಟಿಕೆಗಳನ್ನು ಇನ್ನಷ್ಟು ಹೆಚ್ಚಿಸಿತು. ಸಂಘ ಪರಿವಾರದ ಅಪಾಯವನ್ನು ಅಂದೇ ಊಹಿಸಿದ ಸರ್ದಾರ್ ಪಟೇಲರು ನಿಷೇಧ ಹೇರಿದ್ದರು ಎಂದು ತಿಳಿಸಿದ್ದಾರೆ.

“ನಮ್ಮ ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರದ ಶಕ್ತಿಗಳನ್ನು ಬೇರುಸಹಿತ ನಿರ್ಮೂಲನೆ ಮಾಡಬೇಕಿದೆ, ಮತ್ತು ರಾಷ್ಟ್ರದ ಸ್ವಾತಂತ್ರ್ಯವನ್ನು ಅಪಾಯಕ್ಕೆ ಸಿಲುಕಿಸಲು ಮತ್ತು ದೇಶದ ಹೆಸರನ್ನು ಕಳೆಗುಂದಿಸಲು ಕೆಲಸ ಮಾಡುತ್ತಿರುವ ಆರೆಸ್ಸೆಸ್ ಅನ್ನು ನಿಷೇಧಿಸುತ್ತಿದ್ದೇವೆ“ ಇದು ಸರ್ದಾರ್ ಪಟೇಲರು ಫೆಬ್ರವರಿ 4, 1948 ರಂದು ಬಿಡುಗಡೆ ಮಾಡಿದ ಪ್ರಕಟಣೆ. ಪಟೇಲರ ಈ ಮಾತುಗಳನ್ನು ನಾವು ಸದಾ ಗಮನದಲ್ಲಿ ಇರಿಸಿಕೊಳ್ಳಬೇಕಿದೆ ಎಂದು ಪ್ರಿಯಾಂಕ್ ಹೇಳಿದ್ದಾರೆ.

ಸಂವಿಧಾನಕ್ಕೆ, ರಾಷ್ಟ್ರಧ್ವಜಕ್ಕೆ ನಿಷ್ಠರಾಗಿರುತ್ತೇವೆ ಎಂದು ಹೇಳಿ, ನಾಟಕವಾಡಿ ನಿಷೇಧವನ್ನು ತೆರವು ಮಾಡಿಸಿಕೊಂಡ ಆರೆಸ್ಸೆಸ್ ನಂತರ ಮುಂದುವರಿಸಿದ್ದು ಅದೇ ಸಂವಿಧಾನ ವಿರೋಧಿ ಕೃತ್ಯಗಳನ್ನೇ. ಈ ನೂರು ವರ್ಷಗಳಲ್ಲಿ ಆರೆಸ್ಸೆಸ್ ಈ ದೇಶಕ್ಕೆ ನೀಡಿದ ಕೇವಲ 10 ಕೊಡುಗೆಗಳನ್ನು ಹೇಳಲು ಬಿಜೆಪಿಗರಿಂದ ಮತ್ತು ಸಂಘ ಪರಿವಾರದವರಿಂದ ಸಾಧ್ಯವಾಗುವುದಿಲ್ಲ, ಇಂತಹ ಆರೆಸ್ಸೆಸ್ ನಿಂದ ಅಪಾಯವಿದೆಯೇ ಹೊರತು ಸಹಾಯವಿಲ್ಲ. ಸಂವಿಧಾನವನ್ನು ಒಪ್ಪದೆ ಕರಡು ಪ್ರತಿಯನ್ನು ಸುಟ್ಟು ಹಾಕಿದ್ದ, ರಾಷ್ಟ್ರಧ್ವಜವನ್ನು ಗೌರವಿಸದ, ಮಹಿಳೆಯರು, ಶೋಷಿತರನ್ನು ಮೂರನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುವ ಅಜೆಂಡಾ ಹೊಂದಿರುವ ಆರೆಸ್ಸೆಸ್ ಕಾಂಗ್ರೆಸ್ಸಿಗೆ ಮಾತ್ರವಲ್ಲ, ಈ ದೇಶದ ಏಕತೆಗೆ ಪರಮ ಶತ್ರು ಎನ್ನುವುದನ್ನು ಪ್ರತೀ ದೇಶಭಕ್ತನೂ ಗಮನದಲ್ಲಿರಿಸಿಕೊಳ್ಳಬೇಕು ಎಂದು ಪ್ರಿಯಾಂಕ್ ತನ್ನ 'ಎಕ್ಸ್' ಖಾತೆಯಲ್ಲಿ ಹಾಕಿರುವ ಪೋಸ್ಟ್ ನಲ್ಲಿ ಕರೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X